AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka: ರಾಜ್ಯದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ‘ಒಂದು ಜಿಲ್ಲೆ, ಒಂದು ಕ್ರೀಡೆ’ ಯೋಜನೆ; ಸಚಿವ ಬಿ ನಾಗೇಂದ್ರ

'One District, One Sport': ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರವು "ಒಂದು ಜಿಲ್ಲೆ, ಒಂದು ಕ್ರೀಡೆ" ಯೋಜನೆಯನ್ನು ಪರಿಚಯಿಸಲು ಚಿಂತನೆ ನಡೆಸುತ್ತಿದೆ ಎಂದು ಯುವ ಸಬಲೀಕರಣ, ಕ್ರೀಡೆ ಮತ್ತು ಬುಡಕಟ್ಟು ಕಲ್ಯಾಣ ಸಚಿವ ಬಿ ನಾಗೇಂದ್ರ ಹೇಳಿದ್ದಾರೆ.

Karnataka: ರಾಜ್ಯದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು 'ಒಂದು ಜಿಲ್ಲೆ, ಒಂದು ಕ್ರೀಡೆ' ಯೋಜನೆ; ಸಚಿವ ಬಿ ನಾಗೇಂದ್ರ
ಸಚಿವ ಬಿ ನಾಗೇಂದ್ರ
TV9 Web
| Edited By: |

Updated on:Jul 12, 2023 | 1:13 PM

Share

ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರವು “ಒಂದು ಜಿಲ್ಲೆ, ಒಂದು ಕ್ರೀಡೆ” (‘One District, One Sport’ )ಯೋಜನೆಯನ್ನು ಪರಿಚಯಿಸಲು ಚಿಂತನೆ ನಡೆಸುತ್ತಿದೆ ಎಂದು ಯುವ ಸಬಲೀಕರಣ, ಕ್ರೀಡೆ ಮತ್ತು ಬುಡಕಟ್ಟು ಕಲ್ಯಾಣ ಸಚಿವ ಬಿ ನಾಗೇಂದ್ರ ಮಂಗಳವಾರ (ಜು.11) ಹೇಳಿದ್ದಾರೆ. ರಾಜ್ಯಾದ್ಯಂತ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಸಚಿವ ನಾಗೇಂದ್ರ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ. ಸೈಕ್ಲಿಂಗ್, ಕುಸ್ತಿ, ಸೇರಿದಂತೆ ವಿಜಯಪುರ ವಿವಿಧ ಕ್ರೀಡೆಗಳಿಗೆ ಜನಪ್ರಿಯವಾಗಿವೆ. ಇನ್ನೂ ಹೋಬಳಿಯಿಂದ ಜಿಲ್ಲಾ ಮಟ್ಟದವರೆಗೂ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಲು ಈ ಯೋಜನೆ ಸಹಕಾರಿಯಾಗಲಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಅತ್ಯುತ್ತಮ ಬಜೆಟ್​​ನಲ್ಲಿ ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ಮೀಸಲಿಟ್ಟಿದ್ದು, ಈ ಭಾಗದ ಅಭಿವೃದ್ಧಿಗೆ ಇದನ್ನು ಸಮರ್ಪಕವಾಗಿ ಬಳಕೆ ಮಾಡಲಾಗುವುದು ಎಂದು ಹೇಳಿದ್ದಾರೆ. ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಸಾವಿರಾರು ಕೋಟಿ ಅನುದಾನ ನೀಡಲಾಗಿದ್ದು, ಈಗಾಗಲೇ ಕೆಲವೊಂದು ಕಡೆ ಇದನ್ನು ವೆಚ್ಚ ಮಾಡಲಾಗಿದೆ. ಸರ್ಕಾರದ ಯೋಜನೆಗಳ ಪ್ರಯೋಜನ ಪಡೆದ ಜನರ ಜೀವನಮಟ್ಟದಲ್ಲಿ ಸುಧಾರಣೆ ಬಗ್ಗೆ ಇಲಾಖೆ ಮೌಲ್ಯಮಾಪನ ಮಾಡಲಿದೆ. ಬಜೆಟ್​​ನಲ್ಲಿ ಎಸ್ ಟಿಗಳ ಕಲ್ಯಾಣಕ್ಕೆ 1588.23 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದರು.

ಇದನ್ನೂ ಓದಿ: Milk Price Hike: ರೈತರ ರಕ್ಷಣೆಗಾಗಿ ಹಾಲಿನ ದರ ಏರಿಕೆಗೆ ಸರ್ಕಾರ ಬದ್ಧ: ಸಚಿವ ಕೆ ವೆಂಕಟೇಶ್

ಇನ್ನೂ ಪರಿಶಿಷ್ಟ ಜಾತಿಗಳ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಬುಡಕಟ್ಟು ಉಪ ಯೋಜನೆ (ಟಿಎಸ್‌ಪಿ) ಅಡಿಯಲ್ಲಿ ನಿಗದಿಪಡಿಸಿದ ಹಣವನ್ನು ಸಮುದಾಯಗಳ ಕಲ್ಯಾಣಕ್ಕಾಗಿ ಆದ್ಯತೆಯ ಮೇಲೆ ಖರ್ಚು ಮಾಡಲು, ಮುಖ್ಯಮಂತ್ರಿಗಳು ಕಾಯಿದೆಯ ಸೆಕ್ಷನ್ 7 ಡಿನ್ನು ಕೈಬಿಟ್ಟಿದ್ದಾರೆ. ಇದರ ಜತೆಗೆ ಈ ವರ್ಷದಿಂದ ಒಲಂಪಿಕ್ಸ್ ಪದಕ ವಿಜೇತರಿಗೆ ಗ್ರೂಪ್ ಎ ಮತ್ತು ಪ್ಯಾರಾಲಿಂಪಿಕ್ಸ್ ಪದಕ ವಿಜೇತರಿಗೆ ಗ್ರೂಪ್ ಬಿ ಸರ್ಕಾರಿ ಉದ್ಯೋಗಗಳನ್ನು ಒದಗಿಸಲಿದೆ ಎಂದು ಹೇಳಿದರು.

ಕರ್ನಾಟಕಕ್ಕೆ  ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:12 pm, Wed, 12 July 23

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ