AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ

ಫೋಕ್ಸೋ (POCSO) ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ(Murugha Mutt Swamiji) ಅವರಿಗೆ ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ. ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದು.

ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ
ಮುರುಘಾ ಶ್ರೀ ಮತ್ತೆ ಜೈಲಿಗೆ
ಹರೀಶ್ ಜಿ.ಆರ್​.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 23, 2024 | 6:02 PM

Share

ಚಿತ್ರದುರ್ಗ, ಏ.23: ಫೋಕ್ಸೋ (POCSO) ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ(Murugha Mutt Swamiji) ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ಕೂಡ ನೀಡಿದೆ. ಜೊತೆಗೆ ವಿಶೇಷ ಕೋರ್ಟ್​ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ‘ಸುಪ್ರೀಂ’ ಆದೇಶಿಸಿದೆ. ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದು.

ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ಎಸ್​ಜೆಎಂ ವಿದ್ಯಾಪೀಠದಲ್ಲಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧ್ಯಕ್ಷ ಮುರುಘಾ ಶ್ರೀಯನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಹಾಗೇ ಜಾಮೀನಿನ ಮೇಲೆ ಹೊರ ಬಂದ ಅವರು, ಮುರುಘಾ ಶ್ರೀ ಮಠ ಹಾಗೂ ಎಸ್​ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು.

ಇದನ್ನೂ ಓದಿ:ಚಿತ್ರದುರ್ಗ: ಮುರುಘಾ ಮಠದ ಹಣ, ಆಸ್ತಿ ದುರ್ಬಳಕೆ ಆರೋಪ: ಎಸ್​ಕೆ ಬಸವರಾಜನ್ ವಿರುದ್ಧದ‌ ಕೇಸ್​ನಲ್ಲಿ ಮುರುಘಾ ಶ್ರೀ ಸಾಕ್ಷ್ಯ

ಬಳಿಕ ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುರುಘಾ ಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿತ್ತು. ಅಲ್ಲದೆ, ಮುರುಘಾಮಠ ಹಾಗೂ ಎಸ್​ಜೆಎಂ ವಿದ್ಯಾಪೀಠ ಆಡಳಿತಕ್ಕೆ ಮೂರು ದಿನದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು.

ಹಿರಿಯ ನ್ಯಾಯವಾದಿಗಳ ಜೊತೆ ಸ್ವಾಮೀಜಿ ಮಾತು‌ಕತೆ

ಸುಪ್ರೀಂ ಕೋರ್ಟ್​ನಿಂದ ಮುರಘಾ ಶರಣರಿಗೆ ಜಾಮೀನು ರದ್ದಾಗುತ್ತಿದ್ದಂತೆ ಶಿವಯೋಗಿ ಮಂದಿರಕ್ಕೆ ಹಿರಿಯ ನ್ಯಾಯವಾದಿಗಳನ್ನ ಕರೆಯಿಸಿಕೊಂಡು ಸ್ವಾಮೀಜಿ ಮಾತು‌ಕತೆ ನಡೆಸುತ್ತಿದ್ದಾರೆ. ಕಳೆದ ಕೆಲ ತಿಂಗಳಿನಿಂದ ದಾವಣಗೆರೆ ನಗರದ ಜಯದೇವ ವೃತ್ತದ ಬಳಿ ಇರುವ ವಿರಕ್ತ ಮಠಕ್ಕೆ ಸೇರಿದ ಶಿವಯೋಗಿ ಮಂದಿರದಲ್ಲಿ ಇದ್ದಾರೆ.  ಸುಪ್ರೀಂ ನಿರ್ಧಾರ ಪ್ರಕಟವಾಗುತ್ತಿದ್ದಂತೆ ನ್ಯಾಯವಾದಿಗಳ ಜೊತೆ ಮಾತುಕತೆಗೆ ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Tue, 23 April 24

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More