AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಯಾಮರಣ ನೀಡುವಂತೆ ರಾಷ್ಟ್ರಪತಿಗೆ ರಾಜ್ಯ ಪೊಲೀಸ್ ಸಿಬ್ಬಂದಿ ಪತ್ರ​

ರಾಜ್ಯ ಪೊಲೀಸ್​ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್​ ಸಿಬ್ಬಂದಿಗೆ ಕಳೆದ ನಾಲ್ಕು ವರ್ಷಗಳಿಂದ ವರ್ಗಾವಣೆ ನೀಡಲ್ಲ. ಹೀಗಾಗಿ ನಮ್ಮ ಮಕ್ಕಳಿಗೆ ದಯಾಮರಣ ನೀಡಬೇಕೇಂದು ರಾಜ್ಯ ಪೊಲೀಸ್ ಸಿಬ್ಬಂದಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ದಯಾಮರಣ ನೀಡುವಂತೆ ರಾಷ್ಟ್ರಪತಿಗೆ ರಾಜ್ಯ ಪೊಲೀಸ್ ಸಿಬ್ಬಂದಿ ಪತ್ರ​
ಪೊಲೀಸ್​​​
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Mar 01, 2024 | 9:43 AM

Share

ವಿಜಯಪುರ, ಮಾ.01: ನಮಗೆ ಮತ್ತು ಮಕ್ಕಳಿಗೆ (Children) ದಯಾಮರಣ (Euthanasia) ನೀಡಬೇಕೇಂದು ರಾಜ್ಯ ಪೊಲೀಸ್ (Karnataka Police) ಸಿಬ್ಬಂದಿ ರಾಷ್ಟ್ರಪತಿಗಳಿಗೆ (President) ಪತ್ರ ಬರೆದಿದ್ದಾರೆ. ಇಲಾಖೆಯ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾಮಾನ್ಯ ವರ್ಗದ ಪೊಲೀಸರಿಗೆ ಕಳೆದ ನಾಲ್ಕು ವರ್ಷಗಳಿಂದ ವರ್ಗಾವಣೆ ನೀಡಿಲ್ಲ. ಇದರಿಂದ ವಯಸ್ಸಾದ ತಂದೆ-ತಾಯಿಯನ್ನು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮತ್ತು ಮಕ್ಕಳ ಆರೈಕೆ, ಲಾಲನೆ, ಪಾಲನೆ-ಪೋಷಣೆ ಸಾಧ್ಯವಾಗುತ್ತಿಲ್ಲ. ಹಾಗೆ ಮಕ್ಕಳ ವಿಧ್ಯಾಭಾಸಕ್ಕೂ ಸಮಸ್ಯೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ವರ್ಗಾವಣೆ ನೀಡುವಂತೆ ಅರ್ಜಿ ಸಲ್ಲಿಸಿ ಒಂದು ವರ್ಷ ಕಳೆದರೂ, ವರ್ಗಾವಣೆಯಾಗಲಿಲ್ಲ. ಹೀಗಾಗಿ ನಮಗೆ ಮತ್ತು ಮಕ್ಕಳಿಗೆ ದಯಾಮರಣ ನೀಡಿ ಎಂದು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?

ಕರ್ನಾಟಕ ರಾಜ್ಯದ ಪೋಲಿಸ್ ಇಲಾಖೆಯಲ್ಲಿ ಸುಮಾರು ನಾಲ್ಕು ವರ್ಷಗಳಿಂದ ಸಾಮಾನ್ಯ ವರ್ಗದವರಿಗೆ ಯಾವುದೇ ವರ್ಗಾವಣೆ ನೀಡಿರುವುದಿಲ್ಲ, ಕೇವಲ ಪತಿ ಪತ್ನಿ ಪ್ರಕರಣದಲ್ಲಿ ವರ್ಗಾವಣೆ ಆದೇಶ ನೀಡಲಾಗಿದೆ. ಡಿಜಿ ಅವರು HRM-3(1)270/2022-23 ಹಾಗೂ HD/93/PPS/2022 ರ ಆದೇಶದಂತೆ ಪಾರ್ದರ್ಶಕವಾಗಿ ಪೋರ್ಟಲ್ ಪ್ರಕಾರ ಅರ್ಹ ಸಿಬ್ಬಂದಿಗಳಿಗೆ ವರ್ಗಾವಣೆ ಆದೇಶ ಮಾಡುವಂತೆ ತಿಳಿಸಿದ್ದಾರೆ. ವರ್ಗಾವಣೆ ಸಂಬಂಧ ನಮ್ಮ ಮಕ್ಕಳು ಅರ್ಜಿ ಸಲ್ಲಿಸಿ ಒಂದು ವರ್ಷಕ್ಕೂ ಹೆಚ್ಚು ಸಮಯ ಕಳೆದರೂ, ವರ್ಗಾವಣೆ ನೀಡಿಲ್ಲ.

  1. ನಮ್ಮಲ್ಲಿ ಬಹುತೇಕರು ಗ್ರಾಮೀಣ ವಿಭಾಗದ ರೈತರ ಮಕ್ಕಳಾಗಿದ್ದು ಬಹುತೇಕರ ತಂದೆ-ತಾಯಿ ವಯಸ್ಸದವರಾಗಿದ್ದು ಹಾಗೂ ಎಲ್ಲ ಕೆಲಸಗಳಿಗೆ ಬೇರೊಬ್ಬರ ಮೇಲೆ ಅವಲಂಬಿತರಾಗಿದ್ದಾರೆ. ತಂದೆ-ತಾಯಿಯನ್ನು ನೋಡಿಕೊಳ್ಳಲು ನಮ್ಮನ್ನು ಬಿಟ್ಟರೆ ಬೇರೆ ಯಾರು ಇರುವುದಿಲ್ಲ.
  2. ನಮ್ಮಲ್ಲಿ ಬಹುತೇಕರು ಸುಮಾರು 7 ರಿಂದ 10 ವರ್ಷ ಸೇವೆಯನ್ನು ಸಲ್ಲಿಸಿದ ಹಿರಿಯ ಸಿಬ್ಬಂದಿಯವರಾಗಿದ್ದು, ವರ್ಗಾವಣೆ ಸಿಗುವ ನೀರೀಕ್ಷಣೆಯಲ್ಲಿ ನಮ್ಮ ಮಕ್ಕಳಿಗೆ, ನಮ್ಮ ನಮ್ಮ ಜಿಲ್ಲೆಗಳ ಶಾಲೆಗಳಲ್ಲಿ ದಾಖಲಾತಿಗಳನ್ನು ಕೊಡಿಸಿದ್ದು ವರ್ಗಾವಣೆ ವಿಳಂಬವಾಗುತ್ತಿರುವುದರಿಂದ ಮಕ್ಕಳ ಭವಿಷ್ಯ ಮತ್ತು ಅವರ ಪೋಷಣೆ ಮೇಲೆ ಕಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ.
  3. ವಯಸ್ಸಾದ ತಂದೆ ತಾಯಿಯನ್ನು ನೋಡಿಕೊಳ್ಳಲು ಆಗದೆ ಸಮಾಜದಲ್ಲಿ ಪ್ರಶ್ನೆ ಮಾಡುವ ಜನರಿಗೆ ಉತ್ತರ ನೀಡಲಾಗದೆ ಮಾನಸಿಕವಾಗಿ ಕಿರುಕುಳವನ್ನು ಅನುಭವಿಸುವಂತಾಗಿದೆ.
  4. ತಂದೆ-ತಾಯಿ ಊರುಗಳಲ್ಲಿರುವ ಮನೆ ಹಾಗೂ ಜಮೀನುಗಳನ್ನು ಬಿಟ್ಟು ಬರಲಾಗದೆ, ಇಲ್ಲಿಯೇ ಸಾಯುತ್ತೇವೆ ಹೊರತು ನಾವು ಬರುವುದಿಲ್ಲವೆಂದು ಹೇಳುತ್ತಿದ್ದು ಇದರಿಂದ ಇಕ್ಕಟ್ಟಿನ ಪರಿಸ್ಥಿತಿಗೆ ನಾವು ಸಿಲುಕಿ ಹಾಕಿಕೊಂಡಿದ್ದೇವೆ.
  5. ಪೊಲೀಸ್ ಕಾನ್ ಸ್ಟೇಬಲ್ ಹಾಗೂ ಹೆಡ್ ಕಾನ್ಸ್ ಸ್ಟೇಬಲ್ ಸಿಬ್ಬಂದಿಗಳಾದ ನಾವು ಆರ್ಥಿಕವಾಗಿ ದುರ್ಬಲರಾಗಿದ್ದು ನಮ್ಮ ಕೆಲಸದ ಸ್ಥಳಗಳಿಂದ ಊರಿಗೆ ಓಡಾಡಿಕೊಂಡಿರಲು ತುಂಬಾ ಸಮಸ್ಯೆಯಾಗುತ್ತಿದೆ.

ಇದನ್ನು ಓದಿ: ದಯಾಮರಣ ಕೋರಿ ರಾಷ್ಟ್ರಪತಿ ಮತ್ತು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪೊಲೀಸ್​ ಸಿಬ್ಬಂದಿ

ಹೀಗಾಗಿ ಪೊಲೀಸ್ ಮಹಾ ನಿರ್ದೇಶಕರು ಹಾಗು ಪೊಲೀಸ್ ಮಹಾ ನಿರೀಕ್ಷಕರು ಮತ್ತು ರಾಜ್ಯ ಸರ್ಕಾರ ಕೇವಲ ಪತಿ ಪತ್ನಿ ಹಾಗೂ ಮಾಜಿ ಸೈನಿಕರಿಗೆ ವರ್ಗಾವಣೆ ನೀಡದೆ ಅವರನ್ನು ವರ್ಗಾವಣೆಯ ಪಟ್ಟಿಯಲ್ಲಿ ಶೇಕಡವಾರು ಆದ್ಯತೆ ನೀಡಿ ಸಾಮಾನ್ಯ ಅಭ್ಯರ್ಥಿಗಳಿಗೂ ವರ್ಗಾವಣೆ ನೀಡಿ. ಕೂಡಲೆ ನಮ್ಮ ಸಮಸ್ಯೆಗೆ ಸ್ಪಂದಿಸಿ ಅಂತರ್ ಜಿಲ್ಲಾ ವರ್ಗಾವಣೆಗೆ ಎಲ್ಲ ಸಿಬ್ಬಂದಿಗಳನ್ನು ಪರಿಗಣಿಸುವಂತೆ ಆದೇಶಿಸಿ ನಮ್ಮ ಸ್ವಂತ ಜಿಲ್ಲೆಗಳಲ್ಲಿ ಮುಂದಿನ ಸೇವೆ ಸಲ್ಲಿಸಲು ಪೊರ್ಟಲ್ ಮೂಲಕ ವರ್ಗಾವಣೆ ಮಾಡಿಕೊಡ ಬೇಕೆಂದು ವಿನಂತಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:21 am, Fri, 1 March 24

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?