ಆಂಧ್ರದ ಅನಂತಪುರ ಬಳಿ ಭೀಕರ ಅಪಘಾತ: ಕರ್ನಾಟಕದ ನಾಲ್ವರು ಸ್ಥಳದಲ್ಲೇ ಸಾವು

ಹೆದ್ದಾರಿಯ ಪಕ್ಕದಲ್ಲಿ ನಿಂತಿದ್ದ ಕಾರಿಗೆ ಮಿನಿ ಲಾರಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಂಧ್ರದ ಅನಂತಪುರ ಬಳಿ ಭೀಕರ ಅಪಘಾತ:  ಕರ್ನಾಟಕದ ನಾಲ್ವರು ಸ್ಥಳದಲ್ಲೇ ಸಾವು
ಸಾಂದರ್ಭಿಕ ಚಿತ್ರ
Updated By: Lakshmi Hegde

Updated on: Dec 24, 2020 | 6:38 PM

ಹೈದರಾಬಾದ್: ಆಂಧ್ರಪ್ರದೇಶದ ಅನಂತಪುರಂ ಬಳಿ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಇನ್ನೋರ್ವನಿಗೆ ಗಂಭೀರ ಗಾಯವಾಗಿದೆ.

ಹೆದ್ದಾರಿಯ ಪಕ್ಕದಲ್ಲಿ ನಿಂತಿದ್ದ KA 03 MJ 5580 ಕಾರಿಗೆ ಹಿಂಬಂದಿಯಿಂದ ಮಿನಿ ಲಾರಿ ಡಿಕ್ಕಿ ಹೊಡೆದಿದ್ದು, ಮೃತರು ಕರ್ನಾಟಕ ಮೂಲದವರೆಂದು ತಿಳಿದುಬಂದಿದೆ.

ನಿಯಂತ್ರಣ ತಪ್ಪಿದ ಕಾರು: ಸ್ಥಳದಲ್ಲೇ ವ್ಯಕ್ತಿ ಸಾವು, ಇಬ್ಬರಿಗೆ ಗಾಯ