ಸರ್ಕಾರಿ ನಿವಾಸಕ್ಕೆ ಆರ್ ಅಶೋಕ ಮನವಿ: ಡಿಕೆ ಶಿವಕುಮಾರ್​​ಗೆ ಹಂಚಿಕೆಯಾಗಿರುವ ನಿವಾಸಕ್ಕೇ ಬೇಡಿಕೆ

ಬೆಂಗಳೂರಿನ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ನಿವಾಸ ಒದಗಿಸುವಂತೆ ಅಶೋಕ ಮನವಿ ಮಾಡಿದ್ದಾರೆ. ಆದರೆ, ಸದ್ಯ ಈ ನಿವಾಸ ಡಿಸಿಎಂ ಡಿಕೆ‌ ಶಿವಕುಮಾರ್​​ಗೆ ಹಂಚಿಕೆಯಾಗಿದೆ. ಇದೇ ನಿವಾಸದಲ್ಲಿದ್ದು ಸಿದ್ದರಾಮಯ್ಯ ಎರಡು ಬಾರಿ ಸಿಎಂ ಆಗಿದ್ದಾರೆ.

ಸರ್ಕಾರಿ ನಿವಾಸಕ್ಕೆ ಆರ್ ಅಶೋಕ ಮನವಿ: ಡಿಕೆ ಶಿವಕುಮಾರ್​​ಗೆ ಹಂಚಿಕೆಯಾಗಿರುವ ನಿವಾಸಕ್ಕೇ ಬೇಡಿಕೆ
ಆರ್ ಅಶೋಕ
Follow us
| Updated By: ಗಣಪತಿ ಶರ್ಮ

Updated on: Jan 18, 2024 | 7:52 AM

ಬೆಂಗಳೂರು, ಜನವರಿ 18: ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಬಿಜೆಪಿ ನಾಯಕ ಆರ್. ಅಶೋಕ (R Ashoka) ಸರ್ಕಾರಿ ನಿವಾಸ ಒದಗಿಸುವಂತೆ ಮನವಿ ಮಾಡಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅಶೋಕ ಅವರು ವಿಧಾನಸಭೆ ವಿಪಕ್ಷ ನಾಯಕರಾಗಿ ಎರಡು ತಿಂಗಳು ಪೂರ್ಣಗೊಳ್ಳುತ್ತಿದೆ. ನಿರ್ದಿಷ್ಟ ಮೂರು ಸರ್ಕಾರಿ ಬಂಗಲೆ (Government Residence) ಕೇಳಿರುವ ಅಶೋಕ, ಡಿಸಿಎಂ ಮತ್ತು ಇಬ್ಬರು ಸಚಿವರಿಗೆ ಈಗಾಗಲೇ ಹಂಚಿಕೆಯಾಗಿರುವ ಮನೆಗಳಿಗೇ ಬೇಡಿಕೆ ಇಟ್ಟಿದ್ದಾರೆ.

ಬೆಂಗಳೂರಿನ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ನಿವಾಸ ಒದಗಿಸುವಂತೆ ಅಶೋಕ ಮನವಿ ಮಾಡಿದ್ದಾರೆ. ಆದರೆ, ಸದ್ಯ ಈ ನಿವಾಸ ಡಿಸಿಎಂ ಡಿಕೆ‌ ಶಿವಕುಮಾರ್​​ಗೆ ಹಂಚಿಕೆಯಾಗಿದೆ. ಇದೇ ನಿವಾಸದಲ್ಲಿದ್ದು ಸಿದ್ದರಾಮಯ್ಯ ಎರಡು ಬಾರಿ ಸಿಎಂ ಆಗಿದ್ದಾರೆ.

ರೇಸ್ ಕೋರ್ಸ್ ರಸ್ತೆಯಲ್ಲಿರುವ ರೇಸ್ ವ್ಯೂ ಕಾಟೇಜ್​ನಲ್ಲಿ ನಂಬರ್ 1 ಮತ್ತು ನಂಬರ್ 3 ನಿವಾಸಕ್ಕೆ ಕೂಡಾ ಅಶೋಕ್ ಬೇಡಿಕೆ ಇಟ್ಟಿದ್ದಾರೆ. ಸದ್ಯ ರೇಸ್ ವ್ಯೂ ಕಾಟೇಜ್​​ನ ನಂಬರ್ 1 ನಿವಾಸ ಸಚಿವ ಎಂಬಿ ಪಾಟೀಲ್​​ಗೆ ಹಂಚಿಕೆಯಾಗಿದೆ. ನಂಬರ್ 3 ನಿವಾಸ ಸಚಿವ ಪ್ರಿಯಾಂಕ್ ಖರ್ಗೆಗೆ ಹಂಚಿಕೆಯಾಗಿದೆ.

ಇದನ್ನೂ ಓದಿ: ಇಂದಿರಾ ಗಾಂಧಿ ಕುಟುಂಬಕ್ಕೆ ಗೋಪಾಷ್ಟಮಿ ಶಾಪ?; ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಯ ಅಸಲಿಯತ್ತೇನು?

ಜಯಮಹಲ್ ರಸ್ತೆಯಲ್ಲಿರುವ ಸರ್ಕಾರಿ ಬಂಗಲೆ ಆಯ್ದುಕೊಳ್ಳುವಂತೆ ವಿಪಕ್ಷ ನಾಯಕರಿಗೆ ಸರ್ಕಾರ ಸಲಹೆ ನೀಡಿದೆ. ಆದರೆ, ಅದಕ್ಕೆ ಒಪ್ಪದ ಅಶೋಕ ನಿರ್ದಿಷ್ಟ ಮೂರು ಬಂಗಲೆಗಳ ಪೈಕಿ ಒಂದು ಬಂಗಲೆಯನ್ನೇ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್​ಗೆ ಹಂಚಿಕೆಯಾಗಿರುವ ನಿವಾಸದ ಮೇಲೆಯೇ ಅಶೋಕ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ