School Open: 6ರಿಂದ 8ನೇ ತರಗತಿಯವರೆಗೆ ಸೆಪ್ಟೆಂಬರ್ 6ರಿಂದ ಶಾಲೆ ಆರಂಭ: ಸಚಿವ ಆರ್ ಅಶೋಕ್ ಘೋಷಣೆ
ಬೆಂಗಳೂರು: 1ರಿಂದ 8ನೇ ತರಗತಿಗಳನ್ನು ಆರಂಭಿಸುವ ಕುರಿತು ಮಹತ್ವದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆ ತೆಗೆದುಕೊಂಡಿದೆ. 6- 8 ನೇ ತರಗತಿವರೆಗೆ ಶಾಲೆ ಆರಂಭಕ್ಕೆ ಸೆಪ್ಟೆಂಬರ್ 6ರಿಂದ ನಿಯಮಾನುಸಾರ ಅವಕಾಶ ಕಲ್ಪಿಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ. ಕೊವಿಡ್ ಪಾಸಿಟಿವಿಟಿ ದರ ಶೇಕಡಾಗಿಂತ 2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರವಷ್ಟೇ ಶಾಲೆಗಳನ್ನು ಆರಂಭಿಸಲು ನಿರ್ಣಯಿಸಲಾಗಿದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದರು.ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ತಾಲೂಕುಗಳಲ್ಲಿ ಶಾಲೆ ಆರಂಭಿಸಲಾಗುವುದು. ವಾರದಲ್ಲಿ 5 ದಿನ (ಸೋಮವಾರದಿಂದ ಶುಕ್ರವಾರದವರೆಗೆ) […]
ಬೆಂಗಳೂರು: 1ರಿಂದ 8ನೇ ತರಗತಿಗಳನ್ನು ಆರಂಭಿಸುವ ಕುರಿತು ಮಹತ್ವದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆ ತೆಗೆದುಕೊಂಡಿದೆ. 6- 8 ನೇ ತರಗತಿವರೆಗೆ ಶಾಲೆ ಆರಂಭಕ್ಕೆ ಸೆಪ್ಟೆಂಬರ್ 6ರಿಂದ ನಿಯಮಾನುಸಾರ ಅವಕಾಶ ಕಲ್ಪಿಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ. ಕೊವಿಡ್ ಪಾಸಿಟಿವಿಟಿ ದರ ಶೇಕಡಾಗಿಂತ 2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರವಷ್ಟೇ ಶಾಲೆಗಳನ್ನು ಆರಂಭಿಸಲು ನಿರ್ಣಯಿಸಲಾಗಿದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದರು.ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ತಾಲೂಕುಗಳಲ್ಲಿ ಶಾಲೆ ಆರಂಭಿಸಲಾಗುವುದು. ವಾರದಲ್ಲಿ 5 ದಿನ (ಸೋಮವಾರದಿಂದ ಶುಕ್ರವಾರದವರೆಗೆ) ಶಾಲೆ ತೆರೆಯುವುದಕ್ಕೆ ಸರ್ಕಾರ ಅನುಮತಿ ನೀಡಿದೆ. ಉಳಿದ 2 ದಿನ (ಶನಿವಾರ, ಭಾನುವಾರ) ಶಾಲೆ ಸ್ವಚ್ಛಗೊಳಿಸಲು ಅವಕಾಶವಿರುತ್ತದೆ. ದಿನ ಬಿಟ್ಟು ದಿನ ಮಕ್ಕಳು ಶಾಲೆಗೆ ಹಾಜರಾಗಲು ಅನುಮತಿ ನೀಡಲಾಗಿದೆ. ಅಂದರೆ, ದಿನ ಬಿಟ್ಟು ದಿನ ಮಕ್ಕಳು ಶಾಲೆಗೆ ಹಾಜರಾಗಬಹುದು ಎಂದು ಸರ್ಕಾರ ನಿರ್ಧರಿಸಿದೆ.
ಆದರೆ 1ರಿಂದ 5ನೆ ತರಗತಿಯವರೆಗೆ ಶಾಲೆ ಆರಂಭಿಸುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯ ಅಂತಹ ಆಲೋಚನೆಗಳಿಲ್ಲ ಎಂದು ಸಹ ಅವರು ಸ್ಪಷ್ಟಪಡಿಸಿದರು. 2913 ಗ್ರಾಮ ಪಂಚಾಯತ್ ಗಳಲ್ಲಿ ಕೊವಿಡ್ ಪಾಸಿಟಿವಿಟಿ ಶೂನ್ಯವಿದೆ. 6472 ಮಕ್ಕಳ ಕೊವಿಡ್ ಸ್ಯಾಂಪಲ್ಗಳಲ್ಲಿ 12 ಮಕ್ಕಳಲ್ಲಿ ಮಾತ್ರ ಕೊವಿಡ್ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ತಜ್ಞ ವೈದ್ಯರಾದ ಡಾ.ಎಂ.ಕೆ.ಸುದರ್ಶನ್, ಡಾ.ದೇವಿ ಶೆಟ್ಟಿ, ಡಾ.ಸಿ.ಎನ್.ಮಂಜುನಾಥ್, ವೈರಾಲಜಿಸ್ಟ್ ಡಾ.ರವಿ, ಸಚಿವರಾದ ಡಾ.ಕೆ ಸುಧಾಕರ್, ಬಿ.ಸಿ ನಾಗೇಶ್ ಆರ್.ಅಶೋಕ್, ಡಿಜಿಪಿ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಹಾಗೂ ತಜ್ಞರು ಭಾಗಿಯಾಗಿದ್ದರು.
ಇದನ್ನೂ ಓದಿ: ಕೇರಳದಿಂದ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಒಂದು ವಾರಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್
ಗಣೇಶೋತ್ಸವ ಆಚರಣೆಗೆ ಕಳೆದ ಬಾರಿಗಿಂತ ಹೆಚ್ಚು ಅವಕಾಶ; ಸೆಪ್ಟೆಂಬರ್ 5ಕ್ಕೆ ಅಂತಿಮ ತೀರ್ಮಾನ: ಆರ್ ಅಶೋಕ್
(Karnataka Primary Schools Reopen Minister R Ashok anounces 6th to 8th classes starts from september 6)
Published On - 6:00 pm, Mon, 30 August 21