ಈಗಷ್ಟೇ 18 ಆದವರಿಗೂ ಮತದಾನಕ್ಕೆ ಅವಕಾಶ: ಚುನಾವಣಾ ಆಯೋಗದಿಂದ ಬರ್ತ್​ಡೇ ಗಿಫ್ಟ್​​​

ಈಗಷ್ಟೇ 18 ವರ್ಷ ಆಗಿರುವವರಿಗೆ ಚುನಾವಣಾ ಆಯೋಗ ಗುಡ್ ನ್ಯೂಸ್ ನೀಡಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 2006 ರ ಜನವರಿ 1 ಮತ್ತು ಮಾರ್ಚ್ 31 ರ ನಡುವೆ ಜನಿಸಿದವರಿಗೂ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ಈಗಷ್ಟೇ 18 ಆದವರಿಗೂ ಮತದಾನಕ್ಕೆ ಅವಕಾಶ: ಚುನಾವಣಾ ಆಯೋಗದಿಂದ ಬರ್ತ್​ಡೇ ಗಿಫ್ಟ್​​​
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Apr 12, 2024 | 7:43 AM

ಬೆಂಗಳೂರು, ಏಪ್ರಿಲ್ 12: ಈ ವರ್ಷ 18 ತುಂಬಿದ 70,000 ಮಂದಿ ಲೋಕಸಭೆ ಚುವಾಣೆಯಲ್ಲಿ (Lok Sabha Elections) ಮತದಾನ ಮಾಡಲಿದ್ದಾರೆ ಎಂದು ಚುನಾವಣಾ ಆಯೋಗ (Election Commission) ತಿಳಿಸಿದೆ. ಕೊನೇ ಕ್ಷಣದ ಪ್ರಯತ್ನದಲ್ಲಿ ಇವರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದೆ. ಮುಂದಿನ ಕೆಲವೇ ದಿನಗಳಲ್ಲಿ 2 ಸಾವಿರಕ್ಕೂ ಹೆಚ್ಚು ಯುವ ಮತದಾರರು ಪಟ್ಟಿಗೆ (Voters List) ಸೇರ್ಪಡೆಯಾಗುವ ನಿರೀಕ್ಷೆ ಇದೆ ಎಂದು ಚುನಾವಣಾ ಆಯೋಗ ಹೇಳಿದೆ. ಈ ಮೂಲಕ ಈಗಷ್ಟೇ 18 ವರ್ಷ ಆದವರಿಗೂ ಚುನಾವಣಾ ಆಯೋಗ ಬರ್ತ್​​ಡೇ ಗಿಫ್ಟ್​ ನೀಡುತ್ತಿದೆ.

2006 ರ ಜನವರಿ 1 ಮತ್ತು ಮಾರ್ಚ್ 31 ರ ನಡುವೆ ಜನಿಸಿದವರನ್ನು ಮುಂದಿನ ಕೆಲ ದಿನಗಳಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಒಂದು ವೇಳೆ, ಈಗಷ್ಟೇ 18 ವರ್ಷ ಆದವರಿಗೆ ಈಗ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶ ನೀಡದಿದ್ದರೆ ಅವರು ಮೊದಲ ಬಾರಿಗೆ ಮತ ಚಲಾಯಿಸಲು ಮುಂದಿನ ಚುನಾವಣೆಯವರೆಗೆ ಕಾಯಬೇಕಾಗುತ್ತದೆ. ಹೀಗಾಗಿ ‘ಫಾರ್ಮ್ 6’ ರ ನಿಬಂಧನೆಯ ಅಡಿಯಲ್ಲಿ ಅವಕಾಶ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಕಾನೂನಿನಲ್ಲಿ ಏನಿದೆ?

ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ನಂತರವೂ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸಲು ‘ಫಾರ್ಮ್ 6’ರ ಅಡಿಯಲ್ಲಿ ಮುಂಗಡ ಅರ್ಜಿ ಸಲ್ಲಿಸುವ ಅವಕಾಶವಿದೆ. ಈ ಕುರಿತು ಮೊದಲ ಬಾರಿಗೆ ಮಾರ್ಚ್ 21 ರಂದು ವರದಿ ಮಾಡಿದಾಗ, ಸುಮಾರು 50,000 ಅರ್ಜಿಗಳು ಸಲ್ಲಿಕೆಯಾಗಿದ್ದವು ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ತಿಳಿಸಿದೆ. ಉಳಿದ ಅರ್ಜಿಗಳು ನಂತರ ಸಲ್ಲಿಕೆಯಾಗಿದ್ದವು.

ಒಟ್ಟಾರೆಯಾಗಿ, ರಾಜ್ಯದಲ್ಲಿ ಜನವರಿಯಿಂದ 10 ಲಕ್ಷಕ್ಕೂ ಹೆಚ್ಚು ಮತದಾರರನ್ನು ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಈ ಪೈಕಿ 5.9 ಲಕ್ಷ ಮಂದಿ ಏಪ್ರಿಲ್ 26ರಂದ ಮತದಾನ ನಡೆಯುವ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ: ಎಲೆಕ್ಷನ್‌ ಡ್ಯೂಟಿಗೆ ಹೋಗುತ್ತಿದ್ದಾಗ ಅಪಘಾತ; ಕರ್ನಾಟಕ ಪೊಲೀಸ್‌ ಸೇರಿ ಇಬ್ಬರ ಸಾವು

ಕರ್ನಾಟಕದ ಪ್ರಮುಖ 28 ಲೋಕಸಭಾ ಕ್ಷೇತ್ರಗಳ ಪೈಕಿ ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತ್ತು ಉತ್ತರ ಕರ್ನಾಟಕದ 14 ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ