AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಂಚಣಿದಾರರಿಗೆ ವರಮಹಾಲಕ್ಷ್ಮಿ ಹಬ್ಬದ ಬಂಪರ್ ಗಿಫ್ಟ್: ವಾರ್ಷಿಕ ಆದಾಯ ಮಿತಿ ಹೆಚ್ಚಿಸಿದ ಸರ್ಕಾರ

Pension Income Limit Hike: ಪಿಂಚಣಿ ಯೋಜನೆಯ ಫಲಾನುಭವಿಗಳ ವಾರ್ಷಿಕ ಆದಾಯ ಮಿತಿಯನ್ನು 32 ಸಾವಿರ ರೂ.ದಿಂದ 1,20 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. ಡಿಸಿಎಂ ಡಾ.ಜಿ.ಪರಮೇಶ್ವರ್​ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದು, ಜನರ ಬಹುಕಾಲದ ಸಮಸ್ಯೆ ಬಗೆಹರಿಸಿದ್ದೇವೆ ಎಂದು ಹೇಳಿದ್ದಾರೆ.

ಪಿಂಚಣಿದಾರರಿಗೆ ವರಮಹಾಲಕ್ಷ್ಮಿ ಹಬ್ಬದ ಬಂಪರ್ ಗಿಫ್ಟ್: ವಾರ್ಷಿಕ ಆದಾಯ ಮಿತಿ ಹೆಚ್ಚಿಸಿದ ಸರ್ಕಾರ
ParamonpinchaniImage Credit source: Getty images
ಗಂಗಾಧರ​ ಬ. ಸಾಬೋಜಿ
|

Updated on:Aug 19, 2026 | 8:59 PM

Share

ಮುಖ್ಯಾಂಶಗಳು

  • ಪಿಂಚಣಿ ಯೋಜನೆಯ ಫಲಾನುಭವಿಗಳ ಆದಾಯ ಮಿತಿ 1.20 ಲಕ್ಷಕ್ಕೆ ಹೆಚ್ಚಳ
  • ಜನರ ಬಹುಕಾಲದ ಸಮಸ್ಯೆ ಬಗೆಹರಿಸಿದ್ದೇವೆ ಎಂದ ಡಿಸಿಎಂ
  • 1.20 ಲಕ್ಷ ವರೆಗಿನ ಆದಾಯ ಹೊಂದಿರುವವರಿಗೆ ಪಿಂಚಣಿ ಮುಂದುವರಿಕೆ

ಬೆಂಗಳೂರು, ಆಗಸ್ಟ್​ 19: ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯ (Pension Scheme) ಫಲಾನುಭವಿಗಳಿಗೆ ರಾಜ್ಯ ಸರ್ಕಾರ (Government) ಸಿಹಿಸುದ್ದಿ ನೀಡಿದೆ. ಪಿಂಚಣಿ ಪಡೆಯಲು ಇದ್ದ ವಾರ್ಷಿಕ ಆದಾಯ ಮಿತಿಯನ್ನು 32 ಸಾವಿರ ರೂ.ದಿಂದ ಬರೋಬ್ಬರಿ 1.20 ಲಕ್ಷ ರೂ. ಹೆಚ್ಚಿಸಿ ಕಂದಾಯ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಇದರಿಂದಾಗಿ ಆದಾಯ ಮಿತಿಯ ಕಾರಣಕ್ಕೆ ಪಿಂಚಣಿ ಸಿಗದೆ ಸಂಕಷ್ಟದಲ್ಲಿದ್ದ ಲಕ್ಷಾಂತರ ಬಡ ಕುಟುಂಬಗಳ ಬಹುಕಾಲದ ಆತಂಕಕ್ಕೆ ಕೊನೆಗೂ ಮುಕ್ತಿ ಸಿಕ್ಕಂತಾಗಿದೆ.

ಜನರ ಬಹುಕಾಲದ ಸಮಸ್ಯೆ ಬಗೆಹರಿಸಿದ್ದೇವೆ: ಡಿಸಿಎಂ ಡಾ.ಜಿ.ಪರಮೇಶ್ವರ್‌

ಈ ಕುರಿತಾಗಿ ಡಿಸಿಎಂ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್​ ಟ್ವೀಟ್ ಮಾಡಿದ್ದು, ‘ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ 32 ಸಾವಿರ ರೂ.ದಿಂದ 1,20 ಲಕ್ಷ ರೂ ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರೆಸುವಂತೆ ಆದೇಶ ಹೊರಡಿಸಿದ್ದೇವೆ’ ಎಂದಿದ್ದಾರೆ.

ಸಚಿವ ಡಾ.ಜಿ.ಪರಮೇಶ್ವರ್​ ಟ್ವೀಟ್

‘ವಿವಿಧ ಸಾಮಾಜಿಕ ಪಿಂಚಣಿಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಇತ್ಯಾದಿಗಳಿಗೆ 32 ಸಾವಿರ ರೂ. ಆದಾಯ ಮಿತಿ ಇತ್ತು. ಬಹಳ ದಿನಗಳಿಂದ ಇದುವೇ ಆದಾಯ ಮಿತಿಯಿದ್ದ ಕಾರಣ ಲಕ್ಷಾಂತರ ಜನರು ಪಿಂಚಣಿ ಸೌಲಭ್ಯದಿಂದ ಹೊರಗೆ ಉಳಿದಿದ್ದರು. ಅದನ್ನು 1,20 ಲಕ್ಷ ರೂ.ಗೆ ಏರಿಕೆ ಮಾಡುವ ಮೂಲಕ ಬಹುಕಾಲದ ಸಮಸ್ಯೆಯನ್ನು ಬಗೆಹರಿಸಿದ್ದೇವೆ’ ಎಂದು ಹೇಳಿದ್ದಾರೆ.

ಲಕ್ಷಾಂತರ ಜನರ ಪಿಂಚಣಿ ತಾತ್ಕಾಲಿಕವಾಗಿ ಸ್ಥಗಿತ

‘ಕುಟುಂಬ ದತ್ತಾಂಶದಿಂದ ಪಡೆದ ಮಾಹಿತಿಗಳನ್ನು ರಾಜ್ಯದಲ್ಲಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿಯೊಂದಿಗೆ ಸಂಯೋಜಿಸಿದಾಗ 23,14,544 ಫಲಾನುಭವಿಗಳು ಸಂದೇಹಾಸ್ಪದ ಎಂದು ಕಂಡುಬಂದಿದ್ದು, ಈ ಫಲಾನುಭವಿಗಳ ಭೌತಿಕ ಪರಿಶೀಲನೆಗಾಗಿ ಸಂಯೋಜನೆ ಮೊಬೈಲ್‌ ಆ್ಯಪ್ ಸಿದ್ಧಪಡಿಸಿ ಪರಿಶೀಲನೆ ನಡೆಸಲಾಗಿತ್ತು. ಈ ಸಮಯದಲ್ಲಿ ದಾಖಲಾತಿಗಳನ್ನು ಹಾಜರುಪಡಿಸದ, ನೀಡಿದ ವಿಳಾಸದಲ್ಲಿ ವಾಸವಿಲ್ಲದಿದ್ದ ಮತ್ತು ಆದಾಯ ದೃಢೀಕರಣ ಪತ್ರ ಹಾಜರುಪಡಿಸದಿದ್ದ 18,06,032 ಮಂದಿಯ ಪಿಂಚಣಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು’.

ಇದನ್ನೂ ಓದಿ: ಅಕೌಂಟ್​​​​ನಿಂದ ಹಣ ಕಡಿತ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ದಂಡ ವಿಧಿಸಿದ ಶಿವಮೊಗ್ಗ ಗ್ರಾಹಕ ಆಯೋಗ

‘ಗ್ರಾಮ ಆಡಳಿತಾಧಿಕಾರಿಗಳು ಸಂಯೋಜನೆ ಮೊಬೈಲ್‌ ಆ್ಯಪ್ ಮೂಲಕ ಪರಿಶೀಲಿಸಿದ ನಂತರ ಸಂಬಂಧಪಟ್ಟ ತಾಲೂಕು ತಹಶೀಲ್ದಾರರಿಂದ ನಿಯಮಾನುಸಾರ ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ನೀಡಲು ನಿರ್ದೇಶನ ನೀಡಲಾಗಿದೆ. ಆದರೆ, 23,14,544 ಸಂದೇಹಾಸ್ಪದ ಫಲಾನುಭವಿಗಳ ಭೌತಿಕ ಪರಿಶೀಲನೆ ಸಮಯದಲ್ಲಿ ಆದಾಯವು 32 ಸಾವಿರ ರೂ.ಕ್ಕಿಂತ ಹೆಚ್ಚಿರುವುದು ಕಂಡುಬಂತು. 23,14,544 ಮಂದಿಯ ಪೈಕಿ 32 ಸಾವಿರ ರೂ.ಕ್ಕಿಂತ ಹೆಚ್ಚು ಹಾಗೂ 1.20 ಲಕ್ಷ ರೂ.ಕ್ಕಿಂತ ಕಡಿಮೆ ವಾರ್ಷಿಕ ಆದಾಯ ಇರುವಂತಹ ಫಲಾನುಭವಿಗಳ ಪಿಂಚಣಿಯನ್ನು ಮುಂದುವರೆಸುವಂತೆ ಈ ಮೊದಲು ಸೂಚಿಸಿದ್ದೆ. ಅದರಂತೆ 23,14,544 ಮಂದಿಯ ಪೈಕಿ ಪರಿಶೀಲನೆಯ ನಂತರ 32 ಸಾವಿರ ರೂ.ಕ್ಕಿಂತ ಹೆಚ್ಚು ಹಾಗೂ 1.20 ಲಕ್ಷ ರೂ ಒಳಗಿನ ವಾರ್ಷಿಕ ಆದಾಯ ಮಿತಿಯನ್ನು ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರಿಸಲು ತೀರ್ಮಾನಿಸಿದ್ದೇವೆ’ ಎಂದು ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:58 pm, Wed, 19 August 26

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!