ಸೈಬರ್​ ಕ್ರೈಂ ತಡೆಗಟ್ಟಲು ರಾಜ್ಯ ಪೊಲೀಸ್​ ಇಲಾಖೆಯಿಂದ ಸಹಾಯವಾಣಿ ಆರಂಭ

|

Updated on: Jul 20, 2024 | 3:04 PM

ರಾಜ್ಯದಲ್ಲಿ ಸೈಬರ್ ವಂಚಕರ ಹಾವಳಿ ಮಿತಿ ಮೀರಿದ್ದು, ಪ್ರತಿ ವರ್ಷ ಹತ್ತು ಸಾವಿರಕ್ಕು ಅಧಿಕ ಪ್ರಕರಣಗಳು ದಾಖಲಾಗುತ್ತಿವೆ. ಸೈಬರ್​​ ವಂಚಕರ ಬಲೆಗೆ ಬಿದ್ದು ಜನರು ಕೋಟ್ಯಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಸೈಬರ್​ ಕ್ರೈಂ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್​ ಇಲಾಖೆ ಸಹಾಯವಾಣಿ ಆರಂಭಿಸಿದೆ.

ಸೈಬರ್​ ಕ್ರೈಂ ತಡೆಗಟ್ಟಲು ರಾಜ್ಯ ಪೊಲೀಸ್​ ಇಲಾಖೆಯಿಂದ ಸಹಾಯವಾಣಿ ಆರಂಭ
ಸೈಬರ್​ ಕ್ರೈಂ
Follow us on

ಬೆಂಗಳೂರು, ಜುಲೈ 20: ಇತ್ತೀಚಿಗೆ ಕರ್ನಾಟಕದಲ್ಲಿ ಸೈಬರ್​ ವಂಚನೆ (Cyber Crime) ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲಂತೂ ಬೆಂಗಳೂರಿನಲ್ಲಿ (Bengaluru) ಸೈಬರ್​ ವಂಚನೆ ಅಧಿಕವಾಗಿದೆ. ನಗರದಲ್ಲಿ ಸೈಬರ್ ವಂಚಕರ ಹಾವಳಿ ಮಿತಿ ಮೀರಿದ್ದು, ಪ್ರತಿ ವರ್ಷ ಹತ್ತು ಸಾವಿರಕ್ಕು ಅಧಿಕ ಪ್ರಕರಣಗಳು ದಾಖಲಾಗುತ್ತಿವೆ. ಸೈಬರ್​​ ವಂಚಕರ (Cyber ​​fraud) ಬಲೆಗೆ ಬಿದ್ದು ಜನರು ಕೋಟ್ಯಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಸೈಬರ್​ ಕ್ರೈಂ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್​ ಇಲಾಖೆ 1930 ಎಂಬ ಸಹಾಯವಾಣಿ ಆರಂಭಿಸಿದೆ.

ಈ ಕುರಿತು ಟ್ವೀಟ್​ ಮಾಡಿದ ರಾಜ್ಯ ಪೊಲೀಸ್​ ಇಲಾಖೆ, “ಆತ್ಮೀಯ ಆನ್​ಲೈನ್​ ಬಳಕೆದಾರರೇ ಸೈಬರ್​ ವಂಚನೆಯಿಂದ ದೂರ ಇರಲು ನಿಮ್ಮ ನಡೆಯ ಯಾವುದೇ ಸುಳಿವು ವಂಚಕರಿಗೆ ನೀಡಬೇಡಿ. ಒಂದು ವೇಳೆ ನೀವು ಸೈಬರ್​ ಬಲೆಯಲ್ಲಿ ಸಿಲುಕಿದ್ದರೆ ಹತ್ತರಿದ ಪೊಲೀಸ್​ ಠಾಣೆಗೆ ದೂರು ನೀಡಿ. ಅಥವಾ ಸೈಬರ್​ ಕ್ರೈಂ ಸಹಾಯವಾಣಿ 1930 ಗೆ ಕರೆ ಮಾಡಿ” ಎಂದು ಸಾಮಾಜಿಕ ಮಾಧ್ಯಮ ಎಕ್ಸ್​​ ಖಾತೆಯಲ್ಲಿ ಟ್ವೀಟ್​​ ಮಾಡಿದ್ದಾರೆ.

ಇದನ್ನೂ ಓದಿ: ಸೈಬರ್​ ವಂಚನೆಗೆ ಹೊಸ ದಾರಿ: ಮನೆಗೆ ಬರುತ್ತೆ ಕೂಪನ್​​​, ಸ್ಕ್ಯಾನ್​ ಮಾಡಿದರೆ ನಿಮ್ಮ ಖಾತೆಯಲ್ಲಿನ ಹಣ ಮಾಯ

ವಿಶೇಷವಾಗಿದೆ ಪೊಲೀಸ್​ ಇಲಾಖೆ ಟ್ವೀಟ್​

ಶುಕ್ರವಾರ ಮೈಕ್ರೋಸಾಫ್ಟ್ ಕ್ಲೌಡ್ ಸರ್ವೀಸ್​ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಜಾಗತಿಕವಾಗಿ ತಾಂತ್ರಿಕ ಬಿಕ್ಕಟ್ಟು ತಲೆದೋರಿತ್ತು. ಲಕ್ಷಾಂತರ ಜನರು ಬ್ಲೂ ಸ್ಕ್ರೀನ್ ಆಫ್ ಡೆತ್ (BSOD) ದೋಷವನ್ನು ಎದುರಿಸಿದ್ದರು. ಈ ಬ್ಲೂ ಸ್ಕ್ರೀನ್​ಲ್ಲೇ ರಾಜ್ಯ ಪೊಲೀಸ್​ ಇಲಾಖೆ ಸೈಬರ್​ ವಂಚಕರಿಂದ ಎಚ್ಚರ ವಹಿಸಿ ಎಂಬ ಸಂದೇಶ ಬರೆದು ಟ್ವೀಟ್​ ಮಾಡಿದ್ದಾರೆ.

ಕಳೆದ 3 ವರ್ಷಗಳಲ್ಲಿ 1.25 ಲಕ್ಷ ಕೋಟಿ ರೂ ಸೈಬರ್ ವಂಚನೆಗಳು!

ಕಳೆದ ಮೂರು ವರ್ಷಗಳಲ್ಲಿ 1.25 ಲಕ್ಷ ಕೋಟಿ ರೂ ಡಿಜಿಟಲ್ ಹಣಕಾಸು ವಂಚನೆಗಳು ನಡೆದಿವೆ ಎಂದು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ ವರದಿ ಮಾಡಿದೆ. 2023 ರಲ್ಲಿ 13,000 ಕ್ಕೂ ಹೆಚ್ಚು ಸೈಬರ್ ಹಣಕಾಸಿನ ವಂಚನೆ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಅರ್ಧದಷ್ಟು ಡಿಜಿಟಲ್ ಪಾವತಿ ವಂಚನೆ (ಕಾರ್ಡ್/ಇಂಟರ್ನೆಟ್ ಬ್ಯಾಂಕಿಂಗ್) ಆಗಿದೆ. ಡಿಜಿಟಲ್ ಹಣಕಾಸು ವಂಚನೆಯ ಸಂತ್ರಸ್ತರು ಕನಿಷ್ಠ 10,319 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ