ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದ್ರೋ ಅಥವಾ ಡಿಕೆಶಿ ಹೇಳಿಸಿದ್ರೋ: ಅಶೋಕ್​ ಅನುಮಾನ

ಸಿದ್ದರಾಮಯ್ಯನವರೇ ದಯವಿಟ್ಟು ಡಿಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ನೀಡಿರುವ ಹೇಳಿಕೆ ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ವಿಚಾರವಾಗಿ ಮಾತನಾಡಿರುವ ವಿಪಕ್ಷ ನಾಯಕ ಆರ್​. ಅಶೋಕ್​, ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್ ಹೇಳಿಸಿದ್ರೋ ಗೊತ್ತಿಲ್ಲ ಎಂದಿದ್ದಾರೆ.

ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದ್ರೋ ಅಥವಾ ಡಿಕೆಶಿ ಹೇಳಿಸಿದ್ರೋ: ಅಶೋಕ್​ ಅನುಮಾನ
ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದ್ರೋ ಅಥವಾ ಡಿಕೆಶಿ ಹೇಳಿಸಿದ್ರೋ: ಅಶೋಕ್​ ಅನುಮಾನ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Jun 27, 2024 | 4:07 PM

ಬೆಂಗಳೂರು, ಜೂನ್​ 27: ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್ (DK Shivakumar) ಹೇಳಿಸಿದರೋ ಗೊತ್ತಿಲ್ಲ. ಸಿದ್ದರಾಮಯ್ಯ (Siddaramaiah) ಅವರಿಗೆ ರಾಜಕೀಯದ ಒಳಗೆ ಹೋಗಿ ತಿಳಿದುಕೊಳ್ಳುವ ಸಾಮರ್ಥ್ಯ ಇದೆ ಎಂದು ವಿಪಕ್ಷ ನಾಯಕ ಆರ್​ ಅಶೋಕ್ ಹೇಳಿದ್ದಾರೆ. ಡಿಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಹೇಳಿಕೆ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಲಿ ಎಂದು ಹೇಳಿದ್ದಾರೆ.

ಸರ್ಕಾರಿ ಕಾರ್ಯಕ್ರಮದಲ್ಲಿ ಈ ರೀತಿ ಎಂದು ಆಗಿರಲಿಲ್ಲ. ಮೊದಲ ಬಾರಿಗೆ ಸಿಎಂ ಎದುರಿಗೆ ನೀವು ರಾಜೀನಾಮೆ ನೀಡಿ ಎಂದಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಿ. ಇಷ್ಟು ಅವಮಾನ ಆಗಿಯೂ ಸಿಎಂ ಆಗಿ ಮುಂದುವರಿಯಬಾರದು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯನವರೇ ದಯವಿಟ್ಟು ಡಿಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ: ಚಂದ್ರಶೇಖರಶ್ರೀ ಮನವಿ

ಸಿದ್ದರಾಮಯ್ಯ ತಂತ್ರಕ್ಕೆ ಇದೊಂದು ಪ್ರತಿತಂತ್ರ ಅಷ್ಟೇ. ಡಿಕೆ ಶಿವಕುಮಾರ್​ಗೆ ಅವರ ತಮ್ಮನ ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಮೂರು ಡಿಸಿಎಂಗಳಿಗೆ ಹಿನ್ನೆಲೆ ಗಾಯಕರೇ ಸಿದ್ದರಾಮಯ್ಯ. ಅದಕ್ಕೆ ಕೌಂಟರ್ ಆಗಿ ಧರ್ಮರಾಯ ಆದರೆ ಅಧಿಕಾರ ಬಿಟ್ಟುಕೊಡಬೇಕು ಎಂದಿದ್ದಾರೆ.

ಶ್ರೀಗಳು ಅವರ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗುತ್ತೇನೆ: ಕೆ.ಎನ್.ರಾಜಣ್ಣ

ಈ ವಿಚಾರವಾಗಿ ಸಹಕಾರ ಇಲಾಖೆಯ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿದ್ದು, ಆ ಶ್ರೀಗಳು ಅವರ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗುತ್ತೇನೆ. ನಾಳೆಯಿಂದ ನಾನು ಕಾವಿ ಬಟ್ಟೆ ಹಾಕ್ತೀನಿ, ಅವರು ಬಿಟ್ಟು ಕೊಡುತ್ತಾರಾ? ಅವರು ಬಿಟ್ಟುಕೊಡಲ್ಲ ಎಂದು ಹೇಳಿದ್ದಾರೆ.

ಯಾರು ಬಿಟ್ಟು ಕೊಡ್ತಾರೆ, ಅವರು ಕೇಳಿದ ತಕ್ಷಣ ಬಿಟ್ಟುಕೊಡೊಕೆ ಆಗುತ್ತಾ? ಚಂದ್ರಶೇಖರ್‌ ಸ್ವಾಮೀಜಿ ಯಾವ ಉದ್ದೇಶದಿಂದ ಹೇಳಿದ್ದಾರೋ ಗೊತ್ತಿಲ್ಲ. ಸದುದ್ದೇಶದಿಂದ ಹೇಳಿದ್ದಾರೋ, ದುರುದ್ದೇಶದಿಂದ ಹೇಳಿದ್ದಾರೋ ಗೊತ್ತಿಲ್ಲ. ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂತ ಕೇಳಿದಾಗ ಕುಮಾರಸ್ವಾಮಿ ಸಮಂಜಸ ಉತ್ತರ ನೀಡಲಿಲ್ಲ!

ಸ್ವಾಮೀಜಿ ಹೇಳಿಕೆ ಸರಿ, ತಪ್ಪು ಅಂತಾ ವ್ಯಾಖ್ಯಾನ ಮಾಡೋಕೆ ಹೋಗಲ್ಲ. ಅಧಿಕಾರ ಬಿಟ್ಟು ಬಾರಪ್ಪ ಇನ್ನೊಬ್ಬ ಅಧಿಕಾರ ನಡೆಸು ಅಂತಾ ಇದೆಯಾ? ಆ ರೀತಿ ಉದಾಹರಣೆ ದೇಶದಲ್ಲಿ ಎಲ್ಲಾದರೂ ಇದೆಯಾ. ಹಾಗೆ ನೋಡಿದ್ರೆ ಸೋನಿಯಾ ಒಬ್ಬರೇ ಪ್ರಧಾನಿ ಹುದ್ದೆ ಬೇಡ ಅಂದವರು. ಬೇರೆಯವರಿಗೆ ಬಿಟ್ಟು ಕೊಟ್ಟಿರುವ ಇತಿಹಾಸ ಇಲ್ಲ. ಭರ್ತಿ ಮಾಡಲು ರಾಜ್ಯದಲ್ಲಿ ಸಿಎಂ ಸ್ಥಾನ ಸದ್ಯಕ್ಕೆ ಖಾಲಿ ಇಲ್ಲ. ಡಿಸಿಎಂ ಸ್ಥಾನ ಖಾಲಿ ಇದೆ, ಅದನ್ನ ಭರ್ತಿ ಮಾಡಲಿ ಎಂದಿದ್ದಾರೆ.

ಸ್ವಾಮೀಜಿ ಹೇಳಿದರೆ ಸಿಎಂ ಬದಲಾವಣೆ ಮಾಡಲು ಆಗಲ್ಲ: ಶಾಮನೂರು ಶಿವಶಂಕರಪ್ಪ

ದಾವಣಗೆರೆಯಲ್ಲಿ ಕಾಂಗ್ರೆಸ್​​ ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿದ್ದು, ಸ್ವಾಮೀಜಿ ಹೇಳಿದರೆ ಸಿಎಂ ಬದಲಾವಣೆ ಮಾಡಲು ಆಗಲ್ಲ. ಹೈಕಮಾಂಡ್ ಹೇಳಿದರೆ ಸಿಎಂ ಬದಲಾವಣೆ ಮಾಡೋದು. ಸಿದ್ದರಾಮಯ್ಯ ಚೆನ್ನಾಗಿಯೇ ಆಡಳಿತ ನಡೆಸುತ್ತಿದ್ದಾರೆ. ಸಿಎಂ ವಿಚಾರದ ಬಗ್ಗೆ ಹೈಕಮಾಂಡ್ ಉತ್ತರ ನೀಡುತ್ತೆ. ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಸ್ವಾಮೀಜಿ ಹೇಳಿರಬಹುದು ಆದರೆ ಸ್ವಾಮೀಜಿ ಹೇಳಿದಂತೆ ಸಿಎಂ ಮಾಡಲು ಆಗುತ್ತಾ. ಸಿಎಂ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!