AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯಾಗುವ ಕನಸು ಕಾಣುವ ಮಹಿಳೆಯರಿಗೆ ಆರೋಗ್ಯ ಇಲಾಖೆ ಗುಡ್ ನ್ಯೂಸ್

ತಾಯಿಯಾಗುವ ಕನಸು ಕಾಣುವ ಮಹಿಳೆಯರಿಗೆ ಆರೋಗ್ಯ ಇಲಾಖೆ ಗುಡ್ ನ್ಯೂಸ್ ನೀಡಿದೆ.. ಗರ್ಭಧಾರಣೆಯಾದ ಬಳಿಕವಷ್ಟೇ ಆರೋಗ್ಯ ತಪಾಸಣೆ ಮಾಡಿಸುವ ಪದ್ಧತಿಗೆ ಬದಲಾಗಿ, ಗರ್ಭಧಾರಣೆಗೆ ಮುನ್ನವೇ ಮಹಿಳೆಯರ ಆರೋಗ್ಯ ತಪಾಸಣೆ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಇದು ದೇಶದಲ್ಲೇ ಪ್ರಥಮ. ಏನಿದು ಆರೋಗ್ಯ ತಪಾಸಣೆ? ಆರೋಗ್ಯ ತಪಾಸಣೆ ಹಿಂದಿನ ಉದ್ದೇಶವೇನು ಎನ್ನುವ ವಿವರ ಇಲ್ಲಿದೆ.

ತಾಯಿಯಾಗುವ ಕನಸು ಕಾಣುವ ಮಹಿಳೆಯರಿಗೆ ಆರೋಗ್ಯ ಇಲಾಖೆ ಗುಡ್ ನ್ಯೂಸ್
Pregnancy Care
ವಿನಯ್​ ಕಾಶಪ್ಪನವರ್​
| Edited By: |

Updated on: Sep 27, 2026 | 6:17 PM

Share

ಬೆಂಗಳೂರು, (ಸೆಪ್ಟೆಂಬರ್ 27): ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ Pre-Pregnancy Care Unitಗಳನ್ನು ಆರಂಭಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ತಾಯಿ ಮತ್ತು ಮಗುವಿನ ಆರೋಗ್ಯ ಕಾಪಾಡುವುದು, ತಾಯಿ ಮರಣ ಪ್ರಮಾಣ ಕಡಿಮೆ ಮಾಡುವುದು ಹಾಗೂ ಸುರಕ್ಷಿತ ಹೆರಿಗೆಗೆ ಆದ್ಯತೆ ನೀಡುವ ಪ್ರಮುಖ ಉದ್ದೇಶದಿಂದ ದೇಶದಲ್ಲೇ ಪ್ರಥಮ ಬಾರಿಗೆ ಸಮಗ್ರ ವ್ಯವಸ್ಥೆ ರೂಪಿಸುವತ್ತ ಕರ್ನಾಟಕ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆಗೆ ಕೈ ಹಾಕಿದೆ.

ಏನಿದರ ಉದ್ದೇಶ?

ಗರ್ಭಧಾರಣೆಯಾದ ಬಳಿಕ ಮಾತ್ರವಲ್ಲ, ಗರ್ಭಧಾರಣೆಗೆ ಮುನ್ನವೇ ಮಹಿಳೆಯ ಆರೋಗ್ಯದ ಮೇಲೆ ನಿಗಾ ಇಡುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.  ಮಹಿಳೆಯ ಆರೋಗ್ಯ ಸ್ಥಿತಿ, ಪೌಷ್ಟಿಕತೆ ಹಾಗೂ ಗರ್ಭಧಾರಣೆಗೆ ಸಂಬಂಧಿಸಿದ ಅಪಾಯಗಳನ್ನು ಮೊದಲೇ ಗುರುತಿಸಿ ಸೂಕ್ತ ಆರೈಕೆ ನೀಡಲು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಇದರ ಜೊತೆಗೆ ಗರ್ಭಿಣಿಯರಿಗೆ ಗುಣಮಟ್ಟದ ಪ್ರಸವಪೂರ್ವ ಆರೈಕೆ Quality Antenatal Care Programmeಗೆ ಹೆಚ್ಚಿನ ಒತ್ತು ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ.

ಇದನ್ನೂ ಓದಿ: 86 ರೂ. ಔಷಧಿಗೆ 4528 ಎಂಆರ್​​​ಪಿ: ರೋಗಿಗಳನ್ನ ಸುಲಿಗೆ ಮಾಡ್ತಿದ್ದ ಆಸ್ಪತ್ರೆ, ಕಂಪನಿಗಳ ಕಳ್ಳಾಟ ಬಯಲು

ರಾಜ್ಯದಲ್ಲಿ ತಾಯಿ ಮರಣ ಪ್ರಮಾಣವನ್ನು ಮತ್ತಷ್ಟು ಕಡಿಮೆ ಮಾಡಿ ಶೂನ್ಯ ತಾಯಿ ಮರಣದ ಗುರಿ ಸಾಧಿಸುವತ್ತ ಸರ್ಕಾರದ ಗಮನ ಹರಿಸಿದ್ದು, ತಾಯಿ ಮರಣಕ್ಕೆ ಕಾರಣವಾಗುವ ಪ್ರಮುಖ ಅಂಶಗಳನ್ನು ಗುರುತಿಸಿ, ಆರಂಭಿಕ ಹಂತದಲ್ಲೇ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿದೆ. ಗರ್ಭಿಣಿಯರ ಆರೋಗ್ಯ ತಪಾಸಣೆ, ಪೌಷ್ಟಿಕತೆ, ಸುರಕ್ಷಿತ ಹೆರಿಗೆ ಹಾಗೂ ಹೆರಿಗೆಯ ನಂತರದ ಆರೈಕೆಗೆ ಹೆಚ್ಚಿನ ಒತ್ತು ನೀಡಲು ಇದನ್ನು ಜಾರಿಗೆ ತರುತ್ತಿದೆ.

ಒಟ್ನಲ್ಲಿ ತಾಯಿ ಮರಣ ತಡೆ ಕೇವಲ ಆಸ್ಪತ್ರೆಗಳಿಗೆ ಸೀಮಿತವಾಗದೆ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಜಾಗೃತಿ ಮೂಡಿಸಲು ಮುಂದಾಗಿದ್ದು, ಗರ್ಭಧಾರಣೆಗೆ ಮುನ್ನ ಮಹಿಳೆಯರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು, ಅಗತ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಪ್ರೋತ್ಸಾಹಿಸುವುದು ಹಾಗೂ ಅಪಾಯದ ಗರ್ಭಧಾರಣೆಗಳನ್ನು ಮೊದಲೇ ಗುರುತಿಸಲು ಆರೋಗ್ಯ ಇಲಾಖೆ ಈ ಮಹತ್ವದ ಯೋಜನೆಗೆ ಕೈ ಹಾಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಚಾಮರಾಜನಗರ ಆದಿವಾಸಿಗಳಿಗೆ ಆಹಾರ ಕಿಟ್ ಸ್ಥಗಿತ
ಚಾಮರಾಜನಗರ ಆದಿವಾಸಿಗಳಿಗೆ ಆಹಾರ ಕಿಟ್ ಸ್ಥಗಿತ
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ
ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ
ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ
ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ