AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಅಂತಿಮ: ಸಿಎಂ, ಡಿಸಿಎಂ ಬೆಂಗಳೂರಿಗೆ ಬರುತ್ತಿದ್ದಂತೆಯೇ ಪಟ್ಟಿ ಬಿಡುಗಡೆ

ಅಂತೂ ಇಂತೂ ಖಾಲಿ ಇರುವ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆಗೆ ಕಾಂಗ್ರೆಸ್​ ಹೈಕಮಾಂಡ್​​​ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ದೆಹಲಿಯಲ್ಲಿ ಬೀಡು ಬಿಟ್ಟಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ಜೊತೆ ಕೂತು ಪಟ್ಟಿ ಫೈನಲ್ ಮಾಡಿದ್ದಾರೆ. ಅವರು ರಾಜ್ಯಕ್ಕೆ ವಾಪಸಾದ ಬೆನ್ನಲ್ಲೇ ಪಟ್ಟಿ ಪ್ರಕಟವಾಗಲಿದೆ.

20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಅಂತಿಮ: ಸಿಎಂ, ಡಿಸಿಎಂ ಬೆಂಗಳೂರಿಗೆ ಬರುತ್ತಿದ್ದಂತೆಯೇ ಪಟ್ಟಿ ಬಿಡುಗಡೆ
ರಣದೀಪ್ ಸುರ್ಜೇವಾಲ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್
ಮಹೇಶ್ ಇ, ಭೂಮನಹಳ್ಳಿ
| Updated By: Ganapathi Sharma|

Updated on: Jul 25, 2025 | 6:52 AM

Share

ನವದೆಹಲಿ, ಜುಲೈ 25: ಸಿಎಂ ಬದಲಾವಣೆ ಚರ್ಚೆ ನಡುವೆಯೇ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DK Shivakumr) ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ. ಒಂದೇ ವಿಮಾನದಲ್ಲಿ ದೆಹಲಿಗೆ ಆಗಮಿಸಿದ್ದ ಸಿಎಂ ಹಾಗೂ ಡಿಸಿಎಂ ಈಗ ಒಟ್ಟಿಗೆ ಕೂತು 20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ.

ಗುರುವಾರ ಸಂಜೆ ಕರ್ನಾಟಕ ಭವನ ಭವನದಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್, ಒಂದೇ ಕಾರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಮನೆಗೆ ಆಗಮಿಸಿದರು. ಒಂದೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ 20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಕ್ಕೆ ಒಪ್ಪಿಗೆ ಸಿಕ್ಕಿದೆ. ಉಪಾಧ್ಯಕ್ಷರು, ಸದಸ್ಯರ ನೇಮಕ ಪ್ರಕ್ರಿಯೆ ಮುಂದಿನ ಹಂತದಲ್ಲಿ ಸಭೆ ಮಾಡಿ ತೀರ್ಮಾನ ಮಾಡಲು ನಾಯಕರು ನಿರ್ಧರಿಸಿದ್ದಾರೆ. ಸಿಎಂ, ಡಿಸಿಎಂ ಬೆಂಗಳೂರಿಗೆ ವಾಪಸ್ ಆಗ್ತಿದ್ದಂತೆ 20 ಅಧ್ಯಕ್ಷರ ಪಟ್ಟಿ ಘೋಷಣೆ ಆಗುವ ಸಾಧ್ಯತೆ ಇದೆ. ಇನ್ನುಳಿದಂತೆ 4 ಎಂಎಲ್​ಸಿ ಸ್ಥಾನ ಬಗ್ಗೆ ಅಂತಿಮ ತೀರ್ಮಾನವನ್ನು ಹೈಕಮಾಂಡ್​ಗೆ ಬಿಡಲಾಗಿದೆ‌.

ದೆಹಲಿಯಿಂದಲೇ ಒಗ್ಗಟ್ಟಿನ ಮಂತ್ರ ಸಾರಿದ ಕಾಂಗ್ರೆಸ್ ನಾಯಕರು

ಸುರ್ಜೇವಾಲ ಮನೆಯಲ್ಲಿ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ತಮ್ಮ ಭದ್ರತಾ ಸಿಬ್ಬಂದಿಯ ವಾಹನವನ್ನು ವಾಪಸ್ ಕಳಿಸಿ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸುರ್ಜೆವಾಲ ಜೊತೆ ಒಂದೇ ಕಾರಿನಲ್ಲಿ ಊಟಕ್ಕೆಂದು ಹೊರಗೆ ಹೋಗಿದ್ದು ಕುತೂಹಲ ಕೆರಳಿಸಿದೆ. ಅಲ್ಲಿಗೆ ಕೈ ನಾಯಕರು ದೆಹಲಿಯಿಂದಲೇ ಒಗ್ಗಟ್ಟಿನ ಮಂತ್ರ ಸಾರಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲೂ ಚುನಾವಣಾ ಅಕ್ರಮ: ರಾಹುಲ್ ಬೆಂಬಲಿಸಿ ಸಿದ್ದರಾಮಯ್ಯ ಖಡಕ್ ಮಾತು

ಈಮಧ್ಯೆ ಇಂದು ದೆಹಲಿಯ ಥಾಲ್ ಕಠೋರಾ ಇಂಡೋರ್ ಸ್ಟೇಡಿಯಂನಲ್ಲಿ ಎಐಸಿಸಿ ಓಬಿಸಿ ಘಟಕದ ವತಿಯಿಂದ ಭಾಗಿದಾರಿ ‘ನ್ಯಾಯ್’ ಸಮ್ಮೇಳನ ನಡೆಯಲಿದೆ. ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಮುಖ್ಯ ಭಾಷಣ ಮಾಡಲಿದ್ದಾರೆ. ಇಡೀ ದೇಶದಲ್ಲಿ ಒಬಿಸಿ ನಾಯಕ ಹಾಗೂ ಏಕೈಕ ಒಬಿಸಿ ಸಿಎಂ ಸಿದ್ದರಾಮಯ್ಯ ಆಗಿದ್ದು ಎಐಸಿಸಿ ಇದನ್ನು ಸದ್ಬಳಕೆ ಮಾಡಿಕೊಳ್ಳಲು ಮುಂದಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ