ದಯಾಮರಣ ಕೋರಿ ರಾಷ್ಟ್ರಪತಿ ಮತ್ತು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪೊಲೀಸ್​ ಸಿಬ್ಬಂದಿ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಯಾವುದೆ ಅಂತರ್​ ಜಿಲ್ಲಾ ವರ್ಗಾವಣೆಯಾಗಿಲ್ಲ. ಇದರಿಂದ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೆಂದು ಪೊಲೀಸ್​ ಸಿಬ್ಬಂದಿ ದಯಾಮರಣ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ದಯಾಮರಣ ಕೋರಿ ರಾಷ್ಟ್ರಪತಿ ಮತ್ತು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪೊಲೀಸ್​ ಸಿಬ್ಬಂದಿ
ಪೊಲೀಸ್​​​
Follow us
Shivaprasad
| Updated By: ವಿವೇಕ ಬಿರಾದಾರ

Updated on:Feb 24, 2024 | 9:54 AM

ಬೆಂಗಳೂರು, ಫೆಬ್ರವರಿ 24: ರಾಜ್ಯ ಪೊಲೀಸ್ ಇಲಾಖೆಯಲ್ಲಿ (Karnataka Police Department) ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಯಾವುದೆ ಅಂತರ್​ ಜಿಲ್ಲಾ ವರ್ಗಾವಣೆಯಾಗಿಲ್ಲ. ಇದರಿಂದ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೆಂದು ಪೊಲೀಸ್​ ಸಿಬ್ಬಂದಿ ದಯಾಮರಣ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಮತ್ತು ರಾಷ್ಟ್ರಪತಿಗಳಿಗೆ (President) ಪತ್ರ ಬರೆದಿದ್ದಾರೆ.

ಪತಿ ಒಂದು ಜಿಲ್ಲೆಯಲ್ಲಿ ವಾಸ, ಪತಿ ಒಂದು ಜಿಲ್ಲೆಯಲ್ಲಿ ವಾಸಿಸುತ್ತಿದ್ದಾರೆ. ಇದರಿಂದ ಗಂಡ-ಹೆಂಡತಿ ಜೊತೆಯಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ವಿಚ್ಛೇದನ ಪ್ರಕರಣ ಕೂಡ ಹೆಚ್ಚುತ್ತಿವೆ. ಕೆಲ ಸಿಬ್ಬಂದಿ ವಯಸ್ಸಾದ ತಂದೆ ತಾಯಿಯನ್ನು ನೋಡಿಕೊಳ್ಳಬೇಕಿದೆ. ಹೀಗಾಗಿ ವರ್ಗಾವಣೆ ಕೋರಿ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳು, ಗೃಹ ಇಲಾಖೆ ಮಂತ್ರಿಗಳು ಬಾಯಿ ಮಾತಿನಲ್ಲಿ ವರ್ಗಾವಣೆ ಮಾಡುತ್ತೇವೆ ಅಂತ ಹೇಳುತ್ತಾರೆ. ಆದರೆ ಅಂತರ ಜಿಲ್ಲಾ ವರ್ಗಾವಣೆ ಲಿಖಿತ ರೂಪದಲ್ಲಿ ಬರುತ್ತಿಲ್ಲ ಎಂದು ರಾಜ್ಯದ ಹಲವು ಠಾಣೆಗಳಲ್ಲಿನ ಸಿಬ್ಬಂದಿ ಪತ್ರ ಬರೆದಿದ್ದಾರೆ.

ಪೊಲೀಸ್​ ಸಿಬ್ಬಂದಿ ಬರೆದ ಪತ್ರದಲ್ಲಿ ಏನಿದೆ?

“ಕರ್ನಾಟಕ ರಾಜ್ಯದ ಮೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಯುವುದ ಅಂತರ್ ಜಿಲ್ಲಾ ವರ್ಗಾವಣೆ ಆಗಿಲ್ಲ. ಪತಿ-ತತ್ನಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಆದೇಶದಂತೆ ಮತ್ತು ಕೆಸಿಎಸ್‌ಆರ್ ನಿಯಮದ ಪ್ರಕಾರ, ಪತಿ-ಪತ್ನಿ ಯಾರು ಇರುತ್ತಾರೆ ಅವರು ಸುಪ್ರೀಂಕೋರ್ಟ್ ಆದೇಶ ಮತ್ತು ಕೆಸಿಎಸ್ಆ‌ರ್ ನಿಯಮದ ಪ್ರಕಾರ ಒಂದೆ ಘಟಕ ಹಾಗೂ ಒಂದೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಯಮ ಇದ್ದರು ಕೊಡ ಕಳೆದ 3 ವರ್ಷಗಳಿಂದ ಮಾನ್ಯ ಕರ್ನಾಟಕ ಸರ್ಕಾರವಾಗಲಿ, ರಾಜ್ಯ ಗೃಹ ಸಚಿವರಾಗಲಿ, ಪೊಲೀಸ್​ ಮುಖ್ಯಸ್ಥರಾಗಲಿ ಯಾವುದೆ ವರ್ಗಾವಣೆ ಮಾಡುತ್ತಿಲ್ಲ. ಈ ವಿಚಾರವಾಗಿ ಸುಮಾರು 3 ವರ್ಷಗಳಿಂದ ಮಾನ್ಯ ಗೃಹ ಸಚಿವರಿಗೆ ಪತಿ-ಪತ್ನಿ ಪ್ರಕರಣದಲ್ಲಿ ಅಂತರ್ ಜಿಲ್ಲಾ ವಗಾವಣೆ ಮಾಡುವಂತೆ ಆನೇಕ ಬಾರಿ ಮನವಿನಲ್ಲಿಸಿದ್ದು, ಈ ವಿಚಾರವಾಗಿ ಶೀಘ್ರದಲ್ಲೇ ವರ್ಗಾವಣೆ ಮಾಡುತ್ತೇವೆ ಅಂತ ಮಾಧ್ಯಮಗಳ ಮುಂದೆ 3 ವರ್ಷಗಳಿಂದ ಹೇಳಿಕೆ ನೀಡಿರುತ್ತಾರೆ ವಿನಃ ಯಾವುದೆ ವರ್ಗಾವಣೆ ಮಾಡುತ್ತಿಲ್ಲ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಗೆ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ: ಬಟನ್ ಒತ್ತಿದರೆ ಪೊಲೀಸ್​ ಹಾಜರ್​

ನಾವುಗಳು 10 ರಿಂದ 15 ವರ್ಷಗಳ ಕಾಲ ತಂದೆ ತಾಯಿ ಹೆಂಡತಿ ಮಕ್ಕಳನ್ನು ಬಿಟ್ಟು, ನಾವು ಒಂದು ಕಡೆ, ಹೆಂಡತಿ ಒಂದು ಕಡೆ ನೌಕರಿ ಮಾಡುತ್ತಾ ಹೆತ್ತ ಮಕ್ಕಳ ಲಾಲನೆ ಪಾಲನೆ ಮಾಡದೆ ಜನ್ಮ ಕೊಟ್ಟ ಅಪ್ಪ ಅಮ್ಮ ಇವರ ಪೋಷಣೆ ಮಾಡಲಾಗದೆ ಜೀವನ ನಡೆಸುವಂತಾಗಿದೆ. ನಮಗೆ ವರ್ಗಾವಣೆ ಆಗದೆ ಇರುವುದಕ್ಕೆ ದಾಂಪತ್ಯದಲ್ಲಿ ಬಿರುಕು ಬಿಟ್ಟು ಎಷ್ಟೋ ಸಂಸಾರಗಳು ವಿಚ್ಛೇದನ ಪಡೆಯುವ ಹಂತಕ್ಕೆ ತಲುಪಿವೆ. ಕೆಲವು ವಿಚ್ಛೇದನ ಕೊಟ್ಟಾಗಿದೆ.

ಇನ್ನು ಕೆಲವರಲ್ಲಿ ಪತಿ-ಪತ್ನಿ ಯಾರು ಬೇರೆ ಬೇರೆ ಇರುವುದರಿಂದ ಮದುವೆಯಾಗಿ 5 ವರ್ಷ ಕಳೆದರೂ ಇನ್ನು ಕೂಡ ಮಕ್ಕಳು ಆಗುತ್ತಿಲ್ಲ. ನಮ್ಮದು ಶಿಸ್ತಿನ ಇಲಾಖೆ ಹಾಗಾಗಿ ಬೇರೆ ಇಲಾಖೆಯವರಂತೆ ಪ್ರತಿಭಟನೆ ಮಾಡಲು ಅವಕಾಶ ವಿರುವುದಿಲ್ಲ. ಬೇರೆ ಇಲಾಖೆಯಲ್ಲಿ ಅಂತ‌ರ್ ಜಿಲ್ಲಾ ವರ್ಗಾವಣೆ ನಡೆದಿದೆ. ಆದರೆ ಪೊಲೀಸ್ ಇಲಾಖೆಯಲ್ಲಿ 2021 ರಿಂದ ಯಾವುದೆ ವರ್ಗಾವಣೆ ಆಗಿರುವುದಿಲ್ಲ.

ಆದ ಕಾರಣ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವವಹಿಸಲು ಆಗುತ್ತಿಲ್ಲ. ನಮಗೆ ನೆಮ್ಮದಿ ಅನ್ನೋದು ಹಾಳಾಗಿ ಆರೋಗ್ಯದಲ್ಲಿ ತೊಂದರೆ ಉಂಟಾಗಿವೆ. ಆದ ಕಾರಣ ದಯಾಳುಗಳಾದ ತಾವುಗಳು ನಮಗೆ ಸಾಮೂಹಿಕ ಮರಣ ಪಡೆಯಲು ದಯಾಮಾಡಿ ದಯಾಮರಣ ಕಲ್ಪಿಸಿಕೊಂಡಬೆಕೆಂದು ಸೊಂದ ಮನಸ್ಸಿನಿಂದ ಈ ಮೂಲಕ ಕಳಕಳಿಯಿಂದ ಬೇಡಿಕೊಳ್ಳುತ್ತೆವೆ”. ಎಂದು ಪೊಲೀಸ್​ ಸಿಬ್ಬಂದಿ ಪತ್ರ ಬರೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:29 am, Sat, 24 February 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ