ಬೆಂಗಳೂರು: ಅತ್ತ ಜೆಡಿಎಸ್ ಪಕ್ಷ ಎನ್ಡಿಎ ಮೈತ್ರಿಕೂಟಕ್ಕೆ ಸೇರಲಿದೆ ಎಂಬ ಗುಸುಗುಸು ಶುರುವಾಗಿದ್ದಾರೆ. ಇತ್ತ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿಯ ವಿರುದ್ಧ ಗರಂ ಆಗಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಜೆಡಿಎಸ್ ಪಕ್ಷವನ್ನು ಮುಗಿಸುವುದು ಅಸಾಧ್ಯವೆಂದು ಬಿಜೆಪಿಗೆ ಅರಿವಾಗಿದೆ. ಹೀಗಾಗಿಯೇ ಮೈತ್ರಿಯ ಕಪಟ ನಾಟಕವಾಡಲು ಮುಂದಾಗಿದ್ದು, ಜೆಡಿಎಸ್ ಪಕ್ಷ ಎನ್ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಲಾಗುತ್ತಿದೆ ಎಂದು ಹರಿಹಾಯ್ದಿದ್ದಾರೆ.
ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು ಎಂದು ಹೇಳಿರುವ ಹೆಚ್ಡಿಕೆ, 1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ವಾಜಪೇಯಿ ಅವರು ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಈಗ ಯಕಶ್ಚಿತ್ ಮಂತ್ರಿ ಸ್ಥಾನಕ್ಕೆ ಆಸೆ ಪಡುವುದಿಲ್ಲ ಎಂದು ಹೇಳಿದ್ದಾರೆ.
ಇನ್ನೊಂದೆಡೆ, ಜೆಡಿಎಸ್ ಬೆಂಬಲಿತ ಸದಸ್ಯರಿಗೆ ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಬೆದರಿಕೆ ಹಾಕಲಾಗುತ್ತಿದೆ. ಬೆದರಿಕೆ ಮೂಲಕ ಜೆಡಿಎಸ್ ಬೆಂಬಲಿತ ಸದಸ್ಯರನ್ನು ಸೆಳೆಯುವ ಪ್ರಯತ್ನವಾಗುತ್ತಿದೆ. ಇಂತಹ ಪ್ರಯತ್ನಗಳಿಗೆ ನಾವು ಎದೆಗುಂದುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ.ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ.
6/6— H D Kumaraswamy (@hd_kumaraswamy) January 3, 2021
ದೇವೇಗೌಡರ ಮನೆ ಬಾಗಿಲಿಗೆ ಬಂದಿದ್ದೇ ಕಾಂಗ್ರೆಸ್, ಪಾಪದ ಹಣದಿಂದ ಗ್ರಾ.ಪಂ. ಚುನಾವಣೆ ಮಾಡಿದ್ದೇ ಬಿಜೆಪಿ: HDK