ಸಿಎಂ ಸಿದ್ದರಾಮಯ್ಯಗೆ ಕೆ.ಎನ್. ರಾಜಣ್ಣ ಆತಿಥ್ಯ: ಮಾಜಿ ಸಚಿವರ ಪ್ಲ್ಯಾನ್ ಏನು?
ಸಚಿವ ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬಂದಿರುವ ಹಿನ್ನಲೆ ರಾಜ್ಯ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಗೆಳು ಗರಿಗೆದರಿವೆ. ಈ ನಡುವೆ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ, ಶಾಸಕ ಕೆ.ಎನ್. ರಾಜಣ್ಣ ಆತಿಥ್ಯ ನೀಡಲು ಮುಂದಾಗಿರೋದು ಭಾರಿ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿಗಳ ಸ್ವಾಗತಕ್ಕೆ ಶಾಸಕರ ಮನೆಯಲ್ಲಿ ಸಕಲ ಸಿದ್ಧತೆ ನಡೆದಿದೆ.
ತುಮಕೂರು, ನವೆಂಬರ್ 07: ಸಿಎಂ ಸಿದ್ದರಾಮಯ್ಯ ಭೇಟಿ ಹಿನ್ನಲೆ ಮಾಜಿ ಸಚಿವ, ಶಾಸಕ ಕೆ.ಎನ್. ರಾಜಣ್ಣ ತುಮಕೂರು ನಿವಾಸದಲ್ಲಿ ಸಕಲ ಸಿದ್ಧತೆ ಭರದಿಂದ ಸಾಗಿದೆ. ಮಂತ್ರಿ ಸ್ಥಾನ ಕೈತಪ್ಪಿದ ಬಳಿಕ ಮೊದಲ ಬಾರಿಗೆ ಸಿಎಂಗೆ ರಾಜಣ್ಣ ಅತಿಥ್ಯ ನೀಡುತ್ತಿದ್ದು, ಸಹಜವಾಗಿಯೇ ಈ ಬಗ್ಗೆ ಕುತೂಹಲ ಹೆಚ್ಚಿದೆ. ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಮತ್ತೆ ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬಗ್ಗೆ ಬಹಿರಂಗವಾಗಿಯೇ ಕೆ.ಎನ್.ರಾಜಣ್ಣ ಹೇಳಿಕೆ ನೀಡಿದ್ದು, ಇಂದು ಊಟದ ವೇಳೆ ರಾಜ್ಯ ರಾಜಕೀಯ ಚರ್ಚೆ ಸಾಧ್ಯತೆ ಇದೆ. ಈ ವೇಳೆ ಪರಮೇಶ್ವರ್ ಮತ್ತು ತುಮಕೂರು ಶಾಸಕರು ಭಾಗಿಯಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
