AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ತಳಮಳ: ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಯವೈಖರಿ ವಿರುದ್ಧ ರಾಜ್ಯಪಾಲರು, ಹೈಕಮಾಂಡ್​ಗೆ ಈಶ್ವರಪ್ಪ ದೂರು

ಬೆಂಗಳೂರು: ಕರ್ನಾಟಕದ ಆಡಳಿತಾರೂಢ ಭಾರತೀಯ ಜನತಾ ಪಕ್ಷದಲ್ಲಿ (ಬಿಜೆಪಿ) ಎಲ್ಲವೂ ಸರಿಯಿಲ್ಲ. ಮೇಲ್ನೋಟಕ್ಕೆ ಸಚಿವ ಸಂಪುಟ ಸದಸ್ಯರಲ್ಲಿ ಹೊಂದಾಣಿಕೆಯಿದೆ ಎನಿಸಿದರೂ ಒಳಗೊಳಗೆ ಭಿನ್ನಮತ ಕುದಿಯುತ್ತಲೇ ಇದೆ. ಈ ಮಾತಿಗೆ ಪುಷ್ಟಿ ನೀಡುವಂಥ ಮತ್ತೊಂದು ಬೆಳವಣಿಗೆ ಇದೀಗ ನಡೆದಿದೆ. ಸಚಿವ ಸಂಪುಟದ ಹಿರಿಯ ಸದಸ್ಯರೇ ಮುಖ್ಯಮಂತ್ರಿ ಕಾರ್ಯವೈಖರಿ ಖಂಡಿಸಿ ಹೈಕಮಾಂಡ್ ಮತ್ತು ರಾಜ್ಯಪಾಲರಿಗೆ ಪತ್ರಬರೆದಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆಗೆದುಕೊಂಡ ಕೆಲ ಕ್ರಮಗಳನ್ನು ಖಂಡಿಸಿದ್ದಾರೆ. ಈ ಬೆಳವಣಿಗೆಯೊಂದಿಗೆ ಬಿಜೆಪಿ ರಾಜ್ಯ […]

ಬಿಜೆಪಿಯಲ್ಲಿ ತಳಮಳ: ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಯವೈಖರಿ ವಿರುದ್ಧ ರಾಜ್ಯಪಾಲರು, ಹೈಕಮಾಂಡ್​ಗೆ ಈಶ್ವರಪ್ಪ ದೂರು
ಕೆ.ಎಸ್.ಈಶ್ವರಪ್ಪ ಮತ್ತು ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 31, 2021 | 8:06 PM

Share

ಬೆಂಗಳೂರು: ಕರ್ನಾಟಕದ ಆಡಳಿತಾರೂಢ ಭಾರತೀಯ ಜನತಾ ಪಕ್ಷದಲ್ಲಿ (ಬಿಜೆಪಿ) ಎಲ್ಲವೂ ಸರಿಯಿಲ್ಲ. ಮೇಲ್ನೋಟಕ್ಕೆ ಸಚಿವ ಸಂಪುಟ ಸದಸ್ಯರಲ್ಲಿ ಹೊಂದಾಣಿಕೆಯಿದೆ ಎನಿಸಿದರೂ ಒಳಗೊಳಗೆ ಭಿನ್ನಮತ ಕುದಿಯುತ್ತಲೇ ಇದೆ. ಈ ಮಾತಿಗೆ ಪುಷ್ಟಿ ನೀಡುವಂಥ ಮತ್ತೊಂದು ಬೆಳವಣಿಗೆ ಇದೀಗ ನಡೆದಿದೆ. ಸಚಿವ ಸಂಪುಟದ ಹಿರಿಯ ಸದಸ್ಯರೇ ಮುಖ್ಯಮಂತ್ರಿ ಕಾರ್ಯವೈಖರಿ ಖಂಡಿಸಿ ಹೈಕಮಾಂಡ್ ಮತ್ತು ರಾಜ್ಯಪಾಲರಿಗೆ ಪತ್ರಬರೆದಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆಗೆದುಕೊಂಡ ಕೆಲ ಕ್ರಮಗಳನ್ನು ಖಂಡಿಸಿದ್ದಾರೆ.

ಈ ಬೆಳವಣಿಗೆಯೊಂದಿಗೆ ಬಿಜೆಪಿ ರಾಜ್ಯ ಘಟಕದಲ್ಲಿ ಮತ್ತು ಸರ್ಕಾರದ ಮುಂಚೂಣಿ ನಾಯಕರಲ್ಲಿ ಮತ್ತೆ ಕೋಲ್ಡ್ ವಾರ್ ಭುಗಿಲೆದ್ದಿದೆ. ಮುಖ್ಯಮಂತ್ರಿ ಕಾರ್ಯವೈಖರಿ ಖಂಡಿಸಿ ಸಚಿವ ಸಂಪುಟದ ಹಿರಿಯ ಸದಸ್ಯರು ಮತ್ತು ಮುಖ್ಯಮಂತ್ರಿಯ ತವರೂ ಜಿಲ್ಲೆಯೂ ಆಗಿರುವ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಪತ್ರದ ಮೂಲಕ ದೂರು ಸಲ್ಲಿಸಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪ ಸಲ್ಲಿಸಿರುವ ಲಿಖಿತ ದೂರಿನ ಪ್ರತಿ ‘ಟಿವಿ9 ಕನ್ನಡ ಡಿಜಿಟಲ್’ಗೆ ಲಭ್ಯವಾಗಿದೆ.

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನನ್ನ ಗಮನಕ್ಕೆ ಬಾರದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇರ ಹಸ್ತಕ್ಷೇಪ ಮಾಡುತ್ತಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಬಿಡುಗಡೆಯಾಗಬೇಕಾಗಿದ್ದ ಹಣವನ್ನು ಶಾಸಕರಿಗೆ ಬಿಡುಗಡೆ ಮಾಡಿದ್ದಾರೆ. ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಹೆಚ್ಚು ಅನುದಾನ ನೀಡಿದ್ದಾರೆ ಎಂದು ಈಶ್ವರಪ್ಪ ತಮ್ಮ ಎರಡು ಪುಟಗಳ ದೂರಿನಲ್ಲಿ ಹೇಳಿದ್ದಾರೆ.

KS-Eshwarappa-Letter

ಕೆ.ಎಸ್​.ಈಶ್ವರಪ್ಪ ಬರೆದಿರುವ ಪತ್ರ

ರಾಜ್ಯದ ಸದ್ಯದ ಆಡಳಿತ ಶೈಲಿಯನ್ನು ಬದಲಿಸಬೇಕೆಂದು ಬಿಜೆಪಿ ಹೈಕಮಾಂಡ್‌ಗೆ ಈಶ್ವರಪ್ಪ ಮನವಿ ಮಾಡಿದ್ದಾರೆ. ಪತ್ರವನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ರವಾನಿಸಿದ್ದಾರೆ. ರಾಜ್ಯಪಾಲರಿಗೂ ಈ ಕುರಿತು ದೂರು ನೀಡಿದ್ದಾರೆ. ಸಂಪುಟ ಸಹೋದ್ಯೋಗಿಗಳ ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡದಂತೆ ಸಿಎಂಗೆ ನಿರ್ದೇಶನ ನೀಡುವಂತೆ ಪತ್ರ ರಾಜ್ಯಪಾಲರಿಗೆ ಸಲ್ಲಿಸಿರುವ ಲಿಖಿತ ದೂರಿನಲ್ಲಿ ಈಶ್ವರಪ್ಪ ಒತ್ತಾಯಿಸಿದ್ದಾರೆ.

ತಮ್ಮ ಇಲಾಖೆಗೆ ಸಂಬಂಧಿಸಿದ ನಿಧಿ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಲವು ಬಾರಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಅನುದಾನ ಹಂಚಿಕೆ ವಿಚಾರದ ಬಗ್ಗೆ ಯಡಿಯೂರಪ್ಪ ಅವರೊಂದಿಗೆ ವೈಯಕ್ತಿಕವಾಗಿ ಚರ್ಚೆ ನಡೆಸಲು ಯತ್ನಿಸಿದೆ. ಆದರೆ ದೂರುಗಳ ಬಗ್ಗೆ ಗಮನ ನೀಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದರು. ನಿಯಮಗಳನ್ನು ಪಾಲಿಸುವಂತೆ ಹಾಗೂ ನನ್ನ ಸಂವಿಧಾನಾತ್ಮಕ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡದಿರುವುದಂತೆ ಯಡಿಯೂರಪ್ಪ ಅವರಿಗೆ ಸೂಚಿಸಬೇಕೆಂದು ಈಶ್ವರಪ್ಪ ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿಯಿಂದ ಆಗಿರುವ ಈ ಲೋಪಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಗಮನ ಸೆಳೆಯಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಈ ವರ್ಷ ಯಾರೂ ಸಹ ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣ ಆಗಲ್ಲ -ಸಚಿವ ಕೆ.ಎಸ್.ಈಶ್ವರಪ್ಪ

ಇದನ್ನೂ ಓದಿ: ಸಿದ್ದರಾಮಯ್ಯ. ಈಶ್ವರಪ್ಪ, ಬೊಮ್ಮಾಯಿ, ರೇವಣ್ಣ ಹಾಗೂ ಸ್ಪೀಕರ್‌ ಸದನದಲ್ಲಿ ಅದ್ಹೆಂಗೆ ಪರಸ್ಪರರ ಕಾಲೆಳೆದ್ರು ಗೊತ್ತಾ..

Published On - 7:54 pm, Wed, 31 March 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?