ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 7,925 ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಸರ್ಕಾರವು 2026-27ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 7,925 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದೆ. ರಾಜ್ಯದ ಯುವಕರಿಗೆ ಸರ್ಕಾರಿ ಉದ್ಯೋಗ ಪಡೆಯಲು ಇದು ಒಳ್ಳೆಯ ಅವಕಾಶವಾಗಿದೆ. ಅದರಲ್ಲಿಯೂ ಮಹಿಳಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಿದ್ದು 1,639 ಹುದ್ದೆಗಳು ಮಹಿಳೆಯರಿಗೆ ಮೀಸಲಿರಿಸಲಾಗಿದ್ದು ಅಧಿಸೂಚನೆಗಾಗಿ ಕಾಯಬೇಕಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 7,925 ಹುದ್ದೆಗಳ ನೇಮಕಾತಿ
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ
Image Credit source: Getty images

Updated on: Jul 09, 2026 | 9:27 PM

ಮುಖ್ಯಾಂಶಗಳು

  • ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 7,925 ಹುದ್ದೆಗಳ ಭರ್ತಿಗೆ ಸರ್ಕಾರ ಅನುಮೋದನೆ
  • ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿಗೆ ಬೇಕಾಗಿರುವ ಅರ್ಹತೆ, ಹುದ್ದೆಗಳ ವಿವರ, ಸಂಪೂರ್ಣ ಮಾಹಿತಿ
  • ಮಹಿಳಾ ಅಭ್ಯರ್ಥಿಗಳಿಗೆ 1,639 ಹುದ್ದೆಗಳು ಮೀಸಲಿರಿಸಿ ವಿಶೇಷ ಅವಕಾಶ ನೀಡಿದ ಸರ್ಕಾರ

ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಯುವಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ದೊರೆತಿದೆ. 2026-27ನೇ ಸಾಲಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 7,925 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ತೀರ್ಮಾನಿಸಿದೆ. ಸಾರ್ವಜನಿಕರ ಭದ್ರತೆ, ಕಾನೂನು-ಸುವ್ಯವಸ್ಥೆ ಕಾಪಾಡುವುದು ಹಾಗೂ ಪೊಲೀಸ್ ಸಿಬ್ಬಂದಿಯ ಮೇಲಿರುವ ಕೆಲಸದ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಬೃಹತ್ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ.

ಹುದ್ದೆಗಳ ವಿವರ:

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (CPC) – 3,991 ಹುದ್ದೆಗಳು
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (KAR/CAR) – 3,395 ಹುದ್ದೆಗಳು
ಕೆಎಸ್‌ಆರ್‌ಪಿ (KSRP) – 179 ಹುದ್ದೆಗಳು
ಇತರೆ ಪೊಲೀಸ್ ಹುದ್ದೆಗಳು – 364 ಹುದ್ದೆಗಳು

ನೇಮಕಾತಿ ಪ್ರಕ್ರಿಯೆಯ ಹಂತಗಳು:

ಗೃಹ ಇಲಾಖೆಯ ಮಾಹಿತಿ ಪ್ರಕಾರ 1,600 ಹುದ್ದೆಗಳಿಗೆ ಈಗಾಗಲೇ ಆಡಳಿತಾತ್ಮಕ ಅನುಮೋದನೆ ದೊರೆತಿದೆ. 1,421 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಉಳಿದ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತದೆ. ಅದರಲ್ಲಿಯೂ ಮಹಿಳಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಿದ್ದು 1,639 ಹುದ್ದೆಗಳು ಮಹಿಳೆಯರಿಗೆ ಮೀಸಲಾಗಿದೆ.

ಅರ್ಹತೆ:

  • ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ PUC ಅಥವಾ ತತ್ಸಮಾನ ವಿದ್ಯಾರ್ಹತೆ
  • ಕೆಲವು ತಾಂತ್ರಿಕ ಹಾಗೂ ವಿಶೇಷ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆ
  • ಸರ್ಕಾರ ನಿಗದಿಪಡಿಸಿದ ವಯೋಮಿತಿ ಅಗತ್ಯವಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

  • ಆನ್‌ಲೈನ್ ಅರ್ಜಿ ಸಲ್ಲಿಕೆ
  • ಲಿಖಿತ ಪರೀಕ್ಷೆ
  • ದೈಹಿಕ ಸಾಮರ್ಥ್ಯ ಪರೀಕ್ಷೆ (PET)
  • ದೈಹಿಕ ಅಳತೆ ಪರೀಕ್ಷೆ (PST)
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ
  • ಅಂತಿಮ ಮೆರಿಟ್ ಪಟ್ಟಿ
  • ವೇತನ ಮತ್ತು ಸೌಲಭ್ಯಗಳು

ವೇತನ ಮತ್ತು ಸೌಲಭ್ಯಗಳು

  • ಮೂಲ ವೇತನ
  • ತುಟ್ಟಿಭತ್ಯೆ (DA)
  • ಮನೆ ಬಾಡಿಗೆ ಭತ್ಯೆ (HRA)
  • ವೈದ್ಯಕೀಯ ಸೌಲಭ್ಯ
  • ನಿವೃತ್ತಿ ಸೌಲಭ್ಯ
  • ಬಡ್ತಿ ಅವಕಾಶ

ಇದನ್ನೂ ಓದಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!

ಅಭ್ಯರ್ಥಿಗಳು ಈಗಿನಿಂದಲೇ ಮಾಡಬೇಕಾದ ತಯಾರಿ:

  • ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳ ಅಧ್ಯಯನ
  • ಹಿಂದಿನ ವರ್ಷದ ಪ್ರಶ್ನೆಪತ್ರಿಕೆಗಳ ಅಭ್ಯಾಸ
  • ಓಟ ಹಾಗೂ ದೈಹಿಕ ವ್ಯಾಯಾಮ
  • ಅಗತ್ಯ ದಾಖಲೆಗಳ ಸಿದ್ಧತೆ

ಕಳೆದ ಕೆಲವು ವರ್ಷಗಳಲ್ಲಿ ಪ್ರಕಟವಾಗಿರುವ ಅತಿದೊಡ್ಡ ಪೊಲೀಸ್ ನೇಮಕಾತಿಗಳಲ್ಲಿ ಇದೂ ಒಂದಾಗಿದೆ. ಸಾವಿರಾರು ಯುವಕರಿಗೆ ಸರ್ಕಾರಿ ಉದ್ಯೋಗ ದೊರಕುವ ಸಾಧ್ಯತೆ ಇದ್ದು, ಪೊಲೀಸ್ ಸೇವೆಗೆ ಸೇರುವ ಕನಸು ಹೊಂದಿರುವ ಅಭ್ಯರ್ಥಿಗಳು ಈಗಿನಿಂದಲೇ ಲಿಖಿತ ಹಾಗೂ ದೈಹಿಕ ಪರೀಕ್ಷೆಗಳ ತಯಾರಿ ಆರಂಭಿಸುವುದು ಉತ್ತಮ. ಅಧಿಕೃತ ಅಧಿಸೂಚನೆ ಪ್ರಕಟವಾದ ನಂತರ ಅರ್ಜಿ ಸಲ್ಲಿಕೆ ದಿನಾಂಕ, ವಿದ್ಯಾರ್ಹತೆ, ವಯೋಮಿತಿ ಮತ್ತು ಹುದ್ದೆಗಳ ಸಂಪೂರ್ಣ ವಿವರ ಪ್ರಕಟವಾಗಲಿದೆ.

ಸಾಮಾನ್ಯವಾಗಿ ಕೇಳುವ ಪ್ರಶ್ನೆಗಳು ಮತ್ತು ಉತ್ತರಗಳು (FAQs)
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಎಷ್ಟು ಹುದ್ದೆಗಳ ನೇಮಕಾತಿ ನಡೆಯಲಿದೆ?

ಉತ್ತರ: ಒಟ್ಟು 7,925 ಹುದ್ದೆಗಳ ನೇಮಕಾತಿ ನಡೆಯಲಿದೆ.

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು ಎಷ್ಟು?

ಉತ್ತರ: 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿವೆ.

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು ಎಷ್ಟು?

ಉತ್ತರ: 3,395 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿವೆ.

ಮಹಿಳಾ ಅಭ್ಯರ್ಥಿಗಳಿಗೆ ಎಷ್ಟು ಹುದ್ದೆಗಳು ಮೀಸಲಾಗಿವೆ?

ಉತ್ತರ: 1,639 ಹುದ್ದೆಗಳು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾಗಿವೆ.

ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?

ಉತ್ತರ: ಅಧಿಕೃತ ಅಧಿಸೂಚನೆ, ಆನ್‌ಲೈನ್ ಅರ್ಜಿ, ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ (PET/PST), ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಹಾಗೂ ಅಂತಿಮ ಆಯ್ಕೆ ಪಟ್ಟಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:54 pm, Thu, 9 July 26

ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Loading...
Unable to load recommendations.
Follow Us