AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಡಾಪಟುಗಳಿಗೆ ಉದ್ಯೋಗದಲ್ಲಿ ನೇರ ನೇಮಕಾತಿ; ಮಂಗಳೂರಿನಲ್ಲಿ ಮಿನಿ ಒಲಂಪಿಕ್ಸ್: ಸಿಎಂಗೆ ಕರ್ನಾಟಕ ಒಲಂಪಿಕ್ ಸಂಸ್ಥೆ ಅಧ್ಯಕ್ಷ ಗೋವಿಂದರಾಜು ಮನವಿ

ಕರ್ನಾಟಕ ಒಲಂಪಿಕ್ ಸಂಸ್ಥೆಯಿಂದ ಪದ್ಮಭೂಷಣ ಮೇಜರ್ ಧ್ಯಾನಚಂದ್ ದಿನಾಚರಣೆ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್, ಸಿಎಂ ಬಸವರಾಜ ಬೊಮ್ಮಾಯಿ, ಕ್ರೀಡಾ ಸಚಿವ ನಾರಾಯಣಗೌಡ ಡಾ.ಕೆ ಗೋವಿಂದರಾಜು ಭಾಗಿಯಾಗಿದ್ದರು.

ಕ್ರೀಡಾಪಟುಗಳಿಗೆ ಉದ್ಯೋಗದಲ್ಲಿ ನೇರ ನೇಮಕಾತಿ; ಮಂಗಳೂರಿನಲ್ಲಿ ಮಿನಿ ಒಲಂಪಿಕ್ಸ್: ಸಿಎಂಗೆ ಕರ್ನಾಟಕ ಒಲಂಪಿಕ್ ಸಂಸ್ಥೆ ಅಧ್ಯಕ್ಷ ಗೋವಿಂದರಾಜು ಮನವಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕರ್ನಾಟಕ ಒಲಂಪಿಕ್ ಸಂಸ್ಥೆ ಅಧ್ಯಕ್ಷ ಗೋವಿಂದರಾಜು
TV9 Web
| Edited By: |

Updated on:Aug 29, 2021 | 7:22 PM

Share

ಬೆಂಗಳೂರು: ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಉದ್ಯೋಗ ಸಿಗುವುದು ಕಡಿಮೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಕ್ರೀಡಾಪಟುಗಳಿಗೆ ಅರಣ್ಯ, ಪೊಲೀಸ್ ಇಲಾಖೆಗಳಲ್ಲಿ ನೇರ ನೇಮಕಾತಿ ಪ್ರಕ್ರಿಯೆ ನಡೆಯಬೇಕು. ಮಂಗಳೂರಿನಲ್ಲಿ ಮಿನಿ ಒಲಿಂಪಿಕ್ಸ್ ನಡೆಸುವ ಚಿಂತನೆಯಿದೆ. ಇದಕ್ಕೆ ಸಿಎಂ ಬೊಮ್ಮಾಯಿಯವರ ಸಹಕಾರ ಬೇಕಾಗಿದೆ. ಕ್ರೀಡಾಪಟುಗಳಿಗೆ ಉತ್ತಮ ಹಾಸ್ಟೆಲ್, ಆಹಾರ ನೀಡಬೇಕಿದೆ. ಕ್ರೀಡಾಪಟುಗಳಿಗೆ ಭತ್ಯೆ ಹೆಚ್ಚಳ ಮಾಡಬೇಕು ಎಂದು ಕರ್ನಾಟಕ ಒಲಂಪಿಕ್ ಸಂಸ್ಥೆ ಅಧ್ಯಕ್ಷ ಗೋವಿಂದರಾಜು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದರು.

ಕರ್ನಾಟಕ ಒಲಂಪಿಕ್ ಸಂಸ್ಥೆಯಿಂದ ಪದ್ಮಭೂಷಣ ಮೇಜರ್ ಧ್ಯಾನಚಂದ್ ದಿನಾಚರಣೆ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ  ರಾಜ್ಯಪಾಲ ಥಾವರ್ ಚಂದ್ ಗೆಹಲೋತ್, ಸಿಎಂ ಬಸವರಾಜ ಬೊಮ್ಮಾಯಿ, ಕ್ರೀಡಾ ಸಚಿವ ನಾರಾಯಣಗೌಡ ಡಾ.ಕೆ ಗೋವಿಂದರಾಜು ಭಾಗಿಯಾಗಿದ್ದರು.

ಓಲಂಪಿಕ್ಸ್​ನಲ್ಲಿ ಭಾಗವಹಿಸುವವರಿಗೆ ಸಾಮಾನ್ಯ ತರಬೇತಿ ನೀಡಿದರೆ ಸಾಲದು. ಪರಿಣಾಮಕಾರಿಯಾದ ತರಬೇತಿ ನೀಡಬೇಕು. ಅಂತಹ ತರಬೇತಿಯನ್ನು ರಾಜ್ಯ ಸರ್ಕಾರ ಒದಗಿಸಬೇಕು. ನಮ್ಮ ರಾಜ್ಯದ ರಾಜ್ಯಪಾಲರೇ ಸ್ವತಃ ಕ್ರೀಡಾಪಟುವಾಗಿದ್ದು ನಮಗೆ ಹೆಮ್ಮೆಯಿದೆ. ಒಂದೊಂದು ಜಿಲ್ಲೆಗೆ ಅನುದಾನ ಕೊಡುವ ಬದಲು ವಲಯವಾರು ಹಣ ನೀಡಬೇಕು. ಆಗ ಒಂದೊಂದು ವಲಯದಲ್ಲಿ ಕ್ರೀಡಾ ಮೂಲಸೌಕರ್ಯ ಒದಗಿಸಿದರೆ ಹೆಚ್ಚಿನ ಅನುಕೂಲ ಆಗಲಿದೆಇದರಿಂದ ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಬೆಂಬಲ ಸಿಗುತ್ತದೆ ಎಂದು ಕರ್ನಾಟಕ ಒಲಂಪಿಕ್ ಸಂಸ್ಥೆ ಅಧ್ಯಕ್ಷ ಗೋವಿಂದರಾಜು ವಿನಂತಿಸಿದರು.

ಕನ್ನಡಿಗರೂ ಒಲಂಪಿಕ್​ನಲ್ಲಿ ಸಾಧನೆ ಮಾಡಲು ಸಾಧ್ಯ: ಸಿಎಂ ಬಸವರಾಜ ಬೊಮ್ಮಾಯಿ ಸ್ಪೂರ್ತಿ ನುಡಿ ಒಲಂಪಿಯನ್ಸ್ ಫಾರ್ ಕನ್ನಡಿಗ ಎಂದು ಬಂದರೆ ವೈ ನಾಟ್..? ಕನ್ನಡಿಗರು ಒಲಂಪಿಕ್ಸ್​ನಲ್ಲಿ ಸಾಧನೆ ಮಾಡಲು ಏಕೆ ಸಾಧ್ಯವಾಗದು? ನಾವೂ ಸಹ ಒಲಂಪಿಕ್ ಸ್ಪರ್ಧೆಗಳಲ್ಲಿ ಸಾಧನೆ ಮಾಡಬಹುದು ಎಂಬುದೇ ನನ್ನ ನಿಲುವು ಮತ್ತು ಘೋಷಣೆಯಾಗಿರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈಬಾರಿ ಮಂಡಿಸಲಿರುವ ಬಜೆಟ್​ನಲ್ಲಿ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಮುಂಬರುವ ಮಾರ್ಚ್ ಹೊತ್ತಿಗೆ ಬಜೆಟ್ ರಚನೆಗೆ ಹೆಚ್ಚಿ‌ನ ಶಕ್ತಿ ಮತ್ತು ಉತ್ತಮ ವಾತಾವರಣ ನನಗೆ ದೊರಕಬಹುದು. ಕ್ರೀಡಾ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯ ಜತೆಗೆ ಅಂತರಾಷ್ಟ್ರೀಯ ಮಟ್ಟದ ತರಬೇತುದಾರರನ್ನು ಒದಗಿಸುವ ಬಗ್ಗೆಯೂ ಚಿಂತನೆ ಮಾಡಿದ್ದೇವೆ. ಓಲಂಪಿಕ್ಸ್​ನಲ್ಲಿ ರಾಜ್ಯದಿಂದ ಅತ್ಯುತ್ತಮ ಕ್ರೀಡಾಪಟುಗಳನ್ನು ರೂಪಿಸಿ ಕಳುಹಿಸಲಾಗುವುದು ಎಂದು ಸಹ ಮುಖ್ಯಮಂತ್ರಿಗಳು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ರಾಜ್ಯಪಾಲರು, ಹಾಗೂ ಸಿಎಂ ಸನ್ಮಾನಿಸಿದರು.

ಜಕ್ಕೂರ್ ಏರೋ ಡ್ರಮ್ ಇಷ್ಟು ವರ್ಷ ಖಾಲಿಯಿತ್ತು. ಈಗ ಜಕ್ಕೂರ್ ಏರೋ ಡ್ರೋಮ್ನಲ್ಲಿ ತರಬೇತಿ ಶಾಲೆ ಅರಂಭಿಸಿ 100 ಪೈಲಟ್​ಗಳಿಗೆ ತರಬೇತಿ ನೀಡಲಿದ್ದೇವೆ. ಜತೆಗೆ ಅಮೃತ್ ಕ್ರೀಡಾ ಯೋಜನೆ ಅಡಿಯಲ್ಲಿ 75 ಕ್ರೀಡಾಪಟುಗಳಿಗೆ ತರಬೇತಿ ನೀಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಕ್ರೀಡಾ ಹಬ್ಬವನ್ನು ಆಯೋಜಿಸಲು ಸಿದ್ಧತೆ ನಡೆಸಿದ್ದೇವೆ. ಜತೆಗೆ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇಕಡಾ 2ರಷ್ಟು ಅವಕಾಶ ನೀಡಬೇಕೆಂದು ಸಿಎಂಗೆ ಮನವಿ ಮಾಡುತ್ತೇನೆ. ಶಾಲೆಗಳಲ್ಲೂ ಪ್ರತಿನಿತ್ಯ 2 ಗಂಟೆಗೂ ಹೆಚ್ಚು ಕಾಲ ಕ್ರೀಡಾ ಚಟುವಟಿಕೆ, ಆಟೋಟಗಳಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡುವುದಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದರು.

ಇದನ್ನೂ ಓದಿ: 

ಪ್ಯಾರಾ ಓಲಂಪಿಕ್​ನಲ್ಲಿ ಚಿನ್ನ ಗೆದ್ದರೆ 5 ಕೋಟಿ ರೂಪಾಯಿ ಬಹುಮಾನ: ಸಚಿವ ಡಾ. ನಾರಾಯಣಗೌಡ 

Tokyo Paralympics: ತಾಲಿಬಾನಿಗಳ ಕಣ್ತಪ್ಪಿಸಿ ಪ್ಯಾರಾಲಿಂಪಿಕ್ಸ್​ಗೆ ಹಾಜರಾದ ಅಫ್ಘಾನಿಸ್ತಾನದ ಇಬ್ಬರು ಸ್ಪರ್ಧಿಗಳು!

(Karnataka Olympic Association president Govindaraju appeals to CM for mini Olympics in Mangaluru and direct recruitment for athletes)

Published On - 6:41 pm, Sun, 29 August 21

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್