ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ: ಆಲಿಕಲ್ಲು, ಬಿರುಗಾಳಿ ಸಹಿತ ಗುಡುಗು-ಮಿಂಚು ಬರುವ ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ತೀವ್ರ ಪೂರ್ವಮುಂಗಾರು ಮಳೆ ನಿರೀಕ್ಷೆಯಿದೆ. 40-50 ಕಿ.ಮೀ ವೇಗದ ಗಾಳಿ ಹಾಗೂ ಆಲಿಕಲ್ಲು ಮಳೆಯ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡು, ಮಲೆನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆ ಇರಲಿದೆ. ಸಾರ್ವಜನಿಕರು ಮತ್ತು ರೈತರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ, ಮರಗಳು ಬೀಳುವ ಸಾಧ್ಯತೆಯೂ ಇದೆ.

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ: ಆಲಿಕಲ್ಲು, ಬಿರುಗಾಳಿ ಸಹಿತ ಗುಡುಗು-ಮಿಂಚು ಬರುವ ಸಾಧ್ಯತೆ
ಸಾಂದರ್ಭಿಕ ಚಿತ್ರ

Updated on: Mar 25, 2026 | 5:54 PM

ಬೆಂಗಳೂರು, ಮಾ.25: ಕರ್ನಾಟಕದಾದ್ಯಂತ ಮುಂದಿನ ಐದು ದಿನಗಳ ಕಾಲ ಪೂರ್ವಮುಂಗಾರು ಮಳೆ (Pre-monsoon showers) ತೀವ್ರಗೊಳ್ಳಲಿದ್ದು, ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ತಲುಪುವ ಸಾಧ್ಯತೆಯಿದ್ದು, ಆಲಿಕಲ್ಲು ಮಳೆಯ ಮುನ್ಸೂಚನೆಯೂ ಇದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.

ಮಳೆಯ ಸಮಯದಲ್ಲಿ ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿ.ಮೀ. ಇರಲಿದ್ದು, ಮರಗಳು ಅಥವಾ ವಿದ್ಯುತ್ ಕಂಬಗಳು ಬೀಳುವ ಸಂಭವವಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ವಿಶೇಷವಾಗಿ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದ್ದು, ಬೆಳೆಗಳಿಗೆ ಹಾನಿಯಾಗದಂತೆ ರೈತರು ಮುಂಜಾಗ್ರತೆ ವಹಿಸುವುದು ಉತ್ತಮ.

ಇದನ್ನೂ ಓದಿ: ಲ್ಯಾಂಬೋರ್ಗಿನಿ ಕಾರು ಜಪ್ತಿ ಮಾಡಿದ ಸಾರಿಗೆ ಅಧಿಕಾರಿಗಳಿಗೆ ಹೈಕೋರ್ಟ್ ಶಾಕ್: 1 ವಾರದಲ್ಲಿ ಕಾರು ಹಿಂದಿರುಗಿಸಿ

ಬೆಂಗಳೂರು, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ ಮತ್ತು ಕಲ್ಬುರ್ಗಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ತೆರೆದ ಮೈದಾನ, ಮರಗಳ ಕೆಳಗೆ ಅಥವಾ ಜಲಮೂಲಗಳ ಹತ್ತಿರ ಇರಬೇಡಿ. ಸುಭದ್ರವಾದ ಕಟ್ಟಡಗಳ ಒಳಗೆ ಆಶ್ರಯ ಪಡೆಯಿರಿ ಎಂದು ಹವಾಮಾನ ಇಲಾಖೆ ಹೇಳಿದೆ. ವಾಹನಗಳನ್ನು ಮರಗಳ ಕೆಳಗೆ ನಿಲ್ಲಿಸಬೇಡಿ. ಮನೆಯ ಕಿಟಕಿ ಮತ್ತು ಬಾಗಿಲುಗಳನ್ನು ಭದ್ರಪಡಿಸಿಕೊಳ್ಳಿ. ಕಟಾವು ಮಾಡಿದ ಬೆಳೆಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಸಂಗ್ರಹಿಸಿಡಿ ಎಂದು ಮುನ್ನಚ್ಚರಿಕೆಯನ್ನು ನೀಡಿದ್ದಾರೆ.

ದಿನ ಮಳೆಯ ಸಾಧ್ಯತೆ ಗುಡುಗು, ಮಿಂಚು ಬಿರುಗಾಳಿ ವೇಗ ಆಲಿಕಲ್ಲು ಮಳೆ ಮುನ್ನೆಚ್ಚರಿಕೆ ಕ್ರಮಗಳು
1 ಸಾಧಾರಣ ಹೌದು 30-40 ಕಿ.ಮೀ. ಇಲ್ಲ ತೆರೆದ ಮೈದಾನ, ಮರಗಳ ಕೆಳಗೆ ಇರಬೇಡಿ
2 ಹೆಚ್ಚಿದ ಮಳೆ ಹೌದು 40-50 ಕಿ.ಮೀ. ಕೆಲವು ಕಡೆ ಸುಭದ್ರ ಕಟ್ಟಡಗಳ ಒಳಗೆ ಆಶ್ರಯ ಪಡೆಯಿರಿ
3 ಸಾಧಾರಣ ಹೌದು 30-40 ಕಿ.ಮೀ. ಇಲ್ಲ ವಾಹನಗಳನ್ನು ಮರಗಳ ಕೆಳಗೆ ನಿಲ್ಲಿಸಬೇಡಿ
4 ಕಡಿಮೆಯಾಗುವ ಮಳೆ ಹೌದು 20-30 ಕಿ.ಮೀ. ಇಲ್ಲ ಮಳೆಯ ಸಮಯದಲ್ಲಿ ಜಲಮೂಲಗಳ ಹತ್ತಿರ ಇರಬೇಡಿ
5 ಕಡಿಮೆ ಹೌದು 10-20 ಕಿ.ಮೀ. ಇಲ್ಲ ಅನಿವಾರ್ಯವಿದ್ದರೆ ಮಾತ್ರ ಹೊರಗೆ ಹೋಗಿ

ಇನ್ನು ಇಂದು (ಮಾ.25) ಬೆಂಗಳೂರು ನಗರದಲ್ಲಿ ಸಂಜೆ ಹೊತ್ತಿಗೆ ಕೆಲವೊಂದು ಕಡೆ ಮಳೆಯಾಗುವ ಸಾಧ್ಯತೆಗಳು ಇದೆ. ಗರಿಷ್ಠ 33°C ಮತ್ತು ಕನಿಷ್ಠ 20°C ದಾಖಲಾಗುವ ಸಾಧ್ಯತೆಯಿದೆ. ಗಂಟೆಗೆ 10 ಕಿ.ಮೀ ವೇಗದಲ್ಲಿ ಪೂರ್ವ ದಿಕ್ಕಿನಿಂದ ಗಾಳಿ ಬೀಸಲಿದೆ. ರಾಜ್ಯದ ಇತರ ಭಾಗಗಳಲ್ಲಿ, ವಿಶೇಷವಾಗಿ ಉತ್ತರ ಕರ್ನಾಟಕ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ 40-50 ಕಿ.ಮೀ ವೇಗದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಹೇಳಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us