AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Police: ಕರ್ನಾಟಕದ 11 ಪೊಲೀಸರಿಗೆ ಕೇಂದ್ರ ಗೃಹಮಂತ್ರಿ ಪದಕ ಘೋಷಣೆ

ವಿಶೇಷ ಕಾರ್ಯಾಚರಣೆಗೆ ನೀಡುವ ಕೇಂದ್ರ ಗೃಹಮಂತ್ರಿ ಪದಕ ಕರ್ನಾಟಕ ರಾಜ್ಯದ 11 ಮಂದಿ ಪೊಲೀಸರಿಗೆ ಲಭ್ಯವಾಗಿದೆ. ಐಪಿಎಸ್ ಅಧಿಕಾರಿ ಸಂತೋಷ್ ಬಾಬುಗೆ ಪದಕ ಘೋಷಣೆ ಮಾಡಲಾಗಿದೆ.

Karnataka Police: ಕರ್ನಾಟಕದ 11 ಪೊಲೀಸರಿಗೆ ಕೇಂದ್ರ ಗೃಹಮಂತ್ರಿ ಪದಕ ಘೋಷಣೆ
ಕರ್ನಾಟಕ ಪೊಲೀಸ್ ಇಲಾಖೆ
TV9 Web
| Edited By: |

Updated on:Oct 31, 2021 | 4:16 PM

Share

ಬೆಂಗಳೂರು: ಕರ್ನಾಟಕದ 11 ಪೊಲೀಸರಿಗೆ ಕೇಂದ್ರ ಗೃಹಮಂತ್ರಿ ಪದಕ ಘೋಷಣೆ ಆಗಿದೆ. ವಿಶೇಷ ಕಾರ್ಯಾಚರಣೆಗೆ ನೀಡುವ ಕೇಂದ್ರ ಗೃಹಮಂತ್ರಿ ಪದಕ ಕರ್ನಾಟಕ ರಾಜ್ಯದ 11 ಮಂದಿ ಪೊಲೀಸರಿಗೆ ಲಭ್ಯವಾಗಿದೆ. ಐಪಿಎಸ್ ಅಧಿಕಾರಿ ಸಂತೋಷ್ ಬಾಬುಗೆ ಪದಕ ಘೋಷಣೆ ಮಾಡಲಾಗಿದೆ. ಇನ್ಸ್​ಪೆಕ್ಟರ್​ಗಳಾದ ಜಿ.ಬಾಲರಾಜ್, ಪಿ.ಶಶಿಕುಮಾರ್​, ಹೆಚ್.ವಿ. ಸುದರ್ಶನ್, ಎಸ್.ಆರ್. ಶ್ರೀಧರ್​ಗೆ ಪದಕ ಲಭಿಸಿದೆ. ಎಎಸ್​ಐಗಳಾದ ಶೌಖತ್ ಅಲಿ, ಫಕ್ರುದ್ದೀನ್, ಅಕ್ಬರ್ ಸೋಮಶೇಖರ್​, ಕೃಷ್ಣ ದೇವೇಗೌಡಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಗೃಹ ಸಚಿವ ಆರಗ ಜ್ಞಾನೇಂದ್ರರಿಂದ ಪೊಲೀಸ್ ಸಿಬ್ಬಂದಿಗೆ ಅಭಿನಂದನೆ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ವೇಳೆ ಭದ್ರತೆ ಒದಗಿಸಿದ ಪೊಲೀಸ್ ಸಿಬ್ಬಂದಿಯನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ ಪ್ರಶಂಸಿದ್ದಾರೆ. ನಟ ಪುನೀತ್ ಅಂತಿಮ ದರ್ಶನ, ಅಂತಿಮ ಯಾತ್ರೆ ಸಂದರ್ಭದಲ್ಲಿ ಹಗಲು-ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸಿದ ಪೊಲೀಸರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಸಿಬ್ಬಂದಿಯ ಕೈ ಕುಲುಕಿ ಕಮಲ್ ಪಂತ್ ಧನ್ಯವಾದ ತಿಳಿಸಿದ್ದಾರೆ.

ಅತ್ಯಂತ ಶಿಸ್ತುಬದ್ಧವಾಗಿ, ಎಷ್ಟೇ ಕಷ್ಟಗಳಿದ್ದರೂ, ಪರಿಸ್ಥಿತಿಯನ್ನು ಸವಾಲಾಗಿ ಸ್ವೀಕರಿಸಿದ್ದಾರೆ. ಶಿಸ್ತುಬದ್ಧವಾಗಿ ನಿಭಾಯಿಸಿದ ಪೊಲೀಸ್, ಬಿಬಿಎಂಪಿ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: ನಟ ಪುನೀತ್ ಅಂತ್ಯಕ್ರಿಯೆ; ಭದ್ರತೆ ಒದಗಿಸಿದ ಪೊಲೀಸ್ ಸಿಬ್ಬಂದಿಯನ್ನು ಪ್ರಶಂಸಿಸಿದ ಕಮಲ್ ಪಂತ್

ಇದನ್ನೂ ಓದಿ: ಚನ್ನಪಟ್ಟಣ ಡಿವೈಎಸ್​​ಪಿ ರಮೇಶ್ ಪೊಲೀಸ್​ ಸಮವಸ್ತ್ರದಲ್ಲಿಯೇ ಭಜನೆಗೆ ಕುಳಿತರು!

Published On - 4:13 pm, Sun, 31 October 21

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ