AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆಯವರ ಖಾಸಗಿ ಚಿತ್ರ,ವಿಡಿಯೋ ಶೇರ್​ ಮಾಡಿದ್ರೆ ಕೇಸ್ ಫಿಕ್ಸ್: ಎಫ್ಐಆರ್ ಮಾರ್ಗಸೂಚಿ ಹೀಗಿದೆ

ಸಿಎಂ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಲ್ಲಿ ರೌಡಿಗಳನ್ನ ಹಾಗೂ ರೌಡಿ ಚಟುವಟಿಕೆಯನ್ನ ಮಟ್ಟ ಹಾಕಲು ರೌಡಿ ನಿಗ್ರಹ ದಳವನ್ನ ರಚನೆ ಮಾಡಲು ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣತೊಟ್ಟಿದ್ದಾರೆ. ಹೌದು..ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್ ಮಾಡುವವರ ವಿರುದ್ಧ ಎಫ್​​​ಐಆರ್ ದಾಖಲಿಸಲು ಖಡಕ್ ಆದೇಶಿಸಿದ್ದಾರೆ.

ಬೇರೆಯವರ ಖಾಸಗಿ ಚಿತ್ರ,ವಿಡಿಯೋ ಶೇರ್​ ಮಾಡಿದ್ರೆ ಕೇಸ್ ಫಿಕ್ಸ್: ಎಫ್ಐಆರ್ ಮಾರ್ಗಸೂಚಿ ಹೀಗಿದೆ
Dr. M. A. Saleem
ಪ್ರದೀಪ್​ ಚಿಕ್ಕಾಟಿ
| Edited By: |

Updated on: Jun 17, 2026 | 4:33 PM

Share

ಬೆಂಗಳೂರು, (ಜೂನ್ 17): ಬೇರೆಯವರ ಖಾಸಗಿ ಚಿತ್ರ, ವಿಡಿಯೋ ವೈರಲ್  ಮಾಡುವವರಿಗೆ ತಕ್ಕ ಶಾಸ್ತಿ ಮಾಡಲು ಗೃಹ ಇಲಾಖೆ ಮುಂದಾಗಿದೆ.  ವ್ಯಕ್ತಿಯ ಅನುಮತಿ ಪಡೆದುಕೊಳ್ಳದೆ ಅವರ ಖಾಸಗಿ ವಿಡಿಯೋ ಹಾಗೂ ಫೋಟೋಗಳನ್ನು ಪ್ರಕಟಿಸುವುದು ಕಾನೂನು ಪ್ರಕಾರ ಅಪರಾಧವಾಗಲಿದೆ. ಈ ಸಂಬಂಧಿಸಿದಂತೆ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ( DG-IGP Dr.M.A.Saleem) ಅವರು ಆದೇಶವನ್ನು ಹೊರಡಿಸಿದ್ದಾರೆ. ಅಲ್ಲದೆ, ವಿಸ್ತತವಾದ ಮಾರ್ಗಸೂಚಿಯನ್ನು ಹೊರಡಿಸಿದ್ದು, ಪೊಲೀಸರು ನಾನಾ ಕಾರಣಗಳನ್ನು ನೀಡಿ ಎಫ್‌ ಐ ಆರ್ ದಾಖಲು ಮಾಡಲು ವಿಳಂಬ ಮಾಡಿದರೆ ಸೂಕ್ತ ರೀತಿಯ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಮುಖ್ಯಾಂಶಗಳು

  • ಬೇರೆಯವರ ಖಾಸಗಿ ಚಿತ್ರ ಶೇರ್​ ಮಾಡಿದ್ರೆ FIR​ ದಾಖಲಿಸಲು ಸೂಚನೆ
  • ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶ
  • ಇಂತಹ ದೂರುಗಳನ್ನು ದಾಖಲಿಸಲು ಪೊಲೀಸರು ನಿರಾಕರಿಸುವಂತಿಲ್ಲ
  • ಖಾಸಗಿ ದೃಶ್ಯ ಚಿತ್ರೀಕರಣಕ್ಕೆ ಮೊದಲು ಒಪ್ಪಿದ್ದರು ಅನ್ನೋ ಕಾರಣ ಕೊಟ್ಟು ಪೊಲೀಸರು ದೂರು ಸ್ವೀಕರಿಸದೇ ಇರಬಾರದು

ಸಂತ್ರಸ್ತರು ಮೊದಲು ಖಾಸಗಿ ದೃಶ್ಯ ಚಿತ್ರೀಕರಣಕ್ಕೆ ಒಪ್ಪಿದ್ದರು ಎಂದ ಮಾತ್ರಕ್ಕೆ ಇಂತ ಕಾರಣ ಕೊಟ್ಟು ದೂರು ಸ್ವೀಕರಿಸದೇ ಇರಬಾರದು. ಚಿತ್ರೀಕರಣದ ಒಪ್ಪಿಗೆಗೂ ಮತ್ತು ಹಂಚಿಕೆ ಅಥವಾ ಪ್ರಸಾರದ ಒಪ್ಪಿಗೆಗೂ ವ್ಯತ್ಯಾಸವಿದೆ. ಇದು ಕಾನೂನು ಪ್ರಕಾರ ಸಂಜ್ಞೆಯ ಅಪರಾಧವಾಗುತ್ತದೆ. ಹೀಗಾಗಿ ಬೇರೆಯವರ ಖಾಸಗಿ ಚಿತ್ರ ವೈರಲ್ ಮಾಡುವವರ ವಿರುದ್ಧ ಎಫ್​​​ಐಆರ್ ದಾಖಲಿಸುವಂತೆ ಡಾ.ಎಂ.ಎ.ಸಲೀಂ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸಿಎಂ ಡಿಕೆಶಿ ಸೂಚನೆ ಬೆನ್ನಲ್ಲೇ ಪ್ರತಿ ಪೊಲೀಸ್ ಠಾಣೆಯಲ್ಲಿ ರೌಡಿ ಸ್ಕ್ವಾಡ್ ರಚನೆಗೆ ಆದೇಶ

ಆಪ್ತ ವಿಷಯಗಳನ್ನು ಬಳಸಿಕೊಂಡು ಹಣ, ಲೈಂಗಿಕ ಅನುಕೂಲ ಅಥವಾ ಬೇರೆ ಲಾಭಕ್ಕಾಗಿ ಬೆದರಿಕೆ, ಸುಲಿಕೆ ನಡೆಸುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಮಾಡಲಾಗಿದೆ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಬಿಎನ್‌ಎಸ್ -2023ರ ಅಡಿಯಲ್ಲಿ ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆ ಸಂಬಂಧಿತ ಸೆಕ್ಷನ್ ಗಳನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ದಾಖಲು ಮಾಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇಂತಹ ಪ್ರಕರಣಗಲ್ಲಿ ಎಲ್ಲಾ ಡಿಜಿಟಲ್ ಸಾಕ್ಷ್ಯವನ್ನು ಗೌಪ್ಯವಾಗಿ ಸಂರಕ್ಷಿಸಬೇಕು. ಅಷ್ಟೇ ಅಲ್ಲದೆ, ಸಂತ್ರಸ್ತರ ಗುರುತು ಗೌಪ್ಯವಾಗಿ ಇರುವಂತೆ ನೋಡಿಕೊಳ್ಳಬೇಕಾಗಿದೆ. ಜೊತೆಗೆ ದೂರುದಾರರನ್ನು ಸೂಕ್ಷ್ಮವಾಗಿ ನಡೆಸಿಕೊಳ್ಳುವಂತೆಯೂ ಮಾರ್ಗಸೂಚಿಯಲ್ಲಿ ಉಲ್ಲೇಖ ಮಾಡಲಾಗಿದೆ. ದೂರುದಾರರನ್ನು ಅವಮಾನ ಮಾಡುವುದನ್ನು ತಪ್ಪಿಸಬೇಕು ಹಾಗೂ ಸಂತ್ರಸ್ತೆಯ ದೂರನ್ನು ಮಹಿಳಾ ಅಧಿಕಾರಿಯೇ ದಾಖಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ನಿರ್ದೇಶನ ನೀಡಲಾಗಿದೆ.

ಆದೇಶದಲ್ಲೇನಿದೆ?

ಇತ್ತೀಚಿನ ದಿನಗಳಲ್ಲಿ ದೂರುಗಳನ್ನು ದಾಖಲಿಸುವಲ್ಲಿ ವಿಳಂಬ ಅಥವಾ ನಿರಾಕರಣೆ ಮಾಡಿರುವುದು ಗಮನಕ್ಕೆ ಬಂದ ಹಿನ್ನಲೆಯಲ್ಲಿ, ಈ ಆದೇಶದಲ್ಲಿ ಚಿತ್ರೀಕರಣಕ್ಕೆ ಒಪ್ಪಿಗೆ ನೀಡಿದ್ದರೆ ಪ್ರಸಾರಕ್ಕೂ ಒಪ್ಪಿಗೆ ನೀಡಿದಂತೆ ಅಲ್ಲ ಎಂಬ ಎಂಬುದನ್ನು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಒಬ್ಬ ವ್ಯಕ್ತಿ ಚಿತ್ರ ಸೆರೆಹಿಡಿಯಲು ಒಪ್ಪಿಗೆ ನೀಡಿದ್ದರೂ ಅದನ್ನು ಹಂಚಲು ಅಥವಾ ಪ್ರಸಾರ ಮಾಡಲು ಒಪ್ಪಿಗೆ ನೀಡದಿದ್ದರೆ ಅದು ಕಾಗ್ನಿಜೆನ್ಸ್ ಅಪರಾಧವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆ 2023ರ ಸೆಕ್ಷನ್ 77ರಂತೆ ಗೌಪ್ಯತೆ ಉಲ್ಲಂಘನೆಗೆ ಸಂಬಂಧಿಸಿದ ವಿಧಿಗಳು, ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 66(ಇ), 67 ಮತ್ತು 67(ಎ)ಗಳನ್ನು ಅಳವಡಿಸಬೇಕು ಎಂದು ಸೂಚಿಸಲಾಗಿದೆ. ಮಹಿಳಾ ಸಂತ್ರಸ್ತರಿದ್ದಲ್ಲಿ 77ರ ವಿಧಿಯ ಜೊತೆಗೆ ಐಟಿ ಕಾಯ್ದೆಯ ಸೆಕ್ಷನ್ ಗಳನ್ನು ಸೇರಿಸಿ ಎಫ್‌ಐಆರ್ ಕಡ್ಡಾಯವಾಗಿ ನೋಂದಣಿ ಮಾಡಬೇಕೆಂದು ನಿರ್ದೇಶಿಸಲಾಗಿದೆ.

ಬ್ಲಾಕ್‌ಮೇಲ್ ವೀಡಿಯೊಗಳು, ಸೆಕ್ಸ್ಟೋರ್ಷನ್, ರಿವೆಂಜ್ ಪೋರ್ನೋಗ್ರಫಿ ಮುಂತಾದ ಪ್ರಕರಣಗಳಲ್ಲಿ ತಕ್ಷಣ ಎಫ್‌ಐಆರ್ ದಾಖಲಿಸಬೇಕು. ಪೀಡಿತರು ಮೊದಲು ಚಿತ್ರೀಕರಣಕ್ಕೆ ಒಪ್ಪಿಗೆ ನೀಡಿದ್ದರು ಎಂಬ ಕಾರಣಕ್ಕೆ ದೂರು ನಿರಾಕರಿಸಬಾರದು. ಅಪರಾಧ ಸ್ಥಳೀಯ ವ್ಯಾಪ್ತಿಯ ಹೊರಗೆ ನಡೆದಿದ್ದರೆ ಝೀರೋ ಎಫ್‌ಐಆರ್ ದಾಖಲಿಸಿ ಸಂಬಂಧಿತ ಠಾಣೆಗೆ ವರ್ಗಾಯಿಸಬೇಕು/

ಅಪರಾಧ ವಿಷಯವನ್ನು ತಕ್ಷಣ ತೆಗೆದುಹಾಕಲು ಐಟಿ ನಿಯಮಗಳ ಪ್ರಕಾರ ಸಂಬಂಧಿತ ಸಂಸ್ಥೆಗಳಿಗೆ ನೋಟಿಸ್ ನೀಡಬೇಕು ಮತ್ತು ಎಲ್ಲ ಡಿಜಿಟಲ್ ಸಾಕ್ಷ್ಯಗಳನ್ನು ಕಾನೂನುಬದ್ಧವಾಗಿ ಸಂರಕ್ಷಿಸಬೇಕು. ಪೀಡಿತರ ಗುರುತು ಗೌಪ್ಯವಾಗಿರಬೇಕು, ಮಹಿಳಾ ಸಂತ್ರಸ್ತೆಯ ದೂರುಗಳನ್ನು ಮಹಿಳಾ ಅಧಿಕಾರಿಗಳು ದಾಖಲಿಸುವಂತೆ ಸೂಚಿಸಲಾಗಿದೆ.

ತನಿಖಾಧಿಕಾರಿಗಳು ಸೈಬರ್ ಕ್ರೈಂ ಘಟಕಗಳೊಂದಿಗೆ ಸಮನ್ವಯತೆ ಸಾಧಿಸಿ ತಾಂತ್ರಿಕ ತನಿಖೆ ಹಾಗೂ ಫೋರೆನ್ಸಿಕ್ ವಿಶ್ಲೇಷಣೆ ನಡೆಸಬೇಕು. ಎಫ್‌ಐಆರ್ ನೋಂದಣಿ ಮಾಡದಿರುವುದು ಅಥವಾ ಪೂರ್ವಾನುಮತಿ ಎಂಬ ತಪ್ಪು ಕಾರಣದಿಂದ ವಿಳಂಬ ಮಾಡಿದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ ಆದೇಶದಲ್ಲಿ ಎಚ್ಚರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ