ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರವು “ಒಂದು ಜಿಲ್ಲೆ, ಒಂದು ಕ್ರೀಡೆ” (‘One District, One Sport’ )ಯೋಜನೆಯನ್ನು ಪರಿಚಯಿಸಲು ಚಿಂತನೆ ನಡೆಸುತ್ತಿದೆ ಎಂದು ಯುವ ಸಬಲೀಕರಣ, ಕ್ರೀಡೆ ಮತ್ತು ಬುಡಕಟ್ಟು ಕಲ್ಯಾಣ ಸಚಿವ ಬಿ ನಾಗೇಂದ್ರ ಮಂಗಳವಾರ (ಜು.11) ಹೇಳಿದ್ದಾರೆ. ರಾಜ್ಯಾದ್ಯಂತ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಸಚಿವ ನಾಗೇಂದ್ರ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ. ಸೈಕ್ಲಿಂಗ್, ಕುಸ್ತಿ, ಸೇರಿದಂತೆ ವಿಜಯಪುರ ವಿವಿಧ ಕ್ರೀಡೆಗಳಿಗೆ ಜನಪ್ರಿಯವಾಗಿವೆ. ಇನ್ನೂ ಹೋಬಳಿಯಿಂದ ಜಿಲ್ಲಾ ಮಟ್ಟದವರೆಗೂ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಲು ಈ ಯೋಜನೆ ಸಹಕಾರಿಯಾಗಲಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಅತ್ಯುತ್ತಮ ಬಜೆಟ್ನಲ್ಲಿ ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ಮೀಸಲಿಟ್ಟಿದ್ದು, ಈ ಭಾಗದ ಅಭಿವೃದ್ಧಿಗೆ ಇದನ್ನು ಸಮರ್ಪಕವಾಗಿ ಬಳಕೆ ಮಾಡಲಾಗುವುದು ಎಂದು ಹೇಳಿದ್ದಾರೆ. ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಸಾವಿರಾರು ಕೋಟಿ ಅನುದಾನ ನೀಡಲಾಗಿದ್ದು, ಈಗಾಗಲೇ ಕೆಲವೊಂದು ಕಡೆ ಇದನ್ನು ವೆಚ್ಚ ಮಾಡಲಾಗಿದೆ. ಸರ್ಕಾರದ ಯೋಜನೆಗಳ ಪ್ರಯೋಜನ ಪಡೆದ ಜನರ ಜೀವನಮಟ್ಟದಲ್ಲಿ ಸುಧಾರಣೆ ಬಗ್ಗೆ ಇಲಾಖೆ ಮೌಲ್ಯಮಾಪನ ಮಾಡಲಿದೆ. ಬಜೆಟ್ನಲ್ಲಿ ಎಸ್ ಟಿಗಳ ಕಲ್ಯಾಣಕ್ಕೆ 1588.23 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದರು.
ಇದನ್ನೂ ಓದಿ: Milk Price Hike: ರೈತರ ರಕ್ಷಣೆಗಾಗಿ ಹಾಲಿನ ದರ ಏರಿಕೆಗೆ ಸರ್ಕಾರ ಬದ್ಧ: ಸಚಿವ ಕೆ ವೆಂಕಟೇಶ್
ಇನ್ನೂ ಪರಿಶಿಷ್ಟ ಜಾತಿಗಳ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಬುಡಕಟ್ಟು ಉಪ ಯೋಜನೆ (ಟಿಎಸ್‌ಪಿ) ಅಡಿಯಲ್ಲಿ ನಿಗದಿಪಡಿಸಿದ ಹಣವನ್ನು ಸಮುದಾಯಗಳ ಕಲ್ಯಾಣಕ್ಕಾಗಿ ಆದ್ಯತೆಯ ಮೇಲೆ ಖರ್ಚು ಮಾಡಲು, ಮುಖ್ಯಮಂತ್ರಿಗಳು ಕಾಯಿದೆಯ ಸೆಕ್ಷನ್ 7 ಡಿನ್ನು ಕೈಬಿಟ್ಟಿದ್ದಾರೆ. ಇದರ ಜತೆಗೆ ಈ ವರ್ಷದಿಂದ ಒಲಂಪಿಕ್ಸ್ ಪದಕ ವಿಜೇತರಿಗೆ ಗ್ರೂಪ್ ಎ ಮತ್ತು ಪ್ಯಾರಾಲಿಂಪಿಕ್ಸ್ ಪದಕ ವಿಜೇತರಿಗೆ ಗ್ರೂಪ್ ಬಿ ಸರ್ಕಾರಿ ಉದ್ಯೋಗಗಳನ್ನು ಒದಗಿಸಲಿದೆ ಎಂದು ಹೇಳಿದರು.
ಕರ್ನಾಟಕಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:12 pm, Wed, 12 July 23