ಸಿಎಂ ಸಿದ್ದರಾಮಯ್ಯಗೆ ಅಶೋಕ್ ಮಹತ್ವದ ಪತ್ರ: ವಿಪಕ್ಷ ನಾಯಕರ ಪತ್ರದಲ್ಲೇನಿದೆ?

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್​.ಅಶೋಕ್, ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಶಿಫಾರಸ್ಸಿನ ಅನ್ವಯ ರಾಜ್ಯದಲ್ಲಿ ಅಂಗನವಾಡಿಗಳಿಗೆ ಸರಬರಾಜಾಗುತ್ತಿರುವ ಕಳಪೆ ಆಹಾರವನ್ನು ಕೂಡಲೇ ನಿಲ್ಲಿಸುವಂತೆ ಪತ್ರ ಬರೆಯಲಾಗಿದ್ದು, ಮೊದಲಿನಂತೆ ಸರ್ಕಾರಿ ಸ್ವಾಮ್ಯದ ಸಹಕಾರಿ ಸಂಸ್ಥೆಯಾದ ಜನತಾ ಬಜಾರ್ ಮೂಲಕ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸಬೇಕು ಎಂದು ಆಗ್ರಹಿಸಲಾಗಿದೆ.

ಸಿಎಂ ಸಿದ್ದರಾಮಯ್ಯಗೆ ಅಶೋಕ್ ಮಹತ್ವದ ಪತ್ರ: ವಿಪಕ್ಷ ನಾಯಕರ ಪತ್ರದಲ್ಲೇನಿದೆ?
ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್​.ಅಶೋಕ್ ಪತ್ರ
Edited By:

Updated on: Oct 17, 2025 | 3:21 PM

ಬೆಂಗಳೂರು, ಅಕ್ಟೋಬರ್ 17: ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ  (CM Siddaramaiah) ವಿಪಕ್ಷ ನಾಯಕ ಆರ್​.ಅಶೋಕ್ ಪತ್ರ ಬರೆದು ಮನವಿ ಮಾಡಿದ್ದಾರೆ. ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಶಿಫಾರಸ್ಸಿನ ಅನ್ವಯ ರಾಜ್ಯದಲ್ಲಿ ಅಂಗನವಾಡಿಗಳಿಗೆ ಸರಬರಾಜಾಗುತ್ತಿರುವ ಕಳಪೆ ಆಹಾರವನ್ನು ಕೂಡಲೇ ನಿಲ್ಲಿಸುವಂತೆ ಪತ್ರ ಬರೆಯಲಾಗಿದ್ದು, ಮೊದಲಿನಂತೆ ಸರ್ಕಾರಿ ಸ್ವಾಮ್ಯದ ಸಹಕಾರಿ ಸಂಸ್ಥೆಯಾದ ಜನತಾ ಬಜಾರ್ ಮೂಲಕ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸಬೇಕು ಎಂದು ಆಗ್ರಹಿಸಿದ್ದಾರೆ.

ಆರ್ ಅಶೋಕ್ ಬರೆದ ಪತ್ರದಲ್ಲೇನಿದೆ?

‘ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯು ಅಂಗನವಾಡಿಗಳಿಗೆ ಪೌಷ್ಟಿಕ ಆಹಾರ ಸರಬರಾಜು ಆಗುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿರುವುದಲ್ಲದೆ ಈ ಹಿಂದೆ ಅಂಗನವಾಡಿಗಳಿಗೆ ಒಳ್ಳೆಯ ಆಹಾರ ಪೂರೈಸಲಾಗುತ್ತಿತ್ತು ಎಂದೂ ಸ್ಪಷ್ಟವಾಗಿ ಹೇಳಿದೆ. ಅಲ್ಲದೆ ಇದೀಗ ಪೌಡರ್ ರೂಪದಲ್ಲಿ ಆಹಾರ ಸರಬರಾಜಾಗುತ್ತಿದ್ದು ಅದರಲ್ಲಿ ಪೌಷ್ಟಿಕಾಂಶ ಇದೆಯೋ ಇಲ್ಲವೋ ಗೊತ್ತಿಲ್ಲ. ಔಷಧಿ ರೂಪದಲ್ಲಿ ಆಹಾರ ಕೊಡುತ್ತಿದ್ದಾರೆ. ಗುಣಮಟ್ಟವಿಲ್ಲದ ಅಲ್ಪ ಪ್ರಮಾಣದ ಆಹಾರ ಪೂರೈಸುತ್ತಿರುವುದು ಕಂಡುಬಂದಿದೆ. ಹಾಗಾಗಿ ಮೊದಲು ಏನು ಆಹಾರ ಪೂರೈಸಲಾಗುತ್ತಿತ್ತೋ ಆ ರೀತಿಯ ಆಹಾರವನ್ನು ಈಗಲೂ ಸಹ ಪೂರೈಕೆ ಮಾಡಬೇಕೆಂದು ಸಮಿತಿಯು ತನ್ನ ಅಭಿಪ್ರಾಯ ವ್ಯಕ್ತಪಡಿಸಿರುವುದು ಕರ್ನಾಟಕ ರಾಜ್ಯದ ಬಡಮಕ್ಕಳ ಆರೋಗ್ಯಪೂರ್ಣ ಬೆಳವಣಿಗೆಯ ದೃಷ್ಟಿಯಿಂದ ಐತಿಹಾಸಿಕವಾದ ಹಾಗೂ ಮಹತ್ವದ ತೀರ್ಮಾನವಾಗಿದೆ.

ಇದನ್ನೂ ಓದಿ ಅನುಮತಿ ಇಲ್ಲದೆ ನಡೆಯುವ ನಮಾಜ್​ ನಿಷೇಧಿಸಿ: ಸಿಎಂಗೆ ಶಾಸಕ ಯತ್ನಾಳ್​ ಪತ್ರ

ಈ ಹಿನ್ನೆಲೆಯಲ್ಲಿ ಇದೀಗ ಸರಬರಾಜು ಮಾಡುತ್ತಿರುವ ಸಂಸ್ಥೆಗೆ ನೀಡಿರುವ ಆದೇಶವನ್ನು ರದ್ದುಪಡಿಸಿ, ಸರ್ಕಾರಿ ಸ್ವಾಮ್ಯದ ಸಹಕಾರಿ ಸಂಸ್ಥೆ ಜನತಾ ಬಜಾರ್ ಮೂಲಕ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಲು ಆದೇಶ ನೀಡುವುದು ಎಲ್ಲ ರೀತಿಯಲ್ಲೂ ಉತ್ತಮ ಕ್ರಮ ಆಗುತ್ತದೆ.

ಹಾಗಾಗಿ ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ-2024-25 ಸಮಿತಿಯ ಶಿಫಾರಸ್ಸಿನ ಅನ್ವಯ ಕೂಡಲೇ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ತಮ್ಮಲ್ಲಿ ಕೋರುತ್ತೇನೆ ‘ ಎಂದು ಅಶೋಕ್ ತಮ್ಮ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
Loading...
Unable to load recommendations.
Follow Us