ರಾಜ್ಯ NDA ನಾಯಕರಿಗೆ ಶಾಕ್​​: ಸಂಜಯ ಪಾಟೀಲ್​, ಕುಮಾರಸ್ವಾಮಿಗೆ ನೋಟಿಸ್; ಮಹಿಳಾ ಆಯೋಗ

ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಎನ್​ಡಿಎ ನಾಯಕರು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಚುನಾವಣಾ ಆಯೋಗ ಇಬ್ಬರೂ ನಾಯಕರಿಗೆ ನೋಟಿಸ್​ ನೀಡಿದೆ.

ರಾಜ್ಯ NDA ನಾಯಕರಿಗೆ ಶಾಕ್​​: ಸಂಜಯ ಪಾಟೀಲ್​, ಕುಮಾರಸ್ವಾಮಿಗೆ ನೋಟಿಸ್; ಮಹಿಳಾ ಆಯೋಗ
ಹೆಚ್​ಡಿ ಕುಮಾರಸ್ವಾಮಿ, ಸಂಜಯ ಪಾಟೀಲ್​
Follow us
TV9 Web
| Updated By: ವಿವೇಕ ಬಿರಾದಾರ

Updated on: Apr 15, 2024 | 1:20 PM

ಬೆಂಗಳೂರು, ಏಪ್ರಿಲ್​ 15: ಮಹಿಳೆಯರ ಘನತೆ ಮತ್ತು ಚಾರಿತ್ರ್ಯಕ್ಕೆ ಧಕ್ಕೆ ತಂದ ಆರೋಪದಡಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ್​ ಪಾಟೀಲ್ (Sanjay Patil)​ ಅವರಿಗೆ ಮಹಿಳಾ ಆಯೋಗ (State Women Commission) ನೋಟಿಸ್​ ನೀಡಿದೆ. ಇಬ್ಬರೂ ನಾಯಕರು ಖುದ್ದು ಮಹಿಳಾ ಆಯೋಗಕ್ಕೆ ಏಳು ದಿನಗಳೊಳಗೆ ವಿವರಣೆ ನೀಡಬೇಕು. ತಪ್ಪು ಸಾಬೀತಾದರೆ ಜೈಲು ಶಿಕ್ಷೆಯಾಗುತ್ತೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರಿತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಿಳೆಯರ ಬಗ್ಗೆ ಕೀಳುಮಟ್ಟದ ಭಾಷೆ ಬಳಕೆ ಮಾಡಬಾರದು. ಗಂಭಿರ ಸ್ವರೂಪ ಪಡೆದ್ರೆ ಜೈಲು ಶಿಕ್ಷೆ ಆಗುತ್ತದೆ. ಹೆಣ್ಣುಮಕ್ಕಳಿಗೆ ಅವಮಾನ ಮಾಡಿದರೆ ಹೇಗೆ? ಒಬ್ಬರು ಪೆಗ್ ಅಂತಾರೆ, ಮತ್ತೊಬ್ಬರು ಗ್ಯಾರಂಟಿ ಯೋಜನೆ ವಿಚಾರದಲ್ಲಿ ಮಹಿಳಯರನ್ನು ಅವಮಾನ ಮಾಡುತ್ತಾರೆ ಎಂದು ವಾಗ್ದಾಳಿ ಮಾಡಿದರು.

ಹೆಣ್ಣಮಕ್ಕಳನ್ನು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲೆ ಮಾಡುವುದು ಸರ್ಕಾರದ ಗುರಿ. ಸಂವಿಧಾನ ಕೂಡ ಇದನ್ನೇ ಹೇಳಿದೆ. ಪ್ರಮಾಣ ವಚನದ ಸ್ವೀಕಾರದ ವೇಳೆ ಹೆಣ್ಣುಮಕ್ಕಳಿಗೆ ಗೌರವ ನೀಡುವುದಾಗಿ ಹೇಳತ್ತಾರೆ. ರಾಜಕೀಯ ಲಾಭಕ್ಕೆ ಹೆಣ್ಣುಮಕ್ಕಳನ್ನು ಬಳಕೆ ಮಾಡಬಾರದು ಎಂದರು.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಕುಮಾರಸ್ವಾಮಿ

ಏನಿದು ಘಟನೆ

ಶನಿವಾರ (ಏ.13) ರಂದು ಹಿಂಡಲಗಾದಲ್ಲಿ ನಡೆದಿದ್ದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ್ ಮಾತನಾಡಿ, “ಅಕ್ಕನ ಕ್ಷೇತ್ರದಲ್ಲಿಯೇ ಬಿಜೆಪಿ ಸಮಾವೇಶದಲ್ಲಿ ಅಪಾರ ಸಂಖ್ಯೆಯ ಮಹಿಳೆಯರು ಸೇರಿದ್ದಾರೆ. ಅಕ್ಕ ನಿದ್ದೆಗೆಡುವುದು ಗ್ಯಾರಂಟಿ.‌ ಅವರಿಂದು ನಿದ್ದೆ ಮಾತ್ರೆ ತೆಗೆದುಕೊಳ್ಳಬೇಕು ಇಲ್ಲವೇ ಒಂದು ಎಕ್ಸ್‌ಟ್ರಾ ಪೆಗ್ ಹೆಚ್ಚುವರಿ ಕುಡಿಯಬೇಕು” ಎಂದು ಹೇಳಿದ್ದರು.

ಸಂಜಯ ಪಾಟೀಲ್ ಹೇಳಿಕೆ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ತುಮಕೂರಿನಲ್ಲಿ ನಡೆದಿದ್ದ ಪ್ರಚಾರ ಸಭೆಯಲ್ಲಿ, ಗ್ಯಾರಂಟಿಗಳಿಂದ ಹಳ್ಳಿ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ