AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಗಾಡಿಗಳಲ್ಲಿ ಮೆರವಣಿಗೆ ಮಾಡಿಕೊಂಡು ಬಂದಿಲ್ಲ, ನಿಮ್ಮ ಜೊತೆ ನಡೆದುಕೊಂಡು ಬಂದಿದ್ದೇವೆ: ಡಿ.ಕೆ.ಶಿವಕುಮಾರ್

Congress Rally: ದೇವನಹಳ್ಳಿಗೆ ಬಂದಾಗ ನೀವು ನೀಡಿದ ಉತ್ಸಾಹ, ಪ್ರೋತ್ಸಾಹಕ್ಕೆ ಚಿರಋಣಿ. ಈ ಕಾರ್ಯಕ್ರಮದ ಮೂಲಕ ಇಂದು ಇತಿಹಾಸ ಸೃಷ್ಟಿ ಮಾಡಿದ್ದೀರಿ ಎಂದು ಡಿ.ಕೆ.ಶಿವಕುಮಾರ್ ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ.

ನಾವು ಗಾಡಿಗಳಲ್ಲಿ ಮೆರವಣಿಗೆ ಮಾಡಿಕೊಂಡು ಬಂದಿಲ್ಲ, ನಿಮ್ಮ ಜೊತೆ ನಡೆದುಕೊಂಡು ಬಂದಿದ್ದೇವೆ: ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್ (ಸಂಗ್ರಹ ಚಿತ್ರ)
Skanda
| Edited By: |

Updated on: Mar 03, 2021 | 5:06 PM

Share

ದೇವನಹಳ್ಳಿ: ಕಾಂಗ್ರೆಸ್​ ಪಕ್ಷ ಸದಾ ಜನರ ಜೊತೆಯಲ್ಲೇ ಇರಲಿದೆ. ನಾವು ಇಲ್ಲಿಗೆ ಬರುವಾಗಲೂ ಗಾಡಿಗಳಲ್ಲಿ ಮೆರವಣಿಗೆ ಮಾಡಿಕೊಂಡು ಬರಲಿಲ್ಲ. ಬದಲಾಗಿ ನಿಮ್ಮ ಜೊತೆ ನಡೆದುಕೊಂಡು ಬಂದಿದ್ದೇವೆ. ಬರುವಾಗ ಒಂದಷ್ಟು ಜನ ಅರ್ಜಿಗಳನ್ನು ಕೊಟ್ಟಿದ್ದಾರೆ. ಕೆಲ ರೈತರು ಮುದಿ ಎತ್ತುಗಳನ್ನ ತೆಗೆದುಕೊಂಡು ಬಂದಿದ್ದರು. ಏಕೆ ಎಂದು ಕೇಳಿದಾಗ ಮಾರಾಟ ಮಾಡಲು ಹೋದರೆ ಕೊಂಡುಕೊಳ್ಳುವವರೇ ಇಲ್ಲ. ಏನು ಮಾಡೋದು ಇವುಗಳನ್ನ ಇಟ್ಟುಕೊಂಡು ಎಂದು ಬೇಸರದಿಂದ ಹೇಳಿದರು. ಅವರ ಪರಿಸ್ಥಿತಿ ನೋಡಿದರೆ ಬೇಜಾರಾಗುತ್ತೆ. ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ರೈತರು ಸಹ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕಾಂಗ್ರೆಸ್​ ಪಕ್ಷವನ್ನು ಬಲಪಡಿಸುವ ಸಲುವಾಗಿ ದೇವನಹಳ್ಳಿಯಿಂದ ಆರಂಭಿಸಿರುವ ಜನಧ್ವನಿ ಯಾತ್ರೆಯಲ್ಲಿ ಕಾಂಗ್ರೆಸ್​ ಸರ್ಕಾರ  ತನ್ನ ಅವಧಿಯಲ್ಲಿ ಮಾಡಿರುವ ಸಾಧನೆಗಳ ಪಟ್ಟಿಯನ್ನು ಜನರ ಮುಂದಿಟ್ಟ ಡಿ.ಕೆ.ಶಿವಕುಮಾರ್​ ಜನರ ಬೆಂಬಲ ಕೋರಿದರು. ಮುಂದಿನ ದಿನಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ಕ್ಷೇತ್ರಗಳನ್ನು ಕಾಂಗ್ರೆಸ್​ ಪಕ್ಷ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಂತೆಯೇ, ನಾನು ಮಂತ್ರಿಯಾಗಿದ್ದಾಗ ಏರ್​ಪೋರ್ಟ್​ಗೆ ಭೂಮಿ ಕೊಡಿಸಿದ್ದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇಲ್ಲಿಗೆ ತಂದಿದ್ದು ನಾವು. ಎಕರೆಗೆ 6 ಲಕ್ಷ ರೂ.ನಂತೆ 2 ಸಾವಿರ ಎಕರೆ ಭೂಮಿ ಕೊಡಿಸಿದ್ದೆ. ಆದರೆ, ಇಂದು ಒಂದು ಎಕರೆಗೆ 6 ಕೋಟಿ ಬೆಲೆ ಇದೆ. ಬಿಜೆಪಿಯವರು ಯಾವುದಾದ್ರೂ ಇಂತಹ ಕೆಲಸ ಮಾಡಿದ್ದಾರಾ? ಎಂದು ಪ್ರಶ್ನಿಸಿದ ಡಿ.ಕೆ.ಶಿವಕುಮಾರ್, ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್​ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಶರತ್ ಬಚ್ಚೇಗೌಡ​ ಬೆಂಬಲಿಗರು ಕಾಂಗ್ರೆಸ್​ ಪಕ್ಷಕ್ಕೆ ಸೇರಿದ್ದಾರೆ ಮುಂದಿನ ದಿನಗಳಲ್ಲಿ ನಮ್ಮ ಪಕ್ಷ ಇನ್ನೂ ಬಲಗೊಳ್ಳಲಿದೆ ಎಂದು ಹೇಳಿದರು.

ದೇವನಹಳ್ಳಿಗೆ ಬಂದಾಗ ನೀವು ನೀಡಿದ ಉತ್ಸಾಹ, ಪ್ರೋತ್ಸಾಹಕ್ಕೆ ಚಿರಋಣಿ. ಈ ಕಾರ್ಯಕ್ರಮದ ಮೂಲಕ ಇಂದು ಇತಿಹಾಸ ಸೃಷ್ಟಿ ಮಾಡಿದ್ದೀರಿ ಎಂದು ಜನರಿಗೆ ಧನ್ಯವಾದ ಅರ್ಪಿಸಿದರು. ಸಮಾವೇಶದ ನಂತರ ಡಾ.ಅಂಬೇಡ್ಕರ್​ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಉಳಿದ ಕಾಂಗ್ರೆಸ್​ ನಾಯಕರ ಜೊತೆ ಚಿಕ್ಕಬಳ್ಳಾಪುರಕ್ಕೆ ತೆರಳಿದರು.

ಇದನ್ನೂ ಓದಿ: ದೇಶಪ್ರೇಮಿ ಟಿಪ್ಪುವಿನ ಜನ್ಮಸ್ಥಳ ದೇವನಹಳ್ಳಿಯಿಂದ ಕಾಂಗ್ರೆಸ್ ಜನಧ್ವನಿ ಯಾತ್ರೆ ಆರಂಭ: ಸಿದ್ದರಾಮಯ್ಯ

ಜನಧ್ವನಿ ಯಾತ್ರೆಗೆ ಚಾಲನೆ; ದೇವನಹಳ್ಳಿಯಲ್ಲಿ ಸಕಲ ಸಿದ್ಧತೆ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ