ರಾಜ್ಯದ ಜನರಿಗೆ ಆದಷ್ಟು ಬೇಗ ಸಿಗಲಿದೆ ಅನ್ನಭಾಗ್ಯ ಯೋಜನೆಯ ಅಕ್ಕಿ: ಸಚಿವ ಮುನಿಯಪ್ಪ ಹೇಳಿದ್ದಿಷ್ಟು

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಅಂದ್ರೂ ಖರೀದಿಸುತ್ತಿಲ್ಲ ಎಂಬ ಆರೋಪ ಇತ್ತೀಚೆಗೆ ಕೇಳಿಬಂದಿತ್ತು. ಇದೀಗ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡಲು ಮುಂದಾಗಿದೆ. ಹಾಗಾಗಿ ಹೀಗಾಗಿ ಆದಷ್ಟು ಬೇಗ ಡಿಬಿಟಿ ಮೂಲಕ ಹಣ ಹಾಕುವ ಬದಲು ಅಕ್ಕಿ‌ ಕೊಡುತ್ತೇವೆ ಎಂದು ಕಲಬುರಗಿಯಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.

ರಾಜ್ಯದ ಜನರಿಗೆ ಆದಷ್ಟು ಬೇಗ ಸಿಗಲಿದೆ ಅನ್ನಭಾಗ್ಯ ಯೋಜನೆಯ ಅಕ್ಕಿ: ಸಚಿವ ಮುನಿಯಪ್ಪ ಹೇಳಿದ್ದಿಷ್ಟು
ರಾಜ್ಯದ ಜನರಿಗೆ ಆದಷ್ಟು ಬೇಗ ಸಿಗಲಿದೆ ಅನ್ನಭಾಗ್ಯ ಯೋಜನೆಯ ಅಕ್ಕಿ: ಸಚಿವ ಮುನಿಯಪ್ಪ ಹೇಳಿದ್ದಿಷ್ಟು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 17, 2024 | 3:14 PM

ಕಲಬುರಗಿ, ಸೆಪ್ಟೆಂಬರ್​​ 17: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಕೊಡಲು ಇದೀಗ ಮುಂದಾಗಿದೆ. ಹಾಗಾಗಿ ಡಿಬಿಟಿ ಮೂಲಕ ಹಣ ಹಾಕುವ ಬದಲು ಜನರಿಗೆ ಅಕ್ಕಿ‌ ಕೊಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ (KH Muniyappa) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಡತನಗಿಂತ ಕೆಳಗಿರುವವರಿಗೆ ಮಾತ್ರ ಬಿಪಿಎಲ್​ ಕಾರ್ಡ್​ ಮುಂದುವರಿಸುತ್ತೇವೆ. ಅನರ್ಹ ಬಿಪಿಎಲ್ ಕಾರ್ಡ್​​ಗಳನ್ನ ರದ್ದು ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ ಹೊಸ ಬಿಪಿಎಲ್ ಕಾರ್ಡ್​​ಗಾಗಿ ಸಾಕಷ್ಟು ಅರ್ಜಿಗಳು ಬಂದಿವೆ. ಸರ್ವರ್ ಸಮಸ್ಯೆ ಬಗೆಹರಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​ ಐದು ಗ್ಯಾರಂಟಿ ಯೋಜನೆಗಳ ಪೈಕಿ ಈ ಅನ್ನಭಾಗ್ಯ ಯೋಜನೆ ಕೂಡ ಒಂದು. ಅನ್ನಭಾಗ್ಯ ಯೋಜನೆಯಡಿ ಕರ್ನಾಟಕ ಸರ್ಕಾರದ ಪಾಲಿನ ಉಚಿತ 5 ಕೆಜಿ ಅಕ್ಕಿ ನೀಡುವ ವಿಚಾರಕ್ಕೆ ಕೇಂದ್ರ ಮತ್ತು ರಾಜ್ಯದ ಮಧ್ಯೆ ಜಟಾಪಟಿ ನಡೆಯುತ್ತಿತ್ತು.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆ: ಅಕ್ಕಿ ಬದಲು ಹಣವಲ್ಲ, ಇನ್ನು ಸಿಗಲಿದೆ ಎಣ್ಣೆ, ಬೇಳೆ, ಸಕ್ಕರೆ

ಹಸಿವುಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಜನತೆಗೆ ಪೂರೈಸುವಷ್ಟು ಅಕ್ಕಿ ಪೂರೈಸಲು ಸಾಧ್ಯವಾಗದೇ ಸರ್ಕಾರ ಪೇಚಿಗೆ ಸಿಲುಕಿತ್ತು. ಬಳಿಕ ಅಕ್ಕಿ ಬದಲಾಗಿ ಹಣ ನೀಡಲು ಮುಂದಾಗಿತ್ತು.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆ: ಕರ್ನಾಟಕಕ್ಕೆ ಅಕ್ಕಿ ಕೊಡಲು ಕೇಂದ್ರ ಸಿದ್ಧ; ಆಹಾರ ಸಚಿವ ಪ್ರಲ್ಹಾದ್ ಜೋಶಿ ಘೋಷಣೆ

ತದನಂತರದ ದಿನಗಳಲ್ಲಿ ಅಕ್ಕಿ ನೀಡುವಂತೆ ಸಾಕಷ್ಟು ಬಾರಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರ ಅಕ್ಕಿಯನ್ನು ನೀಡಿರಲಿಲ್ಲ. ಹಾಗಾಗಿ 5ಕೆಜಿ ಅಕ್ಕಿ ಬದಲಾಗಿ ಹಣ ನೀಡುವುದನ್ನು ಮುಂದುವರೆಸುವುದಾಗಿ ಇತ್ತೀಚೆಗೆ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿತ್ತು. ಬಳಿಕ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಅಂದ್ರೂ ಖರೀದಿಸುತ್ತಿಲ್ಲ ಎಂದು ಆರೋಪ ಕೂಡ ಇತ್ತೀಚೆಗೆ ಕೇಳಿಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ