ಕರ್ನಾಟಕದಲ್ಲಿ ಇಂದು ಒಂದೇ ದಿನ 12 ಒಮಿಕ್ರಾನ್ ಕೇಸ್ ಪತ್ತೆ; ಬೆಂಗಳೂರಿನಲ್ಲೇ ಅತಿ ಹೆಚ್ಚು ಸೋಂಕಿತರು

| Updated By: ಸುಷ್ಮಾ ಚಕ್ರೆ

Updated on: Dec 23, 2021 | 4:30 PM

Omicron Cases in Karnataka: ಕರ್ನಾಟಕದಲ್ಲಿ ಇದುವರೆಗೂ ಒಟ್ಟು 31 ಒಮಿಕ್ರಾನ್‌ ಪ್ರಕರಣಗಳು ಪತ್ತೆಯಾಗಿದ್ದು, ಇಂದು ಒಂದೇ ದಿನ 12 ಒಮಿಕ್ರಾನ್ ಕೇಸ್ ದೃಢಪಟ್ಟಿದೆ.

ಕರ್ನಾಟಕದಲ್ಲಿ ಇಂದು ಒಂದೇ ದಿನ 12 ಒಮಿಕ್ರಾನ್ ಕೇಸ್ ಪತ್ತೆ; ಬೆಂಗಳೂರಿನಲ್ಲೇ ಅತಿ ಹೆಚ್ಚು ಸೋಂಕಿತರು
ಡಾ. ಕೆ. ಸುಧಾಕರ್ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಕರ್ನಾಟಕದಲ್ಲಿ ಇಡೀ ದೇಶದಲ್ಲೇ ಮೊದಲ ಒಮಿಕ್ರಾನ್ ಸೋಂಕು ಪತ್ತೆಯಾಗಿ ದೇಶಾದ್ಯಂತ ಆತಂಕ ಸೃಷ್ಟಿಸಿತ್ತು. ಇದೀಗ ಕರ್ನಾಟಕದಲ್ಲಿ ಇಂದು ಒಂದೇ ದಿನ 12 ಒಮಿಕ್ರಾನ್ ಕೇಸ್ ದೃಢಪಟ್ಟಿದೆ. ಬೆಂಗಳೂರಿನಲ್ಲಿ 10, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1 ಪ್ರಕರಣಗಳು ದಾಖಲಾಗಿವೆ ಎಂದು ಟ್ವಿಟರ್‌ನಲ್ಲಿ ಆರೋಗ್ಯ ಖಾತೆ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಇನ್ನು, ಬೆಂಗಳೂರಿನ ಅಪಾರ್ಟ್​ಮೆಂಟ್​ನಲ್ಲಿ ಒಮಿಕ್ರಾನ್ ಸ್ಫೋಟಗೊಂಡಿದ್ದು, ಒಂದೇ ಕುಟುಂಬದ ನಾಲ್ಕು ಮಂದಿಗೆ ಒಮಿಕ್ರಾನ್ ತಗುಲಿರುವುದು ದೃಢಪಟ್ಟಿದೆ.

ಕರ್ನಾಟಕದಲ್ಲಿ ಇದುವರೆಗೂ ಒಟ್ಟು 31 ಒಮಿಕ್ರಾನ್‌ ಪ್ರಕರಣಗಳು ಪತ್ತೆಯಾಗಿದ್ದು, ಇಂಗ್ಲೆಂಡ್​ನಿಂದ ಬೆಂಗಳೂರಿಗೆ ಬಂದಿದ್ದ ಐವರಿಗೆ ಒಮಿಕ್ರಾನ್ ದೃಢಪಟ್ಟಿದೆ. ಇಂಗ್ಲೆಂಡ್​ನಿಂದ ಬೆಂಗಳೂರಿಗೆ ಬಂದಿದ್ದ 31 ವರ್ಷದ ವ್ಯಕ್ತಿ, 42 ವರ್ಷದ ವ್ಯಕ್ತಿ, 18 ವರ್ಷದ ಯುವತಿ, 21 ವರ್ಷದ ಯುವಕ ಹಾಗೂ 11 ವರ್ಷದ ಬಾಲಕಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ 20 ವರ್ಷದ ಯುವತಿ, 56 ವರ್ಷದ ವ್ಯಕ್ತಿ, 54 ವರ್ಷದ ಮಹಿಳೆಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ.

ನಯಾಗರದಿಂದ ಬೆಂಗಳೂರಿಗೆ ಬಂದಿದ್ದ 59 ವರ್ಷದ ಮಹಿಳೆ, ಡೆನ್ಮಾರ್ಕ್​​ನಿಂದ ಬೆಂಗಳೂರಿಗೆ ಬಂದಿದ್ದ 49 ವರ್ಷದ ಮಹಿಳೆ, ಘಾನಾದಿಂದ ಮಂಗಳೂರಿಗೆ ಬಂದಿದ್ದ 27 ವರ್ಷದ ಯುವಕ, ಮೈಸೂರಿನ 9 ವರ್ಷದ ಬಾಲಕಿಗೆ ಒಮಿಕ್ರಾನ್ ದೃಢಪಟ್ಟಿದೆ. ಸ್ವಿಟ್ಜರ್ಲೆಂಡ್​ನಿಂದ ಬಂದಿದ್ದ ಬಾಲಕಿಗೆ ಒಮಿಕ್ರಾನ್​ ದೃಢಪಟ್ಟಿದೆ ಎಂದು ಟ್ವಿಟರ್‌ನಲ್ಲಿ ಆರೋಗ್ಯ ಖಾತೆ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಇಂಗ್ಲೆಂಡ್​ನಿಂದ ಬೆಂಗಳೂರಿಗೆ ಬಂದ 26 ವರ್ಷದ ಮಹಿಳೆಯಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದ್ದು, ವಿಮಾನ ನಿಲ್ದಾಣದಿಂದ ಕರೆದುಕೊಂಡು ಬರಲು ಹೋಗಿದ್ದ ಇಡೀ ಫ್ಯಾಮಿಲಿಗೆ ಒಮಿಕ್ರಾನ್ ತಗುಲಿದೆ. ಮನೆಯ ಮೂರು ಪ್ರಾಥಮಿಕ ಸಂಪರ್ಕಿತರಲ್ಲೂ‌ ಒಮಿಕ್ರಾನ್ ವೈರಸ್ ಪತ್ತೆಯಾಗಿದೆ. 26 ವರ್ಷದ ಮಹಿಳೆಯ ತಂದೆ, ತಾಯಿ ಹಾಗೂ ತಂಗಿಗೆ ಒಮಿಕ್ರಾನ್ ಸೋಂಕು ಖಚಿತವಾಗಿದೆ. ಮೂವರು ಕೂಡ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ. ಸೆಕೆಂಡರಿ ಕಾಂಟ್ಯಾಕ್ಟ್ ಹೊಂದಿದ್ದ 10 ಮಂದಿಗೆ ಕೊವಿಡ್ ನೆಗೆಟಿವ್ ದೃಢಪಟ್ಟಿದೆ. ಇಡೀ ಕುಟುಂಬವನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: ಒಮಿಕ್ರಾನ್ ಆತಂಕದ ಮಧ್ಯೆ ಶೇ.100ರಷ್ಟು ಎರಡು ಡೋಸ್ ಲಸಿಕೆ ಪೂರ್ಣಗೊಳಿಸಿದ ಬೆಂಗಳೂರು, ಯಾವ ಜಿಲ್ಲೆಯಲ್ಲಿ ಎಷ್ಟು ಲಸಿಕೆ?

Delmicron ಒಮಿಕ್ರಾನ್ ನಂತರ ಬಂದಿದೆ ಹೊಸ ರೂಪಾಂತರಿ ಡೆಲ್ಮಿಕ್ರಾನ್; ರೋಗ ಲಕ್ಷಣಗಳೇನು? ಚಿಕಿತ್ಸೆ ಏನು?