ಕರ್ನಾಟಕ ಕಾರಾಗೃಹ ಇಲಾಖೆ ನೇಮಕಾತಿ: ಜೈಲರ್, ವಾರ್ಡರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; 1.12 ಲಕ್ಷ ರೂ.ವರೆಗೆ ವೇತನ!

ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯು ಜೈಲರ್, ವಾರ್ಡರ್ ಸೇರಿದಂತೆ 293 ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. 10ನೇ ತರಗತಿ ಪಾಸಾದವರಿಂದ ಪದವೀಧರರವರೆಗೆ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 19ರಿಂದ ಅಕ್ಟೋಬರ್ 15ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆಕರ್ಷಕ ವೇತನ ಶ್ರೇಣಿ ಲಭ್ಯವಿದೆ.

ಕರ್ನಾಟಕ ಕಾರಾಗೃಹ ಇಲಾಖೆ ನೇಮಕಾತಿ: ಜೈಲರ್, ವಾರ್ಡರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; 1.12 ಲಕ್ಷ ರೂ.ವರೆಗೆ ವೇತನ!
ಕರ್ನಾಟಕ ಕಾರಾಗೃಹ ಇಲಾಖೆ ನೇಮಕಾತಿ

Updated on: Sep 24, 2026 | 1:27 PM

ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ದೊರೆತಿದೆ. ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯು 2026ನೇ ಸಾಲಿನ ವಿವಿಧ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಜೈಲರ್, ವಾರ್ಡರ್ (ಕಾವಲುಗಾರ), ದ್ವಿತೀಯ ದರ್ಜೆ ಬೋಧಕರು ಹಾಗೂ ವಾರ್ಡರ್ ಕಮ್ ನರ್ಸಿಂಗ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಹಿಡಿದು ಪದವೀಧರರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ।

ಹುದ್ದೆಗಳ ವಿವರ ಮತ್ತು ಹಂಚಿಕೆ:

ಇಲಾಖೆಯಲ್ಲಿ ಒಟ್ಟು 869 ಹುದ್ದೆಗಳು ಖಾಲಿ ಇದ್ದು, ಪ್ರಸ್ತುತ 293 ಹುದ್ದೆಗಳ ಭರ್ತಿಗೆ ಅಧಿಸೂಚನೆ ನೀಡಲಾಗಿದೆ. ಅವುಗಳಲ್ಲಿ ಜೈಲರ್ (Jailor) 05 ಹುದ್ದೆಗಳು, ವಾರ್ಡರ್ – ವೀಕ್ಷಕರು (Warder) 275 ಹುದ್ದೆಗಳು, ದ್ವಿತೀಯ ದರ್ಜೆ ಬೋಧಕರು (Instructor Grade-II) 08 ಹುದ್ದೆಗಳು ಹಾಗೂ ವಾರ್ಡರ್ ಕಮ್ ನರ್ಸಿಂಗ್ (Warder cum Nursing) 05 ಹುದ್ದೆಗಳು ಸೇರಿವೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಹುದ್ದೆಗೆ ಅನುಗುಣವಾಗಿ 10ನೇ ತರಗತಿ (SSLC) ಅಥವಾ ಪದವಿ (Degree) ಪೂರ್ಣಗೊಳಿಸಿರಬೇಕು। ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ 33 ವರ್ಷ ಮೀರಿರಬಾರದು। ಸರ್ಕಾರದ ನಿಯಮಾವಳಿಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ವಿನಾಯಿತಿ ಲಭ್ಯವಿರುತ್ತದೆ.

ಆಕರ್ಷಕ ವೇತನ ಶ್ರೇಣಿ:

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ ಮಾಸಿಕ 34,100 ರಿಂದ 1,12,900 ರೂ. ರವರೆಗೆ ವೇತನ ಶ್ರೇಣಿ ನಿಗದಿಯಾಗಿದೆ. ಜೈಲರ್ ಹುದ್ದೆಗೆ 61,300 ರಿಂದ 1,12,900 ರೂ. ವಾರ್ಡರ್ ಮತ್ತು ದ್ವಿತೀಯ ದರ್ಜೆ ಬೋಧಕ ಹುದ್ದೆಗಳಿಗೆ 37,500 ರಿಂದ 76,100 ಹಾಗೂ ವಾರ್ಡರ್ ಕಮ್ ನರ್ಸಿಂಗ್ ಹುದ್ದೆಗೆ 34,100 ರಿಂದ 67,600 ವರೆಗೆ ಮಾಸಿಕ ವೇತನ ಸಿಗಲಿದೆ.

ಅರ್ಜಿ ಶುಲ್ಕದ ವಿವರ:

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 750ರೂ. ಹಾಗೂ ಪ್ರವರ್ಗ 2a, 2b, 3a, 3b ಅಭ್ಯರ್ಥಿಗಳಿಗೆ 75ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ಇರಲಿದೆ.

ಇದನ್ನೂ ಓದಿ: ವಕೀಲಿ ವೃತ್ತಿಗೆ ಗುಡ್‌ಬೈ ಹೇಳಿ ‘ಡಾಗ್ ವಾಕರ್’ ಆದ ಮಹಿಳೆ: ಈಗ ಕಮ್ಮಿ ಕೆಲಸ, ತಿಂಗಳಿಗೆ ಲಕ್ಷ ಲಕ್ಷ ಸಂಪಾದನೆ!

ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಹಾಗೂ ದಾಖಲೆಗಳನ್ನು ಅಪ್‌ಲೋಡ್ ಮಾಡುವ ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು:

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು 19 ಸೆಪ್ಟೆಂಬರ್ 2026 ರಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು 15 ಅಕ್ಟೋಬರ್ ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೂ ಕಾಯದೆ ಶೀಘ್ರವಾಗಿ ಆನ್‌ಲೈನ್(cetonline.karnataka.gov.in) ಮೂಲಕ ಅರ್ಜಿ ಸಲ್ಲಿಸುವುದು ಸೂಕ್ತ ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ವೀಕ್ಷಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us