ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ, ಸೀರೆ ಜಪ್ತಿ: ಎಲ್ಲೆಲ್ಲಿ ಎಷ್ಟೆಷ್ಟು?
ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚೆಕ್ಪೋಸ್ಟ್ ನಿರ್ಮಿಸುವ ಮೂಲಕ ಚುನಾವಣಾ ಅಕ್ರಮವನ್ನ ತಡೆಗಟ್ಟಲಾಗುತ್ತಿದೆ. ಈ ಮಧ್ಯೆ ರಾಜ್ಯದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಹಣ ಹಾಗೂ ಸೀರೆಗಳನ್ನ ಜಪ್ತಿ ಮಾಡಲಾಗಿದೆ.
ಬೆಂಗಳೂರು: ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚೆಕ್ಪೋಸ್ಟ್ ನಿರ್ಮಿಸುವ ಮೂಲಕ ಚುನಾವಣಾ ಅಕ್ರಮವನ್ನ ತಡೆಗಟ್ಟಲಾಗುತ್ತಿದೆ. ಈ ಮಧ್ಯೆ ರಾಜ್ಯದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಹಣ ಹಾಗೂ ಸೀರೆಗಳನ್ನ ಜಪ್ತಿ ಮಾಡಲಾಗಿದೆ. ಹೌದು ದೇವನಹಳ್ಳಿ ಟೋಲ್ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಟ್ಟು 7.5 ಲಕ್ಷ ನಗದು ಹಾಗೂ 531 ಸೀರೆಗಳು ಜಪ್ತಿ ಮಾಡಲಾಗಿದ್ದು, ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಕಡೆಗೆ ಸಾಗಿಸಲಾಗುತ್ತಿದ್ದ ವಾಹನವನ್ನ ಚೆಕ್ಪೋಸ್ಟಗಳಲ್ಲಿ ಪರಿಶೀಲಿಸಿದಾಗ ಅಕ್ರಮ ಬೆಳಕಿಗೆ ಬಂದಿದೆ. ಈ ಕುರಿತು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂ.ಮೌಲ್ಯದ ಟಾವಲ್ಗಳು ಜಪ್ತಿ
ಯಾದಗಿರಿ: ಜಿಲ್ಲೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಲಕ್ಷ ರೂ. ಮೌಲ್ಯದ ಟಾವಲ್ಗಳನ್ನ ಗುರುಮಠಕಲ್ ಪೊಲೀಸರು ಸೀಜ್ ಮಾಡಿದ್ದಾರೆ. ತೆಲಂಗಾಣದಿಂದ ಯಾದಗಿರಿ ಕಡೆ ಸಾಗಿಸಲಾಗುತ್ತಿದ್ದ ವೇಳೆ ಪರಿಶೀಲಿಸಿದಾಗ ಪತ್ತೆಯಾಗಿದೆ. ಈ ಕುರಿತು ರವಿ ಎಂಬ ವ್ಯಕ್ತಿಯನ್ನ ಬಂಧಿಸಲಾಗಿದೆ. ಇನ್ನು ಘಟನೆ ಗುರುಮಠಕಲ್ ಪಟ್ಟಣದ ಹೊರ ಭಾಗದಲ್ಲಿ ನಡೆದಿದೆ. ಇದರ ಜೊತೆಗೆ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 315 ಲೀಟರ್ ಮದ್ಯವನ್ನ ವಶಕ್ಕೆ ಪಡೆದು, ಆನಂದ ಸೇರಿ ನಾಲ್ಕು ಜನರನ್ನ ಬಂಧಿಸಲಾಗಿದೆ. ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇನ್ನು ಜಿಲ್ಲೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 1 ಲಕ್ಷ ರೂ. ಮೌಲ್ಯದ ಸೀರೆಗಳನ್ನ ಶಹಾಪುರ ತಾಲೂಕಿನ ಮೂಡಬುಳ ಚೆಕ್ ಫೋಸ್ಟ್ ಬಳಿ ಭೀಮರಾಯನಗುಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸೀರೆಗಳನ್ನ ರಾಯಚೂರಿನಿಂದ ಕಲಬುರ್ಗಿಯ ಯಡ್ರಾಮಿಗೆ ಸಾಗಿಸಲಾಗುತ್ತಿದ್ದು, ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸುಳ್ಯ PFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ ಎನ್ಐಎ
ಮುಂಡರಗಿ ರಸ್ತೆಯ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.50 ಲಕ್ಷ ಹಣ ಜಪ್ತಿ
ಗದಗ: ಕೊಪ್ಪಳದಿಂದ ಗದಗ ನಗರಕ್ಕೆ ಬರುತ್ತಿದ್ದ 2.50 ಲಕ್ಷ ಹಣವನ್ನ ಮುಂಡರಗಿ ರಸ್ತೆಯ ಚೆಕ್ಪೋಸ್ಟ್ನಲ್ಲಿ ಸೀಜ್ ಮಾಡಲಾಗಿದೆ. ಚೆಕ್ಪೋಸ್ಟ್ನಲ್ಲಿ ಕಾರೊಂದನ್ನ ಪರಿಶೀಲಿಸಿದಾಗ ಅಕ್ರಮವಾಗಿ ಸಾಗಿಸುತ್ತಿದ್ದ ಹಣ ಪತ್ತೆಯಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ