Karnataka Politics Highlights: ರಾಜ್ಯ ರಾಜಕಾರಣದಲ್ಲಿ ನಡೆದ ಪ್ರಮುಖ ಅಂಶಗಳು
ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕೊನೆಗೂ ಒಂದು ಹಂತ ತಲುಪಿದೆ. ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಉಪಾಹಾರ ಕೂಟ ನೀಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನಕ್ಕೆ ಹೋಗಿ ರಾಜೀನಾಮೆ ನೀಡಿದ್ದರ. ಇದೀಗ ರಾಜ್ಯ ರಾಜಕಾರಣದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ಬಗ್ಗೆ ಇಲ್ಲಿದೆ ಪ್ರಮುಖ ಅಂಶಗಳು.

Karnataka CM Change News Updates:
ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟು ಕೊನೆಗೂ ಬಗೆಹರಿಯುವ ಲಕ್ಷಣಗಳು ಕಾಣಿಸಿವೆ. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಇದನ್ನು ಪುಷ್ಟೀಕರಿಸಿವೆ. ದೆಹಲಿಯಲ್ಲಿ ಪಕ್ಷದ ಹೈಕಮಾಂಡ್ ನಾಯಕರ ಜೊತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇತರ ಪ್ರಮುಖ ನಾಯಕರು ಸುಧೀರ್ಘ ಸಭೆ ನಡೆಸಿದ ನಂತರ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿದ್ದವು. ಅದರಂತೆ ಇಂದು ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಸುವ ಸಿದ್ಧರಾಮಯ್ಯ, ರಾಜೀನಾಮೆ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಮತ್ತೊಂದೆಡೆ ರಾಜ್ಯಪಾಲರ ಬೇಟಿಗೂ ಸಿದ್ದರಾಮಯ್ಯ ಇಂದು ಮಧ್ಯಾಹ್ನ ಸಮಯ ಕೇಳಿದ್ದಾರೆ. ಆದರೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದಿಢೀರ್ ಆಗಿ ಮುಂಬೈ ಮೂಲಕ ಇಂದೋರ್‌ಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅವರು ವಾಪಸ್ ಇಂದೇ ಬರುತ್ತಾರೋ, ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೋ ಎಂಬ ಪ್ರಶ್ನೆಗಳು ಮೂಡಿವೆ. ಕರ್ನಾಟಕ ರಾಜಕಾರಣದ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಅಪ್ಡೇಟ್ ಆಗಲಿದ್ದು, ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
LIVE NEWS & UPDATES
-
ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ಜೈಪುರದಲ್ಲಿ ತುರ್ತು ಲ್ಯಾಂಡಿಂಗ್
ತಮ್ಮ ಎರಡನೇ ಅವಧಿಗೆ ಮೂರು ವರ್ಷಗಳ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಇಂದು (ಮೇ 28) ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಇದರೊಂದಿಗೆ ಸಿದ್ದರಾಮಯ್ಯವರ ರಾಜ್ಯಭಾರ ಅಂತ್ಯವಾಗಿದೆ. ಇನ್ನು ರಾಜೀನಾಮೆ ನೀಡುತ್ತಿದ್ದಂತೆಯೇ ಸಿದ್ದರಾಮಯ್ಯ ದೆಹಲಿ ವಿಮಾನ ಹತ್ತಿದ್ದಾರೆ. ಆದ್ರೆ, ವಿಮಾನ ದೆಹಲಿ ಬದಲು ಜೈಪುರದಲ್ಲಿ ಇಳಿಸಿದೆ.
-
ಇಂದು ಸಂಜೆ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ
ಸಿದ್ಧರಾಮಯ್ಯ ರಾಜೀನಾಮೆ ಬೆನ್ನಲ್ಲೇ ದೆಹಲಿಗೆ ಹೊರಟಿದ್ದಾರೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಕೂಡ ದೆಹಲಿಗೆ ಹೊರಟಿದ್ದಾರೆ. ಇಂದು ಸಂಜೆ 7.40ಕ್ಕೆ ದೆಹಲಿಗೆ ಹೋಗಲಿದ್ದಾರೆ. ಇನ್ನು ಅಲ್ಲಿ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಜೊತೆ ಮಾತುಕತೆ ನಡೆಸಲಿದ್ದಾರೆ. ಪ್ರಮಾಣವಚನ, ಡಿಸಿಎಂ ಹಾಗೂ ನೂತನ ಸಚಿವರ ಬಗ್ಗೆ ಚರ್ಚೆ ಮಾಡಲಿದ್ದಾರೆ.
-
-
ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ
ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ. HALಗೆ ಆಗಮಿಸಿರುವ ಸಿದ್ದರಾಮಯ್ಯ. ಹೆಚ್ಎಎಲ್ ಏರ್ಪೋರ್ಟ್ನಿಂದ ಸಿದ್ದರಾಮಯ್ಯ ದೆಹಲಿಗೆ ಹೋಗಲಿದ್ದಾರೆ. ವಿಶೇಷ ವಿಮಾನದಲ್ಲಿ ದೆಹಲಿಗೆ ಹೋಗಲಿದ್ದಾರೆ. HALಗೆ ಆಗಮಿಸಿದ ಸಚಿವ ಕೆ.ವೆಂಕಟೇಶ್, ಎಂಎಲ್ಸಿ ಡಾ.ಯತೀಂದ್ರ, ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ
-
ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ, ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಎಂದ ಸಿದ್ದರಾಮಯ್ಯ
ರಾಜ್ಯಸಭೆಗೆ ಹೋಗುವ ಆಫರ್ ಬಂದಿತ್ತು, ವಿನಮ್ರವಾಗಿ ನಿರಾಕರಿಸಿದ್ದೇನೆ, ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ, ರಾಜ್ಯ ರಾಜಕಾರಣದಲ್ಲಿ ಇರುತ್ತೇನೆ ಜನ ಆಯ್ಕೆ ಮಾಡಿರುವುದು ಐದು ವರ್ಷಕ್ಕೆ ಅಲ್ಲಿವರೆಗೆ ಕರ್ನಾಟಕದ ಜನರ ಪರವಾಗಿ ನನ್ನ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
-
ಒಂದು ವೇಳೆ ಸಂವಿಧಾನ ಇಲ್ಲದೆ ಹೋಗಿದ್ದರೆ ವಿದ್ಯಾವಂತ ಆಗುತ್ತಿರಲಿಲ್ಲ: ಸಿದ್ದರಾಮಯ್ಯ
ಅಂದು 8 ಜನ ಶಾಸಕರು ನನ್ನ ಜತೆ ಕಾಂಗ್ರೆಸ್ ಸೇರಿದ್ದರು, ಅದರಲ್ಲಿ ಕೆಲವರು ಸತ್ತು ಹೋಗಿದ್ದಾರೆ. ಯಾರು ನನ್ನ ಜತೆ ಅಂದು ಕಾಂಗ್ರೆಸ್ ಸೇರಿದ್ದರೋ ಅವರಿಗೆ ನಾನು ಚಿರರುಣಿ. ಕೊನೆ ಉಸಿರಿರುವ ವರೆಗೂ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ. ಸಂವಿಧಾನ ಇವೆಲ್ಲಕ್ಕೂ ಕೂಡ ವಿರುದ್ಧವಾಗಿದೆ. ಸಂವಿಧಾನದಲ್ಲಿ ನಂಬಿಕೆ ಇಟ್ಟಿದ್ದೇನೆ. ಒಂದು ವೇಳೆ ಸಂವಿಧಾನ ಇಲ್ಲದೆ ಹೋಗಿದ್ದರೆ ವಿದ್ಯಾವಂತ ಆಗುತ್ತಿರಲಿಲ್ಲ, ಯಾವ ಹುದ್ದೆಯನ್ನೂ ಅಲಂಕರಿಸಲಾಗುತ್ತಿರಲಿಲ್ಲ. ಕುರಿ ಮೇಯಿಸಿಕೊಂಡು ಇರುತ್ತಿದ್ದೆ. ನನ್ನ ತಂದೆ-ತಾಯಿ ಅವಿದ್ಯಾವಂತರು. ಸಂವಿಧಾನಕ್ಕೆ ಯಾರೇ ಧಕ್ಕೆ ತಂದರೂ ಅವರ ವಿರುದ್ಧ ಹೋರಾಡುತ್ತೇನೆ. ಜನರ ಸಮಾನತೆಯನ್ನು ಕಾಪಾಡುವ ಕೆಲಸ ಮಾಡುತ್ತೇನೆ.
-
-
ಜನಾಶಕ್ತಿ ಇದ್ದವರು ಮಾತ್ರ ರಾಜಕೀಯ ಇರಲು ಸಾಧ್ಯ :ಸಿದ್ದರಾಮಯ್ಯ
ಯಾವತ್ತೂ ಕೂಡ ನನ್ನ ಮೌಲ್ಯ, ಸಿದ್ಧಾಂತದಲ್ಲಿ ರಾಜೀ ಆಗಿಲ್ಲ, ಕಟ್ಟ ಕಡೆಯ ವ್ಯಕ್ತಿಗೂ ಅನ್ನ, ವಸತಿ, ಶಿಕ್ಷಣ ಒದಗಿಸಬೇಕೆಂಬ ನಂಬಿಕೆ, ಸಮಾಜದಲ್ಲಿರುವ ಎಲ್ಲಾ ಬಡವರಿಗಾಗಿ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
-
ನಾನು ಯಾವತ್ತೂ ಅಧಿಕಾರದ ಹಿಂದೆ ಹೋದವನಲ್ಲ: ಸಿದ್ದರಾಮಯ್ಯ
ನಾನು ಯಾವತ್ತೂ ಅಧಿಕಾರ, ಹಣದ ಹಿಂದೆ ಹೋದವನಲ್ಲ, ಆಸ್ತಿ ಪಾಸ್ತಿ ಮಾಡಿಕೊಳ್ಳಬೇಕೆಂಬ ಯೋಚನೆ ಮಾಡಿರಲಿಲ್ಲ, 1983ರಲ್ಲಿ ಮೊದಲ ಬಾರಿ ಶಾಸಕನಾದವನು,ರಾಜಕಾರಣಕ್ಕೆ ಬಂದು ಸುಮಾರು 50 ವರ್ಷ ಆಗ್ತಾ ಬಂದಿದೆ, ನನ್ನ ರಾಜಕೀಯ ಜೀವನ ತೆರೆದ ಪುಸ್ತಕ ಎಂದ ಸಿದ್ದರಾಮಯ್ಯ.
-
ವಿಪಕ್ಷಗಳಿಗೆ ಸಿದ್ದರಾಮಯ್ಯ ಚಾಟಿ
ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ನಮ್ಮ ಗ್ಯಾರಂಟಿ ಬಗ್ಗೆ ಮೋದಿ ಸೇರಿ ವಿಪಕ್ಷಗಳು ಅಪಪ್ರಚಾರ ಮಾಡಿದ್ರು. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಆಗಲ್ಲ ಎಂದು ಹೇಳಿದ್ದರು. ಅಭಿವೃದ್ಧಿ ಕೆಲಸಗಳಿಗೆ ದುಡ್ಡು ಇರಲ್ಲ ಎಂದು ಅಪಪ್ರಚಾರ ಮಾಡಿದ್ದರು. ಅಭಿವೃದ್ಧಿ ಕೆಲಸ ಆಗಲ್ಲ ರಾಜ್ಯ ದಿವಾಳಿ ಆಗುತ್ತದೆ ಎಂದು ಹೇಳಿದರು. ಗ್ಯಾರಂಟಿ ಯೋಜನೆ ಜಾರಿ ಮಾಡಿದ ಮೇಲೆ ಇಡೀ ಕರ್ನಾಟಕ ತಲಾ ಆದಾಯದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಇದ್ದೇವೆ ಎಂದು ವಿಪಕ್ಷಗಳಿಗೆ ಸಿದ್ದರಾಮಯ್ಯ ಚಾಟಿ ಬೀಸಿದರು.
-
ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ
ಅಸಮಾನತೆ ತೊಲಗಬೇಕಾದರೆ ಎಲ್ಲರಿಗೂ ಸಮಾನತೆ ಅವಕಾಶ ಸಿಗಬೇಕು. ಹೀಗಾಗಿ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ನಾವು ಈಡೇರಿಸಿದ್ದೇವೆ. 2013ರಲ್ಲಿ ಕೊಟ್ಟಿದ್ದ 165 ಭರವಸೆಗಳಲ್ಲಿ 158 ಭರವಸೆ ಈಡೇರಿಸಿದ್ದೇನೆ. 2023ರಲ್ಲಿ ಕೊಟ್ಟಿದ್ದ 550ಕ್ಕೂ ಹೆಚ್ಚು ಭರವಸೆಗಳನ್ನು ನಾವು ಕೊಟ್ಟಿದ್ದೆವು. 550 ಭರವಸೆಗಳ ಪೈಕಿ ಸುಮಾರು 300 ಭರವಸೆಗಳನ್ನು ಈಡೇರಿಸಿದ್ದೇವೆ. ಅಲ್ಲದೇ ಚುನಾವಣೆ ವೇಳೆ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೆವು. ಅದರಂತೆ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ.
-
ಸಹೋದ್ಯೋಗಿಗಳಿಗೆ ಸಿದ್ದರಾಮಯ್ಯ ಧನ್ಯವಾದ
ನಾನು ಎರಡು ಸಾರಿ ಸಿಎಂ ಆಗಿರುವಾಗ, 2023 ರಿಂದ ಇಲ್ಲಿವರೆಗೆ ಈ ಸಂದರ್ಭದಲ್ಲಿ ನನ್ನ ಜೊತೆಗೆ ಕೆಲಸ ಮಾಡಿದ ಸಹೋದ್ಯೋಗಿಗಳು ಅವರೆಲ್ಲ ರೀತಿಯಲ್ಲೂ ಬೆಂಬಲ ಸಹಕಾರವನ್ನು ಪ್ರೀತಿ ನನ್ನ ಮೇಲೆ ವ್ಯಕ್ತ ಮಾಡಿದ್ದಾರೆ. ನಾನು ಯಾವಾಗಲೂ ಚಿರಋಣಿಯಾಗಿರುತ್ತೇನೆ ಎಂದು ಹೇಳಿದರು.
-
ಕುವೆಂಪು ಹೇಳಿದಂತೆ ಶಾಂತಿಯ ತೋಟ ಆಗಬೇಕು
ಇಡೀ ಸಮಾಜ ಕುವೆಂಪು ಹೇಳಿದಂತೆ ಶಾಂತಿಯ ತೋಟ ಆಗಬೇಕು ಅಂತ ಬಯಸಿದವನು. ಸಮಾಮತೆಯ ಸಮಾಜ ನಿರ್ಮಾಣ ಆಗಬೇಕು. ಸಮಾನತೆಯ ಅವಕಾಧ ಎಲ್ಲರಿಗೂ ಸಿಗಬೇಕು. ಸಮಾನ ಅವಕಾಶ ಇಲ್ಲದಿರುವುದರಿಂದಲೇ ನಮ್ಮ ಸಮಾಜದಲ್ಲಿ ಅಸಮಾನತೆ ನೋಡುತ್ತಿದ್ದೇವೆ. ಈ ಅಸಮಾನತೆ ತೊಲಗಬೇಕಾದರೆ ಎಲ್ಲರಿಗೂ ಸಮಾನತೆಯ ಅವಕಾಶ ಸಿಗಲೇಬೇಕು ಎಂದರು.
-
ಮಾತನಾಡುತ್ತಲೇ ಸಿದ್ದರಾಮಯ್ಯ ಭಾವುಕ
ನಾನು ಹಳ್ಳಿಯಿಂದ ಬಂದವನು. ನಾನು ಶಾಸಕ, ಸಿಎಂ ಆಗುತ್ತೇನೆ ಎಂದು ಅಂದುಕೊಂಡಿರಲಿಲ್ಲ. ನಾನು ರಾಜಕೀಯ ಬಂದಿದ್ದು ಆಕಸ್ಮಿಕ. ನಮ್ಮ ಕುಟುಂಬದಲ್ಲಿ ಯಾರೂ ರಾಜಕೀಯದಲ್ಲಿ ಇರಲಿಲ್ಲ. ರಾಜಕಾರಣಕ್ಕೆ ಬಂದಾಗಿನಿಂದಲೂ ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿ ತತ್ವ ಆದರ್ಶದಲ್ಲಿ ನಂಬಿಕೆ ಇಟ್ಟುಕೊಂಡವನು. ಸಂವಿಧಾನದಲ್ಲಿ ಅಪಾರ ಗೌರವ ಇಟ್ಟುಕೊಂಡವನು. ಎಲ್ಲರೂ ಕೂಡ ಒಂದು ಕುಟುಂಬದಂತೆ ಇರಬೇಕು ಅಂತಾ ಭಾವಿಸಿದ್ದೆ ಎಂದು ಮಾತನಾಡುತ್ತಲೇ ಸಿದ್ದರಾಮಯ್ಯ ಭಾವುಕರಾದರು.
-
2006ರಲ್ಲಿ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೆ
2006ರಲ್ಲಿ ನಾನು ಕಾಂಗ್ರೆಸ್ ಸೇರಿದ್ದೆ. 2006ರಿಂದ ಕಾರ್ಯಕರ್ತರು, ಶಾಸಕರು, ಸಂಸದರು ಸೇರಿ ಎಲ್ಲರೂ ಪ್ರೀತಿ ತೋರಿಸಿದ್ದಾರೆ, ಅವಕಾಶ ಕಲ್ಪಸಿಕೊಟ್ಟಿದ್ದಾರೆ. ಅವರಿಗೆಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. 2013ರಿಂದ 18ರವರೆಗೆ ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದೆ. ಬಳಿಕ 2023ರಿಂದ ಇಲ್ಲಿವರೆಗೆ ಸಿಎಂ ಆಗಿದ್ದೆ. ಸಿಎಂ ಆಗಿದ್ದಾಗ ನನ್ನ ಜತೆ ಕೆಲಸ ಮಾಡಿದವರು ಸಹಕರಿಸಿದ್ದರು.
-
ಅಭಿಮಾನಿಗಳೇ ದೇವರು ಎಂದ ಸಿದ್ದರಾಮಯ್ಯ
ನಟ ರಾಜಕುಮಾರ್ ಅಭಿಮಾನಿ ದೇವರು ಅಂತಾ ಕರೀತಿದ್ರು, ನಾನು ರಾಜಕಾರಣಿ, ಸಂವಿಧಾನವನ್ನೇ ನಮ್ಮ ಧರ್ಮ ಎಂದು ತಿಳಿದಿದ್ದೇನೆ. ಮತದಾರರೇ ನಮ್ಮ ಅಭಿಮಾನಿ ದೇವರು. ಕನ್ನಡ ನಾಡಿನ ಕರ್ನಾಟಕದ 7 ಕೋಟಿ ಕೋಟಿ ಜನಸಂಖ್ಯೆ ಸೇವೆ ಮಾಡುವ ಅವಕಾಶ ಸಿಕ್ಕಿತ್ತು. ಎರಡು ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿತ್ತು, ಎರಡು ಬಾರಿ ವಿಪಕ್ಷ ನಾಯಕನಾಗುವ ಅವಕಾಶ ಸಿಕ್ಕಿತ್ತು. ಈ ಅವಕಾಶ ಒದಗಿಸಿಕೊಟ್ಟಿರುವ ಸೋನಿಯಾ ಗಾಂಧಿ ಅವರಿಗೆ ರಾಹುಲ್ ಗಾಂಧಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ.
-
ರಾಜ್ಯಪಾಲರು ಅಂಗೀಕರಿಸಬೇಕು
ರಾಜ್ಯಪಾಲರು ಬಂದ ಮೇಲೆ ನನ್ನ ಪತ್ರವನ್ನು ಅಂಗೀಕಾರ ಮಾಡ್ತಾರೆ ಅಂತ ಸಂಪೂರ್ಣ ವಿಶ್ವಾಸವಿದೆ. ಸಂವಿಧಾನ ಪ್ರಕಾರ ರಾಜೀನಾಮೆ ಅಂಗೀಕಾರ ಮಾಡಲೇಬೇಕು. ಅವರು ಪ್ರೊಸಿಜರ್ ಏನು ಮಾಡ್ತಾರೆ ಅವರಿಗೆ ಬಿಟ್ಟಿದ್ದು. ಒಂದು ಸಾರಿ ಸಿಎಂ ರಾಜೀನಾಮೆ ನೀಡಿದ ಮೇಲೆ ಅಂಗೀಕಾರ ಮಾಡಿ ಮುಂದಿನ ಮುಖ್ಯ ಮಂತ್ರಿಗೆ ಅವಕಾಶ ಮಾಡಿಕೊಡಬೇಕಾಗಿದ್ದು ಅವರ ಜವಾಬ್ದಾರಿ.
-
ಹೈಕಮಾಂಡ್ ಸೂಚಿಸಿದಂತೆ ರಾಜೀನಾಮೆ
ನಾನು ಮೊದಲಿಂದಲೂ ಹೇಳುತ್ತಿದ್ದೆ ಅನೇಕ ಸಾರಿ ಹೊರಗಡೆಯೂ ಹೇಳ್ತಿದ್ದೆ. ಹೈಕಮಾಂಡ್ ಯಾವಾಗ ಸೂಚಿಸ್ತಾರೆ ಆವಾಗ ರಾಜೀನಾಮೆ ಕೊಡ್ತೀನಿ ಅಂದಿದ್ದೆ. ಅದರ ಪ್ರಕಾರ ಹೈಕಮಾಂಡ್ ನವರು ರಾಜೀನಾಮೆ ಕೊಡಿ ಅಂತ ಹೇಳಿದ ಮೇಲೆ ರಾಜೀನಾಮೆ ಕೊಟ್ಟಿದ್ದೇನೆ.
-
ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಕೊಟ್ಟಿದ್ದೇನೆ
ನಿಮ್ಮೆಲ್ಲರಿಗೂ ನಮಸ್ಕಾರ. ನಾನು ಸಿಎಂ ಸ್ಥಾನಕ್ಕೆ ರಾಜ್ಯಪಾಲರ ಭವನದಲ್ಲಿ ಕಾರ್ಯದರ್ಶಿ ಗೆ ರಾಜೀನಾಮೆ ಸಲ್ಲಿಸಿದ್ದೇನೆ. ರಾಜ್ಯಪಾಲರು ಊರಿನಲ್ಲಿ ಇಲ್ಲ. ರಾತ್ರಿ ಬರ್ತಾರೆ ಅಂತ ಕಚೇರಿಯಲ್ಲಿ ತಿಳಿಸಿದರು. ರಾಜೀನಾಮೆ ಪತ್ರವನ್ನು ಅವರ ಕಚೇರಿಯಲ್ಲಿ ಅವರ ಕಾರ್ಯದರ್ಶಿ ಬಳಿ ಕೊಟ್ಟಿದ್ದೇನೆ.
-
ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.
-
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದರು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದೋರ್‌ಗೆ ತೆರಳಿರುವ ಕಾರಣ ಅವರ ವಿಶೇಷ ಕಾರ್ಯದರ್ಶಿಗೆ ಪತ್ರ ಸಲ್ಲಿಸಿದರು.
-
ರಾಜೀನಾಮೆ ನೀಡಲು ಲೋಕಭವನದತ್ತ ಹೊರಟ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲು ಲೋಕಭವನದತ್ತ ಹೊರಟಿದ್ದಾರೆ. ಜತೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಹ ಇದ್ದಾರೆ.
-
ರಾಜೀನಾಮೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಸಿಎಂ ಸಿದ್ದರಾಮಯ್ಯ ಇದೀಗ 3 ಗಂಟೆಗೆ ಡಿಸಿಎಂ ಡಿಕೆ ಶಿವಕುಮಾರ್ ಜತೆಗೆ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ನೀಡುತ್ತಿದ್ದಾರೆ. ಅದಾದ ಬಳಿಕ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.
-
ಸಿಎಂ ಸಿದ್ದರಾಮಯ್ಯ ಭಾವುಕ: ವಿಡಿಯೋ ವೈರಲ್
ಸಿದ್ದರಾಮಯ್ಯನವರನ್ನು ಸುತ್ತುವರಿದ ಅಭಿಮಾನಿಗಳು, ‘ಶಾಶ್ವತ ಸಿಎಂ ಸಿದ್ದರಾಮಯ್ಯ’ ಎಂದು ಘೋಷಣೆ ಕೂಗಿದಾಗ ಸಿಎಂ ಭಾವುಕರಾದ ಘಟನೆ ನಡೆಯಿತು. ಸದ್ಯ ಸಿದ್ದರಾಮಯ್ಯ ಭಾವುಕರಾದ ವಿಡಿಯೋ ವೈರಲ್ ಆಗುತ್ತಿದೆ.
ಭಾವುಕರಾದ ಸಿದ್ದರಾಮಯ್ಯ#Siddaramaiah #EmotionalMoment #SiddaramaiahFans #KarnatakaPolitics #CMResignation #CongressCrisis #KaveriResidence #BengaluruNews #ViralVideo #BreakingNewshttps://t.co/eK9xxX71WA pic.twitter.com/NbWfl4u8Cw
— TV9 Kannada (@tv9kannada) May 28, 2026
-
ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ವರ್ಗಾವಣೆ
ಅಧಿಕಾರ ಹಂಚಿಕೆ ಪ್ರಕ್ರಿಯೆ ಪ್ರಗತಿಯಲ್ಲಿರುವಾಗಲೇ ಸಿಎಂ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ. ಕೃಷಿ ಮಾರಾಟ ಇಲಾಖೆ ನಿರ್ದೇಶಕರಾಗಿ ವೆಂಕಟೇಶಯ್ಯರನ್ನು ವರ್ಗಾವಣೆ ಮಾಡಲಾಗಿದೆ.
-
ರಾಜ್ಯಪಾಲರು ಬರೋದು ಇನ್ನೆರಡು ದಿನ ವಿಳಂಬ
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಲು ಕ್ಷಣಗಣನೆ ಶುರುವಾಗಿದೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರು ಗವರ್ನರ್ ಪ್ರಧಾನ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ಆದರೆ, ರಾಜೀನಾಮೆ ಅಂಗೀಕಾರವಾಗುವುದು ವಿಳಂಬವಾಗುವ ಸಾಧ್ಯತೆ ಇದೆ. ಯಾಕೆಂದರೆ, ಕುಟುಂಬದವರ ಅನಾರೋಗ್ಯ ನಿಮಿತ್ತ ಇಂದೋರ್‌ಗೆ ತೆರಳಿರುವ ರಾಜ್ಯಪಾಲರು ಬರುವುದು 2 ದಿನ ವಿಳಂಬವಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ರಾಜ್ಯಪಾಲರ ಅನುಪಸ್ಥಿತಿಯಲ್ಲೂ ಸಿದ್ದರಾಮಯ್ಯ ರಾಜೀನಾಮೆ ನೀಡಬಹುದೇ? ಸಿಎಂ ಮುಂದೆ ಇದೆ ಈ ಒಂದು ಆಯ್ಕೆ!
-
ಉಪಾಹಾರ ಕೂಟದಲ್ಲಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ನೀಡುವ ಬಗ್ಗೆ ಬ್ರೇಕ್‌ಫಾಸ್ಟ್ ಮೀಟಿಂಗ್ನಲ್ಲಿ ನಿರ್ಧಾರ ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ ಕಣ್ಣೀರು ಹಾಕಿದರು. ಬಿಜೆಪಿಯಿಂದ ಅಲರ್ಟ್ ಆಗಿ ಇರಿ ಎಂದು ಸಲಹೆ ನೀಡಿದರು. ನಾನು ಮಾಡಿರುವ ಕೆಲಸಗಳ ಬಗ್ಗೆ ನನಗೆ ಸಮಾಧಾನ ಇದೆ, ಎಲ್ಲಾ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮುಂದೆ ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಹೋಗಿ. ಜನರಿಗೆ ಒಳ್ಳೇ ಯೋಜನೆಗಳನ್ನು ನೀಡಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.
-
ಮುಂದಿನ ಸಿಎಂ ಡಿಕೆ ಶಿವಕುಮಾರ್; ಸಿದ್ದರಾಮಯ್ಯ ಮಾಹಿತಿ
ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಕಾವೇರಿ ನಿವಾಸದಲ್ಲಿ ನಡೆದ ಉಪಾಹಾರ ಸಭೆಯ ಬಳಿಕ ಸಿದ್ದರಾಮಯ್ಯ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಕಾಂಗ್ರೆಸ್ ‘ಎಕ್ಸ್’ ಹ್ಯಾಂಡಲ್ನಲ್ಲಿ ಒಗ್ಗಟ್ಟೇ ನಮ್ಮ ಶಕ್ತಿ ಎಂದು ಪೋಸ್ಟ್ ಮಾಡಲಾಗಿದೆ. ಅಂದು, ಇಂದು, ಎಂದೆಂದು ಒಗ್ಗಟ್ಟೇ ನಮ್ಮ ಶಕ್ತಿ, ಎಂದೆಂದಿಗೂ ಜನಸೇವೆಯೇ ನಮ್ಮ ಬದ್ಧತೆ ಎಂದು ಕಾಂಗ್ರೆಸ್ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.
ಅಂದು, ಇಂದು, ಎಂದೆಂದು… ಒಗ್ಗಟ್ಟೇ ನಮ್ಮ ಶಕ್ತಿ! ಎಂದೆಂದಿಗೂ ಜನಸೇವೆಯೇ ನಮ್ಮ ಬದ್ಧತೆ! pic.twitter.com/6WF5osxCJh
— Karnataka Congress (@INCKarnataka) May 28, 2026
-
ಡಿಕೆ ಶಿವಕುಮಾರ್ಗೆ ಅಭಿನಂದನೆ ತಿಳಿಸಿದ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ನಡೆದ ಉಪಾಹಾರ ಸಭೆಯ ಬಳಿಕ ಅವರು ಡಿಸಿಎಂ ಡಿಕೆ ಶಿವಕುಮಾರ್ಗೆ ಅಭಿನಂದನೆ ಸಲ್ಲಿಸಿದರು. ಅಲ್ಲದೆ, ಮಧ್ಯಾಹ್ನ 3 ಗಂಟೆಗೆ ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ತಿಳಿಸಿದರು.
-
ಬ್ರೇಕ್‌ಫಾಸ್ಟ್ ಸಭೆಯಲ್ಲಿ ಸರ್ಕಾರದ ಆರ್ಥಿಕ ಸ್ಥಿತಿಗತಿ ಬಗ್ಗೆ ಸಿಎಂ ಮಾಹಿತಿ
ತಮ್ಮ ಕಾರ್ಯವೈಖರಿ ಬಗ್ಗೆ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಚಿವರನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಸರ್ಕಾರದ ಆರ್ಥಿಕ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಿದರು. ಗ್ಯಾರಂಟಿ ಅನುಷ್ಠಾನಗೊಳಿಸಲು ಆದ ಅಡೆತಡೆಗಳ ಬಗ್ಗೆ ಮಾತನಾಡ, ಎಲ್ಲಾ ಕಷ್ಟದ ನಡುವೆಯೂ ಗ್ಯಾರಂಟಿ ಜಾರಿ ಮಾಡಿದ್ದೇನೆ ಎಂದರು. ಎಲ್ಲಾ ಕಷ್ಟದ ನಡುವೆಯೂ ಉತ್ತಮ ಆಡಳಿತ ನೀಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
-
ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ, ಸಿಎಂ ಸಿದ್ದರಾಮಯ್ಯ ಘೋಷಣೆ
ಇಂದು ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತೇನೆ. ರಾಜ್ಯಪಾಲರು ಇಲ್ಲದೇ ಇದ್ದರೆ ಅವರ ಕಾರ್ಯದರ್ಶಿಗೆ ರಾಜೀನಾಮೆ ನೀಡುವುದಾಗಿ ಸಿಎಂ ಮಾಹಿತಿ ನೀಡಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಘೋಷಿಸಿದ ಸಿದ್ದರಾಮಯ್ಯ!#cmsiddaramaiahresignation #cmsiddaramaiah #DKShivakumarhttps://t.co/SZXyyScQqW pic.twitter.com/oIakTVHLIr
— TV9 Kannada (@tv9kannada) May 28, 2026
-
ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್
ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಬ್ರೇಕ್‌ಫಾಸ್ಟ್ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಆಗಮಿಸಿದರು. ಇದೇ ವೇಳೆ, ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.
ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್
-
ರಾಜ್ಯಪಾಲರ ಅನುಪಸ್ಥಿತಿಯಲ್ಲೂ ಸಿದ್ದರಾಮಯ್ಯ ರಾಜೀನಾಮೆ ನೀಡಬಹುದೇ?
ಸದ್ಯ ರಾಜ್ಯಪಾಲರು ಬೆಂಗಳೂರಿನಲ್ಲಿ ಇಲ್ಲದೇ ಇರುವುದರಿಂದ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸಾಧ್ಯವೇ? ಅವರ ಮುಂದಿರುವ ಆಯ್ಕೆಗಳೇನು ಎಂಬ ಪ್ರಶ್ನೆಗಳು ಮೂಡಿವೆ. ರಾಜ್ಯಪಾಲರು ಲೋಕಭವನದಲ್ಲಿ ಇಲ್ಲದಿದ್ದರೂ ಗವರ್ನರ್ ವಿಶೇಷ ಕಾರ್ಯದರ್ಶಿ ಬಳಿ ರಾಜೀನಾಮೆ ಪತ್ರ ನೀಡಲು ಮುಖ್ಯಮಂತ್ರಿಗೆ ಸಾಂವಿಧಾನಿಕ ಅವಕಾಶ ಇದೆ. ಆದರೆ ಅಂಗೀಕಾರವಾಗಬೇಕಿದ್ದರೆ ರಾಜ್ಯಪಾಲರು ಬಂದೇ ಆಗಬೇಕು. ಈ ಕುರಿತು ವಿವರವಾದ ಮಾಹಿತಿ ಇಲ್ಲಿದೆ.
ರಾಜ್ಯಪಾಲರ ಅನುಪಸ್ಥಿತಿಯಲ್ಲೂ ಸಿದ್ದರಾಮಯ್ಯ ರಾಜೀನಾಮೆ ನೀಡಬಹುದೇ?#Siddaramaiah #GovernorThawarchandGehlot #KarnatakaPolitics #ResignationRules #Lokabhavanhttps://t.co/dVewUHcHOb
— TV9 Kannada (@tv9kannada) May 28, 2026
-
ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್
ಸಚಿವರ ಜೊತೆ ಸಿಎಂ ಸಿದ್ದರಾಮಯ್ಯರಿಂದ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭಗೊಂಡಿದೆ. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎನ್.ಎಸ್.ಬೋಸರಾಜು, ಡಾ.ಶರಣಪ್ರಕಾಶ್ ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್, ಜಾರ್ಜ್, ಭೈರತಿ ಸುರೇಶ್, ಡಾ.ಎಂ.ಸಿ.ಸುಧಾಕರ್, ಎನ್.ಚಲುವರಾಯಸ್ವಾಮಿ, ಮಧುಬಂಗಾರಪ್ಪ, ಶಿವಾನಂದ ಪಾಟೀಲ್, ಕೆ.ಹೆಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ್, H.K.ಪಾಟೀಲ್, ಮಹದೇವಪ್ಪ, ಶಿವರಾಜ ತಂಗಡಗಿ, ದಿನೇಶ್ ಗುಂಡೂರಾವ್, ಶಾಸಕರಾದ ಪೊನ್ನಣ್ಣ, ರಾಯರೆಡ್ಡಿ, ಅಶೋಕ್ ಪಟ್ಟಣ್, ಪುಟ್ಟರಂಗಶೆಟ್ಟಿ ಸೇರಿ ಹಲವರು ಭಾಗಿಯಾಗಿದ್ದಾರೆ.
-
ಡಿಕೆ ಶಿವಕುಮಾರ್ ಖಾಸಗಿ ನಿವಾಸದ ಬಳಿ ಹೆಚ್ಚಿನ ಭದ್ರತೆ
ಬೆಂಗಳೂರಿನ ಡಿಸಿಎಂ ಡಿಕೆ ಶಿವಕುಮಾರ್ ಅವರ ಖಾಸಗಿ ನಿವಾಸದ ಬಳಿ ಹೆಚ್ಚಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ರಸ್ತೆಯಲ್ಲಿ ಹೆಚ್ಚುವರಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಪೊಲೀಸ್ ಕಬಡ್ಡಿ ಟೀಮ್ ಸೇರಿದಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಕೂಡಾ ನಿಯೋಜಿಸಲಾಗಿದೆ.
-
ಸಿದ್ದರಾಮಯ್ಯ ರಾಜೀನಾಮೆ ನೀಡುವ ತನಕವೂ ಮುಗಿದಿಲ್ಲ ಆಟ
ಯಾವುದೇ ರೀತಿಯ ದುಡುಕಿನ ಹೇಳಿಕೆ ಬೇಡ ಎಂದು ಬೆಂಬಲಿಗರಿಗೆ ಡಿಕೆ ಶಿವಕುಮಾರ್ ಖಡಕ್ ಸೂಚನೆ ಕೊಟ್ಟಿದ್ದಾರೆ ಎಂಬುದು ತಿಳಿದುಬಂದಿದೆ. ಹೈಕಮಾಂಡ್ ನಾಯಕರು ನನ್ನ ಜೊತೆಗೆ ಏನೂ ಮಾತನಾಡಿಲ್ಲ, ಎಲ್ಲವನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತನಾಡಿದ್ದಾರೆ. ಸಿಎಂ ರಾಜೀನಾಮೆ ವಿಷಯವೂ ಗೊತ್ತಿಲ್ಲ ಎಂದು ತಮ್ಮನ್ನು ಭೇಟಿಯಾದ ಸಚಿವರು, ಶಾಸಕರಿಗೆಲ್ಲ ಡಿಕೆಶಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
Published On - May 28,2026 10:05 AM




