AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಮುಗಿದಿಲ್ಲ ಖಾತೆ ಕ್ಯಾತೆ: ಹೈಕಮಾಂಡ್​ನಿಂದ ಸ್ಪಷ್ಟತೆ ಸಿಗುವ ವರೆಗೆ ಅಧಿಕಾರ ಸ್ವೀಕರಿಸಲ್ಲವೆಂದ ಕೃಷ್ಣಭೈರೇಗೌಡ!

ಸಚಿವ ಕೃಷ್ಣಭೈರೇಗೌಡರು ಬೆಂಗಳೂರು ನಗರಾಭಿವೃದ್ಧಿ ಖಾತೆ ಸ್ವೀಕರಿಸಲು ನಿರಾಕರಿಸಿದ್ದಾರೆ. ಬಿಡಿಎ ಮತ್ತು ಬಿಎಂಆರ್‌ಡಿಎ ಇಲಾಖೆಗಳನ್ನು ತಮ್ಮ ಖಾತೆಗೆ ಸೇರಿಸಬೇಕೆಂದು ಅವರು ಹೈಕಮಾಂಡ್‌ ಜತೆ ಪಟ್ಟು ಹಿಡಿದಿದ್ದಾರೆ. ಈ ಎರಡು ಪ್ರಾಧಿಕಾರಗಳಿಲ್ಲದೆ ಖಾತೆಯು ಪರಿಣಾಮಕಾರಿ ಆಗುವುದಿಲ್ಲ ಎಂಬುದು ಅವರ ವಾದವಾಗಿದೆ. ಹೈಕಮಾಂಡ್‌ನ ಸ್ಪಷ್ಟ ಸಂದೇಶ ಬರುವವರೆಗೂ ಅಧಿಕಾರ ವಹಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಇನ್ನೂ ಮುಗಿದಿಲ್ಲ ಖಾತೆ ಕ್ಯಾತೆ: ಹೈಕಮಾಂಡ್​ನಿಂದ ಸ್ಪಷ್ಟತೆ ಸಿಗುವ ವರೆಗೆ ಅಧಿಕಾರ ಸ್ವೀಕರಿಸಲ್ಲವೆಂದ ಕೃಷ್ಣಭೈರೇಗೌಡ!
ಬೆಂಗಳೂರು ನಗರಾಭಿವೃದ್ಧಿ ಖಾತೆಯಲ್ಲಿ ಬಿಡಿಎ, ಬಿಎಂಆರ್‌ಡಿಎ ಸೇರಿಸಲು ಕೃಷ್ಣಭೈರೇಗೌಡ ಪಟ್ಟುImage Credit source: tv9
ಪ್ರಸನ್ನ ಗಾಂವ್ಕರ್​
| Edited By: |

Updated on: Jun 08, 2026 | 12:06 PM

Share

ಬೆಂಗಳೂರು, ಜೂನ್ 8: ಸಿಎಂ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ನೂತನ ಸಚಿವ ಸಂಪುಟ ರಚನೆಯಾಗಿ ಮೂರ್ನಾಲ್ಕು ದಿನಗಳೇ ಕಳೆದರೂ ಖಾತೆ ಹಂಚಿಕೆ ಕುರಿತಂತೆ ಗೊಂದಲಗಳು ಮುಂದುವರಿದಿವೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಪಡೆದಿರುವ ಸಚಿವ ಕೃಷ್ಣಭೈರೇಗೌಡರು (Krishna Byre Gowda), ಖಾತೆಯಲ್ಲಿ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಮತ್ತು ಬಿಎಂಆರ್‌ಡಿಎ (ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ) ಇಲಾಖೆಗಳನ್ನು ಸೇರಿಸುವಂತೆ ಹೈಕಮಾಂಡ್ ಜತೆ ಪಟ್ಟು ಹಿಡಿದಿದ್ದಾರೆ. ಈ ಬೇಡಿಕೆ ಈಡೇರುವವರೆಗೂ ಖಾತೆಯ ಜವಾಬ್ದಾರಿ ವಹಿಸಿಕೊಳ್ಳುವುದಿಲ್ಲ ಎಂದು ಅವರು ತೀರ್ಮಾನಿಸಿದ್ದಾರೆ.

ಮುಖ್ಯಾಂಶಗಳು

  • ಬೆಂಗಳೂರು ನಗರಾಭಿವೃದ್ಧಿ ಖಾತೆಯಲ್ಲಿ ಬಿಡಿಎ, ಬಿಎಂಆರ್‌ಡಿಎ ಸೇರಿಸಲು ಕೃಷ್ಣಭೈರೇಗೌಡ ಪಟ್ಟು.
  • ಬೇಡಿಕೆ ಈಡೇರುವವರೆಗೂ ಅಧಿಕಾರ ಸ್ವೀಕರಿಸಲ್ಲವೆಂದು ನಿರ್ಧಾರ.
  • ಸುರ್ಜೇವಾಲ ಸಮ್ಮುಖದಲ್ಲೇ ತಾರತಮ್ಯದ ಪ್ರಶ್ನೆ ಎತ್ತಿದ ಸಚಿವ.

ಶನಿವಾರ ಖಾಸಗಿ ಹೋಟೆಲ್‌ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕೃಷ್ಣಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆಯು ಬಿಡಿಎ ಮತ್ತು ಬಿಎಂಆರ್‌ಡಿಎ ಇಲ್ಲದೆ ಪರಿಪೂರ್ಣವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆಯು ಪ್ರಮುಖವಾಗಿ ಈ ಎರಡು ಪ್ರಾಧಿಕಾರಗಳಿಂದಲೇ ಪ್ರಬಲವಾಗಿದೆ. ಈ ಎರಡನ್ನೂ ಹೊರತುಪಡಿಸಿದರೆ, ಖಾತೆಯು ಕೇವಲ ಕಾರ್ಪೊರೇಷನ್ ವಿಷಯಗಳಿಗೆ ಸೀಮಿತವಾಗುತ್ತದೆ ಎಂದು ಅವರು ಹೇಳಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಕಂದಾಯ ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸಿದ್ದೆ. ಆದರೂ ಈ ರೀತಿಯ ಅಪೂರ್ಣ ಖಾತೆ ನೀಡುವ ಮೂಲಕ ತಾರತಮ್ಯ ಮಾಡುತ್ತಿರುವುದು ಏಕೆ ಎಂದು ಅವರು ಸುರ್ಜೇವಾಲ ಬಳಿ ಪ್ರಶ್ನಿಸಿದ್ದಾರೆ ಎಂಬುದು ತಿಳಿದುಬಂದಿದೆ. ಹಿಂದೆ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದವರಿಗೆ ಬಿಡಿಎ ಮತ್ತು ಬಿಎಂಆರ್‌ಡಿಎ ಎರಡನ್ನೂ ಜವಾಬ್ದಾರಿಯನ್ನಾಗಿ ನೀಡಲಾಗುತ್ತಿತ್ತು. ಈಗ ಈ ಪದ್ಧತಿಯನ್ನು ಏಕೆ ಬದಲಾಯಿಸಲಾಗಿದೆ ಎಂದು ಅವರು ಪ್ರಶ್ನಿಸಿದ್ದಾರೆ. ಅಲ್ಲದೆ, ತನಗೂ ಈ ಎರಡೂ ಪ್ರಾಧಿಕಾರಗಳ ಜವಾಬ್ದಾರಿಯನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸ್ಪಷ್ಟತೆ ಸಿಗುವ ವರೆಗೂ ಅಧಿಕಾರ ವಹಿಸಲ್ಲ: ಕೃಷ್ಣಭೈರೇಗೌಡ

ಈ ವಿಷಯದ ಬಗ್ಗೆ ಹೈಕಮಾಂಡ್, ವಿಶೇಷವಾಗಿ ಸುರ್ಜೇವಾಲ ಅಥವಾ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಂದ ಸ್ಪಷ್ಟ ಸಂದೇಶ ಬರುವವರೆಗೂ ಖಾತೆಯ ಜವಾಬ್ದಾರಿಯನ್ನು ವಹಿಸಿಕೊಳ್ಳದಿರಲು ಕೃಷ್ಣಭೈರೇಗೌಡ ನಿರ್ಧರಿಸಿದ್ದಾರೆ. ಈ ಹಿಂದೆ ಇದೇ ಬೆಂಗಳೂರು ನಗರಾಭಿವೃದ್ಧಿ ಖಾತೆ ಬೇಕು ಎಂಬುದಾಗಿ ರಾಮಲಿಂಗಾ ರೆಡ್ಡಿ ಸಹ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ, ಅಸಲಿ ವಿಷಯವೆಂದರೆ ಕೃಷ್ಣಭೈರೇಗೌಡರು ಸಹ ಈ ಖಾತೆಯ ಬಗ್ಗೆ ಪೂರ್ಣ ಪ್ರಮಾಣದ ಸಮಾಧಾನ ಹೊಂದಿಲ್ಲ ಎಂಬುದು ಇದೀಗ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಜೋರಾಯ್ತು ಸಚಿವ ಸ್ಥಾನಕ್ಕಾಗಿ ಸರ್ಕಸ್: 20 ಸ್ಥಾನಗಳಿಗಾಗಿ 60ಕ್ಕೂ ಹೆಚ್ಚು ಶಾಸಕರಿಂದ ಮಹಾ ಲಾಬಿ

ಹೈಕಮಾಂಡ್ ಈ ಖಾತೆ ಖ್ಯಾತೆಯನ್ನು ಹೇಗೆ ಬಗೆಹರಿಸುತ್ತದೆ ಮತ್ತು ಕೃಷ್ಣಭೈರೇಗೌಡರ ಬೇಡಿಕೆಯನ್ನು ಈಡೇರಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯಕ್ಕೆ, ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿವಾದ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ