AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಜಿ CET ಅಭ್ಯರ್ಥಿಗಳಿಗೆ ಗುಡ್​ ನ್ಯೂಸ್: 4 ಚಾಯ್ಸ್ ದಾಖಲಿಸಲು ಅವಕಾಶ ನೀಡಿದ ಕೆಇಎ

ಎಂಬಿಎ, ಎಂಸಿಎ ಮತ್ತು ಎಂಇ ಕೋರ್ಸುಗಳ ಸೀಟು ಹಂಚಿಕೆ ಸಂಬಂಧ ಪಿಜಿಸಿಇಟಿ ಅಭ್ಯರ್ಥಿಗಳು ನಡೆಸಿದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ.ಆರ್ಕ್ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಎಲ್ಲ ನಾಲ್ಕು ಚಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.

ಪಿಜಿ CET ಅಭ್ಯರ್ಥಿಗಳಿಗೆ ಗುಡ್​ ನ್ಯೂಸ್:  4 ಚಾಯ್ಸ್ ದಾಖಲಿಸಲು ಅವಕಾಶ ನೀಡಿದ ಕೆಇಎ
KEA
ವಿನಯ್​ ಕಾಶಪ್ಪನವರ್​
| Edited By: |

Updated on: Oct 09, 2026 | 6:40 PM

Share

ಬೆಂಗಳೂರು, (ಅಕ್ಟೋಬರ್ 09):  ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ.ಆರ್ಕ್ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಎಲ್ಲ ನಾಲ್ಕು ಚಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಪಿಜಿಸಿಇಟಿ ಅಭ್ಯರ್ಥಿಗಳು ಮೊದಲ ಸುತ್ತಿನಲ್ಲಿ ಸೀಟು ಪಡೆದವರಿಗೆ 4 ಚಾಯ್ಸ್ ದಾಖಲಿಸಲು ಅಕ್ಟೋಬರ್ 13ರ ಬೆಳಗ್ಗೆ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಈಗಾಗಲೇ ಕಾಲೇಜು ಪ್ರವೇಶ ಪಡೆದವರಿಗೂ ಅವಕಾಶ ಕಲ್ಪಿಸಲಾಗಿದೆ.

ಎರಡನೇ ಸುತ್ತು ಸೀಟು ಹಂಚಿಕೆ ಮಾಡುವಂತೆ ವಿದ್ಯಾರ್ಥಿಗಳು ಮತ್ತು ಎಬಿವಿಪಿ ಸಂಘಟನೆ ಪ್ರತಿಭಟನೆ ಮಾಡಿತ್ತು. ಈಗ ವಿದ್ಯಾರ್ಥಿಗಳ ಪ್ರತಿಭಟನೆಗೆ ಕೆಇಎ ಮಣಿದು ಚಾಯ್ಸ್ ದಾಖಲೆಗೆ ಅವಕಾಶ ನೀಡಿದೆ. ಈ ಸಂಬಂಧ ಕೆಇಎ (KEA) ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಅ.13ರಂದು ಬೆಳಿಗ್ಗೆ 10 ಗಂಟೆವರೆಗೆ ಚಾಯ್ಸ್ ಹಾಕಬಹುದು. ಈಗಾಗಲೇ ಕಾಲೇಜುಗಳಲ್ಲಿ ಪ್ರವೇಶ ಪಡೆದವರು ಹಾಗೂ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡವರಿಗೆ ಚಾಯ್ಸ್-2 ದಾಖಲಿಸಿ ಇನ್ನೂ ಉತ್ತಮ ಸೀಟಿಗೆ ಅಪ್ ಗ್ರೇಡ್ ಆಗಲು ಅವಕಾಶ ನೀಡಲಾಗಿದೆ. ಅಲ್ಲದೆ ಅ.13ರಂದು ಮಧ್ಯಾಹ್ನ 2ರಿಂದ ಅ.15ರ ಬೆಳಿಗ್ಗೆ 10ಗಂಟೆವರೆಗೆ ಆಪ್ಷನ್ಸ್ ಅನ್ನು ಮೇಲೆ-ಕೆಳಗೆ (Re-Arrange) ಮಾಡಿಕೊಳ್ಳುವುದಕ್ಕೂ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.

ಪಿಜಿಸಿಇಟಿಗೆ ಇನ್ನೂ ಎರಡು ಸುತ್ತಿನ ಕೌನ್ಸೆಲಿಂಗ್ ನಡೆಸಲು ಅವಕಾಶ ನೀಡಬೇಕೆಂದು ಹಾಗೂ ಯುಜಿ ಮತ್ತು ಪಿಜಿ ಕೋರ್ಸ್‌ಗಳ ಪ್ರವೇಶಕ್ಕೆ ಪ್ರತ್ಯೇಕ ವೇಳಾಪಟ್ಟಿ ನೀಡಲು ಎಐಸಿಟಿಎಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿ ಎಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಮುಂದಿನ ತೀರ್ಮಾನದವರೆಗೆ ನಾಲ್ಕು ಚಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ.

ಚಾಯ್ಸ್-1 ದಾಖಲಿಸಿದರೆ ಕಾಲೇಜಿಗೆ ಪ್ರವೇಶ ಪಡೆಯಬೇಕು. ಚಾಯ್ಸ್-2 ದಾಖಲಿಸಿದರೆ ಇನ್ನೂ ಉತ್ತಮ ಸೀಟಿಗೆ ಅಪ್ ಗ್ರೇಡ್ ಆಗಲು ಅನುವು ಮಾಡುತ್ತದೆ. ಚಾಯ್ಸ್-3 ಹಾಕಿದರೆ ಸಿಕ್ಕಿರುವ ಸೀಟು ಬೇಡ ಎಂದು ಹಾಗೂ ಚಾಯ್ಸ್-4 ಹಾಕಿದರೆ ಯಾವುದೂ ಬೇಡ ಎಂದು ಇಡೀ ಕೌನ್ಸೆಲಿಂಗ್ ಪ್ರಕ್ರಿಯೆಯಿಂದ ಹೊರ ಹೋಗಲು ಅವಕಾಶ ನೀಡುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!