AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HSRP Number Plate: ಹಳೆಯ ವಾಹನಗಳಿಗೆ ಎಚ್​ಎಸ್​ಆರ್​ಪಿ ಅಳವಡಿಸಲು ಹೊಸ ಸಂಕಷ್ಟ! ಕೇಂದ್ರದ ಮೊರೆ ಹೋಗಲು ಸಾರಿಗೆ ಇಲಾಖೆ ನಿರ್ಧಾರ

ರಾಜ್ಯದಲ್ಲಿ ವಾಹನಗಳಿಗೆ ಎಚ್​ಎಸ್​ಆರ್​ಪಿ ಅಳವಡಿಸಲು ಈವರೆಗೆ ಗಡುವನ್ನು ಎರಡು ಬಾರಿ ವಿಸ್ತರಿಸಲಾಗಿದ್ದು, ಪ್ರಸ್ತುತ ಗಡುವು ಮೇ 31 ಕ್ಕೆ ಕೊನೆಗೊಳ್ಳಲಿದೆ. ಈ ಮಧ್ಯೆ ಹೊಸ ಸಂಕಷ್ಟವೊಂದು ಇದೀಗ ಎದುರಾಗಿದೆ. ಫಿಯೆಟ್, ಅಂಬಾಸಿಡರ್, ಸಿಯೆಲೊ, ಮ್ಯಾಟಿಜ್​ನಂಥ ಹಳೇ ವಾಹನಗಳ ಮಾಲೀಕರಿಗೆ ನಂಬರ್​ ಪ್ಲೇಟ್ ಪಡೆಯಲು ವ್ಯವಸ್ಥೆಯೇ ಇಲ್ಲವಾಗಿದೆ. ಇದಕ್ಕೆ ಸಂಬಂಧಿಸಿದ ವಿವರ ಇಲ್ಲಿದೆ.

HSRP Number Plate: ಹಳೆಯ ವಾಹನಗಳಿಗೆ ಎಚ್​ಎಸ್​ಆರ್​ಪಿ ಅಳವಡಿಸಲು ಹೊಸ ಸಂಕಷ್ಟ! ಕೇಂದ್ರದ ಮೊರೆ ಹೋಗಲು ಸಾರಿಗೆ ಇಲಾಖೆ ನಿರ್ಧಾರ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Apr 30, 2024 | 10:52 AM

Share

ಬೆಂಗಳೂರು, ಏಪ್ರಿಲ್ 30: ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (HSRP) ಅಳವಡಿಕೆಗೆ ಇನ್ನೊಂದೇ ತಿಂಗಳು ಅವಕಾಶ ಇರುವುದು. ಅಷ್ಟರಲ್ಲೇ ಇದೀಗ ಮತ್ತೊಂದು ಹೊಸ ಸಮಸ್ಯೆ ಕಾಣಿಸಿಕೊಂಡಿದೆ. ಕೆಲವೊಂದು ಹಳೇ ವಾಹನಗಳಿಗೆ ನಂಬರ್ ಪ್ಲೇಟ್ ಅಳವಡಿಸಿಕೊಡುವುದು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಫಿಯೆಟ್, ಅಂಬಾಸಿಡರ್, ಸಿಯೆಲೊ, ಮ್ಯಾಟಿಜ್, ಒಪೆಲ್, ಹೀರೋ ಪುಚ್, ಎಲ್‌ಎಂಎಲ್, ಕೈನೆಟಿಕ್ ಹೋಂಡಾ ಮತ್ತಿತರ ಮಾಡೆಲ್​​ನ ವಾಹನ ಹೊಂದಿರುವ ಹೊಂದಿರುವ ಹಲವು ಮಂದಿ ಮಾಲೀಕರು ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಕಾರಣವೂ ಇದೆ. ಇದೀಗ ಈ ಸಮಸ್ಯೆಗೆ ಸಂಬಂಧಿಸಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ (MoRTH) ಪತ್ರ ಬರೆಯಲು ಕರ್ನಾಟಕ ಸಾರಿಗೆ ಇಲಾಖೆ (Karnataka transport dept) ಮುಂದಾಗಿದೆ.

ಹಳೇ ವಾಹನಗಳಿಗೆ ಎಚ್​ಎಸ್​ಆರ್​ಪಿ ಸಿಗದಿರಲು ಕಾರಣವೇನು?

ಆಯಾ ಮಾಡೆಲ್​​ನ ವಾಹನ ತಯಾರಿಕಾ ಕಂಪನಿಗಳ ಮೂಲಕ ಮಾತ್ರವೇ ಎಚ್‌ಎಸ್‌ಆರ್‌ಪಿ ಅಳವಡಿಸಲು ಸದ್ಯ ಅವಕಾಶವಿದೆ. ಮೇಲೆ ಉಲ್ಲೇಖಿಸಿರುವ ಮಾಡೆಲ್​​​ಗಳ ಹಳೆಯ ವಾಹನಗಳ ತಯಾರಿಕಾ ಕಂಪನಿಗಳು ಈಗ ಮುಚ್ಚಿವೆ. ಹೀಗಾಗಿ ಆ ವಾಹನಗಳ ಮಾಲೀಕರಿಗೆ ಎಚ್‌ಎಸ್‌ಆರ್‌ಪಿ ಅರ್ಜಿ ಸಲ್ಲಿಸಲು ಆಯ್ಕೆಯೇ ಇಲ್ಲವಾಗಿದೆ.

ಎಚ್‌ಎಸ್‌ಆರ್‌ಪಿ ಪಡೆಯಲು ವಾಹನ ಮಾಲೀಕರು ರಾಜ್ಯ ಸಾರಿಗೆ ಇಲಾಖೆಯ ವೆಬ್‌ಸೈಟ್ (transport.karnataka.gov.in) ಅಥವಾ ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಲ್ಲಿ ತಮ್ಮ ವಾಹನಗಳ ಕಂಪನಿಯನ್ನು ಆಯ್ಕೆ ಮಾಡುವ ಮೂಲಕ ಅದನ್ನು ಬುಕ್ ಮಾಡಬೇಕು. ಹಳೆಯ ವಾಹನ ಮಾಲೀಕರಿಗೆ ಕಂಪನಿಯೇ ಮುಚ್ಚಿರುವುದರಿಂದ ಎಚ್​ಎಸ್​ಆರ್​ಪಿ ಬುಕ್ ಮಾಡಲು ಸಾಧ್ಯವಾಗುತ್ತಿಲ್ಲ.

ಸಾರಿಗೆ ಇಲಾಖೆ ಹೇಳುವುದೇನು?

ರಾಜ್ಯ ಸಾರಿಗೆ ಇಲಾಖೆಯು ಕೂಡ ಹಳೆಯ ವಾಹನ ಮಾಲೀಕರಿಂದ ಮನವಿಗಳನ್ನು ಸ್ವೀಕರಿಸಿದೆ. ಇಂತಹ ಕೆಲವು ಸಾವಿರ ವಾಹನಗಳು ರಾಜ್ಯದಲ್ಲಿದ್ದು, ಯಾವುದೇ ಆಯ್ಕೆಗಳಿಲ್ಲದ ಕಾರಣ ಅವರಿಗೆ ಎಚ್​ಎಸ್​ಆರ್​ಪಿ ಅಳವಡಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಾವು ಪರಿಸ್ಥಿತಿಯನ್ನು ವಿವರಿಸಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯಲು ನಿರ್ಧರಿಸಿದ್ದೇವೆ ಎಂದು ಕರ್ನಾಟಕ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ (ಎನ್​ಫೋರ್ಸ್​ಮೆಂಟ್) ಮಲ್ಲಿಕಾರ್ಜುನ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್​ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ಅಂಥ ಹಳೆಯ ವಾಹನಗಳಿಗೆ ನಂಬರ್​ ಪ್ಲೇಟ್ ಒದಗಿಸಲು ಇತರ ಕಂಪನಿಗಳಿಗೆ ಅವಕಾಶ ನೀಡುವಂತೆ ವಿನಂತಿಸುತ್ತೇವೆ ಎಂದೂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಇನ್ನೂ ಎಚ್​ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಸಿಲ್ಲವೇ? ಮತ್ತೆ ಗಡುವು ವಿಸ್ತರಣೆ ಅನುಮಾನ

ಕಳೆದ ವರ್ಷ ಆಗಸ್ಟ್‌ನಲ್ಲಿ ಸಾರಿಗೆ ಇಲಾಖೆ ಎಚ್​ಎಸ್​ಆರ್​ಪಿ ಅಳವಡಿಕೆಗೆ ಅಧಿಸೂಚನೆಯನ್ನು ಹೊರಡಿಸಿತ್ತು. ಅದರಂತೆ, 2019 ರ ಏಪ್ರಿಲ್ 1 ರ ಮೊದಲು ನೋಂದಣಿಯಾದ ಎಲ್ಲಾ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈವರೆಗೆ, ಗಡುವನ್ನು ಎರಡು ಬಾರಿ ವಿಸ್ತರಿಸಲಾಗಿದ್ದು, ಪ್ರಸ್ತುತ ಗಡುವು ಮೇ 31 ಕ್ಕೆ ಕೊನೆಗೊಳ್ಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:51 am, Tue, 30 April 24

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ