ಬೆಂಗಳೂರು: ರಾಜಕೀಯ ಷಡ್ಯಂತ್ರದ ಗುಮಾನಿ ಹಿನ್ನೆಲೆಯಿಂದಾಗಿ ಕೋರ್ಟ್ ಮೊರೆ ಹೋಗಿದ್ದಕ್ಕೆ ಟ್ವಿಟ್ಟರ್ ಮೂಲಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್, ರಾಜ್ಯದಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎಂಬ ಪರಿಸ್ಥಿತಿ ಇರುವುದು ಸುಳ್ಳಲ್ಲ.
ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ..
ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವಿ.
ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಡಾ.ಕೆ.ಸುಧಾಕರ್ ರಾಜಕೀಯವಾಗಿ ನಡೆದುಬಂದ ಹಾದಿ
ಚಿಕ್ಕಬಳ್ಳಾಪುರ ತಾಲೂಕಿನ ಪರೇಸಂದ್ರ ಗ್ರಾಮದಲ್ಲಿ ಜನಸಿದ್ದು, ಇವರ ತಂದೆ ಪಿ.ಎನ್.ಕೇಶವರೆಡ್ಡಿ ನಿವೃತ್ತ ಹೈಸ್ಕೂಲ್ ಶಿಕ್ಷಕರು ಹಾಗೂ ಹಾಲಿ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದಾರೆ. ತುಮಕೂರಿನ ಸಿದ್ದಾರ್ಥ ಮೇಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ವೈಧ್ಯಕೀಯ ಶಿಕ್ಷಣ ಪದವಿ ಪಡೆದಿರುವ ಸುಧಾಕರ್, ರಾಜ್ಯ ರಾಜಕಾರಣಕ್ಕೆ ಬರುವುದಕ್ಕೂ ಮುನ್ನ ಶ್ರೀಲಂಕಾ ದೇಶದ ಭಾರತದ ವಾಣಿಜ್ಯ ಪ್ರತಿನಿಧಿಯಾಗಿದ್ರು. 2013 ಹಾಗೂ 2018ರಲ್ಲಿ ನಡೆದ ಚಿಕ್ಕಬಳ್ಳಾಫುರ ವಿಧಾನಸಭೆ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಭಾರಿ ಅಂತರಗಳ ಬಹುಮತದಿಂದ ಎರಡು ಭಾರಿ ಶಾಸಕರಾಗಿ ಆಯ್ಕೆಯಾದರು.
ಕೆಲವು ತಿಂಗಳುಗಳ ಕಾಲ ಸಮ್ಮೀಶ್ರ ಸರ್ಕಾರದ ಅವಧಿಯ ಕೊನೆ ದಿನಗಳಲ್ಲಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ನಂತರ ಸಮ್ಮೀಶ್ರ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ದೊರೆಯಲಿಲ್ಲ ಅನ್ನೊ ಕಾರಣಕ್ಕೆ ಕಾಂಗ್ರೆಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರ್ಪಡೆಗೊಂಡರು. ನಂತರ, ಕಳೆದ ವಿಧಾನಸಭೆ ಉಪ ಚುನಾವಣೆಯಲ್ಲಿ 34 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿ, ಮೂರನೆ ಭಾರಿಗೆ ಶಾಸಕರಾಗಿ ಆಯ್ಕೆ ಆದರು. ಈಗ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ. (3/3)
— Dr Sudhakar K (@mla_sudhakar) March 5, 2021
ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವಿ. (2/3)
— Dr Sudhakar K (@mla_sudhakar) March 5, 2021
ರಾಜ್ಯದಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎಂಬ ಪರಿಸ್ಥಿತಿ ಇರುವುದು ಸುಳ್ಳಲ್ಲ. (1/3)
— Dr Sudhakar K (@mla_sudhakar) March 5, 2021
ಇದನ್ನೂ ಓದಿ:ತಮ್ಮ ವಿರುದ್ಧ ಮಾಧ್ಯಮಗಳು ವರದಿ ಮಾಡಬಾರದೆಂದು ಕೋರ್ಟ್ ಮೆಟ್ಟಿಲೇರಿದ ಕರ್ನಾಟಕದ 6 ಸಚಿವರು: ಅಚ್ಚರಿ ಹುಟ್ಟಿಸಿದ ನಡೆ
Published On - 7:24 am, Sat, 6 March 21