ಕೋರ್ಟ್ ಮೊರೆ ಹೋದ ಮುಂಬೈ ಮಿತ್ರ ಮಂಡಳಿ ಸದಸ್ಯರು ನೀಡಿದ ಸ್ಪಷ್ಟನೆ ಏನು ಗೊತ್ತಾ? ಇಲ್ಲಿದೆ ವಿವರ

ನಿನ್ನೆ 6 ಸಚಿವರು ಕೋರ್ಟ್​ಗೆ ಅರ್ಜಿ ಹಾಕಿದ್ದೇವೆ. ಇಂದು ಮತ್ತೆ 6 ಜನ ಕೋರ್ಟ್​ಗೆ ಅರ್ಜಿ ಹಾಕುತ್ತಾರೆ ಎಂದು ಮತ್ತಷ್ಟು ಸಚಿವರು ಅರ್ಜಿ ಹಾಕುವ ಬಗ್ಗೆ ಸೋಮಶೇಖರ್ ಸುಳಿವು ನೀಡಿದ್ದಾರೆ.

ಕೋರ್ಟ್ ಮೊರೆ ಹೋದ ಮುಂಬೈ ಮಿತ್ರ ಮಂಡಳಿ ಸದಸ್ಯರು ನೀಡಿದ ಸ್ಪಷ್ಟನೆ ಏನು ಗೊತ್ತಾ? ಇಲ್ಲಿದೆ ವಿವರ
ಭೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Mar 06, 2021 | 10:34 AM

ಬೆಂಗಳೂರು: ತಮ್ಮ ಆಪ್ತ ರಮೇಶ್​ ಜಾರಕಿಹೊಳಿ ಅವರ ಸಿಡಿ ಪ್ರಕರಣ ಹೊರಬರುತ್ತಿದ್ದಂತೆ, ರಮೇಶ್​ ಆಪ್ತರಾದ ಆರು ಮಂದಿ ಸಚಿವರು ತಮ್ಮ ವಿರುದ್ಧ ಯಾವುದೇ ರೀತಿಯ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಹೀಗಾಗಿ ತಾವು ಕೋರ್ಟ್​ ಮೊರೆ ಹೋಗಲು ನಿಜವಾದ ಕಾರಣ ಏನೆಂಬುದನ್ನು ಮುಂಬೈ ಮಿತ್ರಮಂಡಳಿ ವಿವರಿಸಿದ್ದು ಹೀಗೆ:

ಈ ಬಗ್ಗೆ ಟ್ವಿಟ್ಟರ್​ನಲ್ಲಿ ಪೋಸ್ಟ್​ ಮಾಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ಒಬ್ಬ ರೈತನ ಮಗನಾಗಿ ಯಾವುದೇ ಗಾಡ್ ಫಾದರ್ ಇಲ್ಲದೇ ಇಷ್ಟರ ಮಟ್ಟಕ್ಕೆ ಬೆಳೆದುಬಂದಿದ್ದು ಬಹಳಷ್ಟು ಜನರಿಗೆ ಸಹಿಸಲು ಆಗುವುದಿಲ್ಲ. ಆದರೆ ಯಾವುದೋ ಕುತಂತ್ರಿಗಳ ರಾಜಕೀಯ ಷಡ್ಯಂತ್ರಕ್ಕೆ ನಮ್ಮ ಹೆಸರನ್ನು ವಿನಾಕಾರಣ ಸತ್ಯಾಸತ್ಯತೆ ಅರಿಯದೆ ನಮ್ಮ ತೇಜೋವಧೆ ಆಗಬಾರದು ಎಂಬ ದೃಷ್ಟಿಯಲ್ಲಿ , ಮುನ್ನೆಚ್ಚರಿಕೆಯ ಕ್ರಮವಾಗಿ ಕಾನೂನಿನ ಮೊರೆ ಹೋಗಿದ್ದೇವೆ. ಆದ್ದರಿಂದ ನಾವೆಲ್ಲರೂ ನಮ್ಮ ವಿರುದ್ಧ ಸತ್ಯಾಸತ್ಯತೆ ಅರಿಯದೆ ನಮ್ಮ ವಿರುದ್ಧ ಪ್ರಸಾರವಾಗಬಾರದು ಎಂದು ಕೋರ್ಟಿಗೆ ತಡೆಯಾಜ್ಞೆ ಅರ್ಜಿ ಸಲ್ಲಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಯಾವುದೇ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಭೈರತಿ ಬಸವರಾಜ್ ನ್ಯಾಯಾಲಯದ ಮೊರೆ ಹೋದ ವಿಚಾರಕ್ಕೆ ಸಂಬಂಧಿಸಿದಂತೆ ಟಿವಿ9 ಜೊತೆ ಮಾತಾನಾಡಿದ ಸಚಿವ ಭೈರತಿ ಬಸವರಾಜ್, ನಮ್ಮ ತೇಜೋವಧೆ ಆಗಬಾರದೆಂದು ಕೋರ್ಟ್ ಮೊರೆ ಹೋಗಿದ್ದೇವೆ. ಹೀಗಾಗಿ ಇದಕ್ಕೆ ಬೇರೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ತಂತ್ರಜ್ಞಾನ ಬಳಸಿಕೊಂಡು ಏನಾದ್ರು ಮಾಡಬಹುದು.

ನಾವು ಯಾವುದೇ ರೀತಿಯ ತಪ್ಪು ಮಾಡಿಯೇ ಇಲ್ಲ. ನಮ್ಮ ವಿರುದ್ಧ ಬಹಳಷ್ಟು ಷಡ್ಯಂತ್ರಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಏನು ಬೇಕಾದ್ರೂ ನಡೀಬಹುದು. ನಮ್ಮ ವೇಗಕ್ಕೆ ಕಡಿವಾಣ ಹಾಕಲು ಷಡ್ಯಂತ್ರ ನಡೀತಿದೆ. ಹೀಗಾಗಿ ನಾವು ಕೋರ್ಟ್ ಮೊರೆ ಹೋಗಿದ್ದೇವೆ ಅಷ್ಟೆ. ನಾನು ನನ್ನ ಕೈ, ಬಾಯಿ ಶುದ್ಧವಾಗಿ ಇಟ್ಟುಕೊಂಡು ಬಂದ ವ್ಯಕ್ತಿ. ಷಡ್ಯಂತ್ರದ ಬಗ್ಗೆ ಗೊತ್ತಿದ್ದು ನಾವು ಸುಮ್ಮನಾಗಬಾರದು.

ಈಗ ಬಹಳಷ್ಟು ದ್ವೇಷದ ರಾಜಕಾರಣ ನಡೆಯುತ್ತಿದೆ. ನಮ್ಮ ವಿರೋಧಿಗಳು ಬಹಳಷ್ಟು ಜನ ಹುಟ್ಟಿಕೊಂಡಿದ್ದಾರೆ. ತನಿಖೆಯ ನಂತರ ಷಡ್ಯಂತ್ರಗಳು ಬಯಲಾಗಲಿದೆ. ನಾವು ಕುಂಬಳಕಾಯಿ ಕಳ್ಳರೂ ಅಲ್ಲ, ಹೆಗಲೂ ಮುಟ್ಟಿಕೊಂಡಿಲ್ಲ. ಬುಟ್ಟಿಯಲ್ಲಿ ಯಾವುದೇ ಹಾವೂ ಇಲ್ಲ, ಚೇಳೂ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಅಧಿವೇಶನದ ವೇಳೆ ಟಾರ್ಗೆಟ್ ಮಾಡಲು ಪ್ಲ್ಯಾನ್: ಎಸ್.ಟಿ.ಸೋಮಶೇಖರ್ ಈ ಬಗ್ಗೆ ಮಾತಾನಾಡಿದ ಎಸ್.ಟಿ.ಸೋಮಶೇಖರ್, ಅಧಿವೇಶನದ ವೇಳೆ ನಮ್ಮನ್ನು ಟಾರ್ಗೆಟ್ ಮಾಡಲು ಪ್ಲ್ಯಾನ್ ಮಾಡಿದ್ದಾರೆ ಎಂದು ಹಳೆಯ ಸ್ನೇಹಿತರು ನಮಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಅವಮಾನ, ತೇಜೋವಧೆ ಮಾಡಲು ಟಾರ್ಗೆಟ್ ಮಾಡಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ.

ನಾವು ಯಾವುದೋ ಭೀತಿಯಿಂದ ಕೋರ್ಟ್‌ಗೆ ಹೋಗಿಲ್ಲ. ನಾವು ರಾಜಕೀಯ ಷಡ್ಯಂತ್ರಕ್ಕೆ ಟಾರ್ಗೆಟ್ ಆಗಬಾರದು. 2-3 ನಿಮಿಷದಲ್ಲಿ ತೇಜೋವಧೆ ಮಾಡಿದ್ರೆ ಹೇಗೆ? ಹೀಗಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ. ನಮಗೆ ಯಾವುದೇ ವಿಡಿಯೋಗಳ ಬಗ್ಗೆ ಭಯ ಇಲ್ಲ. ಏನೋ ಕ್ರಿಯೇಟ್ ಮಾಡಿ ಬ್ಲ್ಯಾಕ್‌ಮೇಲ್ ಮಾಡ್ತಾರೆ. ಯಾರು ಷಡ್ಯಂತ್ರ ಮಾಡುತ್ತಿದ್ದಾರೆಂದು ತಿಳಿಯುತ್ತೆ. 2-3 ದಿನದಲ್ಲಿ ಎಲ್ಲ ವಿಚಾರಗಳು ಬಯಲಾಗುತ್ತೆ. ಬಳಿಕ ನಾವು 15 ಜನ ಕುಳಿತು ಚರ್ಚೆ ಮಾಡುತ್ತೇವೆ. ಈ ಬಗ್ಗೆಯೂ ನಾವು ಸಿಎಂ ಜತೆ ಚರ್ಚೆ ಮಾಡುತ್ತೇವೆ.

ಮುಂಬೈನಲ್ಲಿ ಏನೇನು ನಡೆದಿತ್ತು ಎಂದು 2-3 ದಿನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತೇವೆ.15 ಜಂಟಿ ಸುದ್ದಿಗೋಷ್ಠಿ ಮಾಡುತ್ತೇವೆ. ನಿನ್ನೆ 6 ಸಚಿವರು ಕೋರ್ಟ್​ಗೆ ಅರ್ಜಿ ಹಾಕಿದ್ದೇವೆ. ಇಂದು ಮತ್ತೆ 6 ಜನ ಕೋರ್ಟ್​ಗೆ ಅರ್ಜಿ ಹಾಕುತ್ತಾರೆ ಎಂದು ಮತ್ತಷ್ಟು ಸಚಿವರು ಅರ್ಜಿ ಹಾಕುವ ಬಗ್ಗೆ ಸೋಮಶೇಖರ್ ಸುಳಿವು ನೀಡಿದ್ದಾರೆ.

ಇದನ್ನೂ ಓದಿ: ಆ ಆರು ಸಚಿವರಿಗೆ ಕಾಡ್ತಿದೆಯಾ ‘ಮುಂಬೈ ಡೈರೀಸ್’ ನೆನಪು! ದಿನೇಶ್ ಕಲ್ಲಹಳ್ಳಿ ವಿರುದ್ಧ ಕಂಪ್ಲೇಂಟ್ ನೀಡುವಂತೆ ರಮೇಶ್ ಜಾರಕಿಹೊಳಿ ಮೇಲೆ ಒತ್ತಡ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್