SM Krishna: ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು

| Updated By: ಗಂಗಾಧರ​ ಬ. ಸಾಬೋಜಿ

Updated on: Apr 22, 2024 | 11:13 PM

ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ನಗರದ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು.

SM Krishna: ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು
ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ
Follow us on

ಬೆಂಗಳೂರು, ಏಪ್ರಿಲ್ 22: ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ (SM Krishna) ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ನಗರದ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆದರೆ ಇನ್ನು ಎರಡು ಅಥವಾ ಮೂರು ದಿನ ಆಸ್ಪತ್ರೆಯಲ್ಲಿ ಇರಲಿದ್ದು ಬಳಿಕ ಡಿಶ್ಚಾರ್ಜ್ ಆಗಲಿದ್ದಾರೆ ಎಂದು ವರದಿ ಆಗಿದೆ.

ಇತ್ತೀಚೆಗೆ ತೀವ್ರ ಜ್ವರದಿಂದ ಬಳಲಿದ್ದ ಎಸ್​ಎಂ ಕೃಷ್ಣ ಅವರು ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದರು. ಇದೀಗ ಮತ್ತೆ ತೀವ್ರ ಶೀತ ಮತ್ತು ಜ್ವರದಿಂದಾಗಿ ಬಳಲಿದ್ದು, ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: ಎಸ್​.ಎಂ ಕೃಷ್ಣರನ್ನ ಭೇಟಿಯಾದ ಮಂಡ್ಯ ಲೋಕಸಭಾ ಕ್ಷೇತ್ರ ಕೈ ಅಭ್ಯರ್ಥಿ ಸ್ಟಾರ್ ಮಂಜು

ಇತ್ತೀಚೆಗೆ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್​ ಚಂದ್ರು) ಅವರು ಎಸ್​ಎಂ ಕೃಷ್ಣ ಅವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದುಕೊಂಡಿದ್ದರು. ಈ ವೇಳೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶಾಸಕ ಗಾಣಿಗ ರವಿ, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಹೊನ್ನಲಗೆರೆ ರಾಮಕೃಷ್ಣ, ಮಾಜಿ ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ ಸದಾಶಿವ ನಗರದ ಎಸ್.ಎಂ.ಕೃಷ್ಣ ಅವರ ನಿವಾಸದಲ್ಲಿ ಭೇಟಿ ಮಾಡಿ ಸದ್ಯದ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ  ಮಾಡಿದರು. ಮಂಡ್ಯ ಕಾಂಗ್ರೆಸ್​ ನಾಯಕರ ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:57 pm, Mon, 22 April 24