ಕಪಟಿ ಬಿಜೆಪಿಗರು ಜೆಡಿಎಸ್​ ಪಕ್ಷವನ್ನು ಮುಗಿಸಲು ಹೊಂಚು ಹಾಕುತ್ತಿದ್ದಾರೆ

ಕಪಟಿ ಬಿಜೆಪಿಗರು ಜೆಡಿಎಸ್​ ಪಕ್ಷವನ್ನು ಮುಗಿಸಲು ಹೊಂಚು ಹಾಕುತ್ತಿದ್ದಾರೆ
ಎಚ್​.ಡಿ.ಕುಮಾರಸ್ವಾಮಿ

ನಾವು ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರದ ಆಸೆ ಎಲ್ಲವನ್ನೂ ತಿರಸ್ಕರಿಸಿ ಬಂದವರು. ಯಕಃಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವುದಿಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ಜೆಡಿಎಸ್​ ಪಕ್ಷ ಎನ್​ಡಿಎ ಮೈತ್ರಿಕೂಟ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Skanda

| Edited By: Ghanashyam D M | ಡಿ.ಎಂ.ಘನಶ್ಯಾಮ

Jan 05, 2021 | 5:58 PM

ಬೆಂಗಳೂರು: ಅತ್ತ ಜೆಡಿಎಸ್​ ಪಕ್ಷ ಎನ್​ಡಿಎ ಮೈತ್ರಿಕೂಟಕ್ಕೆ ಸೇರಲಿದೆ ಎಂಬ ಗುಸುಗುಸು ಶುರುವಾಗಿದ್ದಾರೆ. ಇತ್ತ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿಯ ವಿರುದ್ಧ ಗರಂ ಆಗಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಜೆಡಿಎಸ್ ಪಕ್ಷವನ್ನು ಮುಗಿಸುವುದು ಅಸಾಧ್ಯವೆಂದು ಬಿಜೆಪಿಗೆ ಅರಿವಾಗಿದೆ. ಹೀಗಾಗಿಯೇ ಮೈತ್ರಿಯ ಕಪಟ ನಾಟಕವಾಡಲು ಮುಂದಾಗಿದ್ದು, ಜೆಡಿಎಸ್​ ಪಕ್ಷ ಎನ್​ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಲಾಗುತ್ತಿದೆ ಎಂದು ಹರಿಹಾಯ್ದಿದ್ದಾರೆ.

ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು ಎಂದು ಹೇಳಿರುವ ಹೆಚ್​ಡಿಕೆ, 1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ವಾಜಪೇಯಿ ಅವರು ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಈಗ ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವುದಿಲ್ಲ ಎಂದು ಹೇಳಿದ್ದಾರೆ.

ಇನ್ನೊಂದೆಡೆ, ಜೆಡಿಎಸ್​ ಬೆಂಬಲಿತ ಸದಸ್ಯರಿಗೆ ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಬೆದರಿಕೆ ಹಾಕಲಾಗುತ್ತಿದೆ. ಬೆದರಿಕೆ ಮೂಲಕ ಜೆಡಿಎಸ್ ಬೆಂಬಲಿತ ಸದಸ್ಯರನ್ನು ಸೆಳೆಯುವ ಪ್ರಯತ್ನವಾಗುತ್ತಿದೆ. ಇಂತಹ ಪ್ರಯತ್ನಗಳಿಗೆ ನಾವು ಎದೆಗುಂದುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ದೇವೇಗೌಡರ ಮನೆ ಬಾಗಿಲಿಗೆ ಬಂದಿದ್ದೇ ಕಾಂಗ್ರೆಸ್, ಪಾಪದ ಹಣದಿಂದ ಗ್ರಾ.ಪಂ. ಚುನಾವಣೆ ಮಾಡಿದ್ದೇ ಬಿಜೆಪಿ: HDK

Follow us on

Related Stories

Most Read Stories

Click on your DTH Provider to Add TV9 Kannada