ದೇವೇಗೌಡ ಕುಟುಂಬದ ಆಸ್ತಿ ಪೆನ್​ಡ್ರೈವ್, ತೆನೆ ಹೊತ್ತ ಮಹಿಳೆ ಪೆನ್​ಡ್ರೈವ್ ಹೊರಬೇಕಾಗುತ್ತದೆ: ಡಿಕೆ ಸುರೇಶ್ ತಿರುಗೇಟು

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್​​ನ ಡಿಕೆ ಸಹೋದರರ ನಡುವಣ ವಾಕ್ಸಮರ ತಾರಕಕ್ಕೇರಿದೆ. ಡಿಕೆ ಸಹೋದರರನ್ನು ಕುಮಾರಸ್ವಾಮಿ ‘420’ ಎಂದು ಟೀಕಿಸಿದ್ದಕ್ಕೆ ಇಂದು ಡಿಕೆ ಸುರೇಶ್ ತಿರುಗೇಟು ನೀಡಿದ್ದು, ಮಾಜಿ ಪ್ರಧಾನಿ ದೇವೇಗೌಡರದ್ದು ಪೆನ್​ಡ್ರೈವ್ ಕುಟುಂಬ ಎಂದು ಲೇವಡಿ ಮಾಡಿದ್ದಾರೆ.

ದೇವೇಗೌಡ ಕುಟುಂಬದ ಆಸ್ತಿ ಪೆನ್​ಡ್ರೈವ್, ತೆನೆ ಹೊತ್ತ ಮಹಿಳೆ ಪೆನ್​ಡ್ರೈವ್ ಹೊರಬೇಕಾಗುತ್ತದೆ: ಡಿಕೆ ಸುರೇಶ್ ತಿರುಗೇಟು
ಡಿಕೆ ಸುರೇಶ್
Follow us
| Updated By: ಗಣಪತಿ ಶರ್ಮ

Updated on: May 02, 2024 | 12:31 PM

ಬೆಂಗಳೂರು, ಮೇ 2: ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಂಸದ ಡಿಕೆ ಸುರೇಶ್ ಸಹೋದರರದ್ದು ‘420 ಕುಟುಂಬ’ ಎಂಬ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಹೇಳಿಕೆಗೆ ಡಿಕೆ ಸುರೇಶ್ (DK Suresh) ತೀಕ್ಷ್ಣ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ಅವರ ಕುಟುಂಬವನ್ನು 420 ಎಂದು ಕರೆಯುವುದಿಲ್ಲ. ಏಕೆಂದರೆ ಅದು ಮಾಜಿ ಪ್ರಧಾನಿಗಳ ಕುಟುಂಬ. ಅವರ ಕುಟುಂಬ, ಅಭಿಮಾನಿಗಳಿಗೆ ಬೇಸರ ಆಗಬಹುದು. ದೇವೇಗೌಡರ ಕುಟುಂಬದ ಆಸ್ತಿ ಪೆನ್​ಡ್ರೈವ್​ ಎಂದು ವ್ಯಂಗ್ಯವಾಡಿದರು.

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಕುಟುಂಬದ ಆಸ್ತಿ ಪೆನ್​​ಡ್ರೈವ್ ಆಗಿದೆ. ಇನ್ನು ತೆನೆ ಹೊತ್ತ ಮಹಿಳೆ ಪೆನ್​ಡ್ರೈವ್ ಹೊರಬೇಕಾಗುತ್ತದೆ. ಇದು ಪೆನ್​​ಡ್ರೈವ್ ಕುಟುಂಬ ಎಂದು ಡಿಕೆ ಸುರೇಶ್​ ಲೇವಡಿ ಮಾಡಿದರು.

ಎಲ್ಲವನ್ನೂ ದೇಶ ಹಾಗೂ ರಾಜ್ಯದ ಜನ ಗಮನಿಸುತ್ತಿದ್ದಾರೆ. ಬೇಕಿದ್ದರೆ ಅವರಿಗೆ ಮನಸ್ಸಿಗೆ ಬಂದಹಾಗೆ ಬೈದುಕೊಳ್ಳಲಿ. ಹಾಸನದ ಹೆಣ್ಮಕ್ಕಳ ಮರ್ಯಾದೆ ಉಳಿಸಬೇಕು ಅಷ್ಟೇ. ನಾವು ಅವರನ್ನ ಕೆಣಕಿಲ್ಲ ಎಂದು ಸುರೇಶ್ ಹೇಳಿದರು.

ಪೆನ್​ಡ್ರೈವ್​​ ಬಿಡುಗಡೆ ಮಾಡಿದ್ದು ಅವರದೇ ಮೈತ್ರಿ ಪಾರ್ಟರ್ನರ್​. ಅವರ ಬಗ್ಗೆ ಮಾತನಾಡುವುದಕ್ಕೆ ಕುಮಾರಸ್ವಾಮಿಗೆ ಧೈರ್ಯ ಇಲ್ಲ. ಹಾಗಾಗಿ ನಮ್ಮ ಮೇಲೆ ಮಾತನಾಡುತ್ತಿದ್ದಾರೆ ಎಂದು ಸುರೇಶ್​ ಕಿಡಿ ಕಾರಿದರು.

ಏನು ಹೇಳಿದ್ದರು ಕುಮಾರಸ್ವಾಮಿ?

ಪ್ರಜ್ವಲ್ ರೇವಣ್ಣನ ಡ್ರೈವರ್ ಆಗಿದ್ದ ಕಾರ್ತಿಕ್​ನನ್ನ ಮಲೆಷ್ಯಾಗೆ ಕಳಿಸಿದ್ಯಾರು ಎಂದು ಪ್ರಶ್ನಿಸಿದ್ದ ಕುಮಾರಸ್ವಾಮಿ, ಆತ ವಿಡಿಯೋ ಬಿಡುಗಡೆ ಮಾಡಿದ್ದಾನಲ್ಲವೇ? ಆತ ಮಾತನಾಡಿರುವ ವಿಡಿಯೋ ಯಾರು ಮಾಡಿಸಿದ್ದು? ಅವನ‌ ಕೈಯಲ್ಲಿ ವಿಡಿಯೋ ಬಿಡುಗಡೆ ಮಾಡಿಸದರು. ಆತ ದೇವರಾಜೇಗೌಡ ಕೈಯಲ್ಲಿ ಪೆನ್​ಡ್ರೈವ್ ಕೊಟ್ಟಿದ್ದೆ ಎಂದು ಹೇಳಿದ್ದ. ಆದರೆ, ಈಗ ಈ ಚಿಲ್ಲರೆ ಸಹೋದರರು ಕುಮಾರಸ್ವಾಮಿನೇ ಬಿಟ್ಟಿರಬೇಕು ಎಂದು ಹೇಳಿಕೆ ಕೊಟ್ಟಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಕಾರ್ತಿಕ್​ನ ಮಲೆಷ್ಯಾಗೆ ಕಳಿಸಿದ್ಯಾರು? ನನ್ನ ಕೆಣಿಕಿದ್ದಾರೆ ಸುಮ್ಮನೆ ಬಿಡಲ್ಲ: ಕುಮಾರಸ್ವಾಮಿ ರೋಷಾವೇಶ

ಮುಂದುವರಿದು, ದೇವರಾಜೇಗೌಡ ಮೊದಲು ನನ್ನನ್ನು ಭೇಟಿಯಾಗಿದ್ದಾನೆಂದು ಈ 420ಗಳು ಹೇಳಿದ್ದಾರೆ. ಎಲ್ಲಿಂದ ವಿಡಿಯೋ ಮಾಡಿ ಬಿಟ್ಟಿದ್ದಾನೆ ಅದನ್ನು ಮೊದಲು ತಿಳಿದುಕೊಳ್ಳಿ. ಸುಲಭವಾಗಿ ನಮ್ಮನು ಕೆಣಕಿದರೆ ನಾವು ಸುಮ್ಮನೇ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ