ರಾಜ್ಯದಲ್ಲಿ ಹೊಸ ಖಾಸಗಿ ಪಿಯು ಕಾಲೇಜುಗಳಿಗೆ 3 ವರ್ಷ ಅನುಮತಿ ಇಲ್ಲ: ಸರ್ಕಾರದಿಂದ ಕರಡು ಅಧಿಸೂಚನೆ

ರಾಜ್ಯದಲ್ಲಿ 2027-28ರಿಂದ 2029-30ನೇ ಶೈಕ್ಷಣಿಕ ವರ್ಷದವರೆಗೆ ಹೊಸ ಖಾಸಗಿ ಪಿಯು ಕಾಲೇಜುಗಳನ್ನು ಆರಂಭಿಸಲು ಅನುಮತಿ ನೀಡದಿರಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಕರಡು ಅಧಿಸೂಚನೆ ಪ್ರಕಟಿಸಿದ್ದು, 15 ದಿನಗಳಲ್ಲಿ ಸಲಹೆ ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ.

ರಾಜ್ಯದಲ್ಲಿ ಹೊಸ ಖಾಸಗಿ ಪಿಯು ಕಾಲೇಜುಗಳಿಗೆ 3 ವರ್ಷ ಅನುಮತಿ ಇಲ್ಲ: ಸರ್ಕಾರದಿಂದ ಕರಡು ಅಧಿಸೂಚನೆ
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರ ಕಚೇರಿ (ಸಾಂದರ್ಭಿಕ ಚಿತ್ರ)

Updated on: Oct 30, 2026 | 12:13 PM

ಮುಖ್ಯಾಂಶಗಳು

  • ಹೊಸ ಖಾಸಗಿ ಪಿಯು ಕಾಲೇಜುಗಳಿಗೆ ಮೂರು ವರ್ಷ ಬ್ರೇಕ್
  • 2027-28ರಿಂದ 2029-30ರವರೆಗೆ ಅನುಮತಿ ನಿರ್ಬಂಧ
  • ಕರಡು ಅಧಿಸೂಚನೆಗೆ ಸಲಹೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು, ಅಕ್ಟೋಬರ್ 30: ರಾಜ್ಯದಲ್ಲಿ ಹೊಸ ಖಾಸಗಿ ಪದವಿಪೂರ್ವ (ಪಿಯು) ಕಾಲೇಜುಗಳನ್ನು ಆರಂಭಿಸಲು ಮುಂದಿನ ಮೂರು ಶೈಕ್ಷಣಿಕ ವರ್ಷಗಳವರೆಗೆ ಅನುಮತಿ ನೀಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2027-28ನೇ ಶೈಕ್ಷಣಿಕ ವರ್ಷದಿಂದ 2029-30ನೇ ಶೈಕ್ಷಣಿಕ ವರ್ಷದವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರಡು ಅಧಿಸೂಚನೆ ಪ್ರಕಟಿಸಿದೆ. ಅಧಿಸೂಚನೆ ಕುರಿತು ಸಾರ್ವಜನಿಕರು ಹಾಗೂ ಸಂಬಂಧಪಟ್ಟವರು ಸಲಹೆ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ.

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) (ಶೈಕ್ಷಣಿಕ, ನೋಂದಣಿ, ಆಡಳಿತ ಮತ್ತು ಅನುದಾನ ಸೇರಿದಂತೆ) ನಿಯಮಗಳು-2024ಕ್ಕೆ ತಿದ್ದುಪಡಿ ತರುವ ಮೂಲಕ ಈ ಕರಡು ಅಧಿಸೂಚನೆ ಹೊರಡಿಸಲಾಗಿದೆ.

ಖಾಲಿ ಉಳಿಯುತ್ತಿರುವ ಪಿಯು ಸೀಟುಗಳು

ಪ್ರತಿ ವರ್ಷ ರಾಜ್ಯದ ಹಲವು ಪಿಯು ಕಾಲೇಜುಗಳಲ್ಲಿ ಹೆಚ್ಚಿನ ಸಂಖ್ಯೆಯ ಸೀಟುಗಳು ಖಾಲಿ ಉಳಿಯುತ್ತಿವೆ. ಈ ಹಿನ್ನೆಲೆಯಲ್ಲಿ ಹೊಸ ಖಾಸಗಿ ಪಿಯು ಕಾಲೇಜುಗಳ ಆರಂಭಕ್ಕೆ ಮಿತಿ ವಿಧಿಸುವಂತೆ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘ ಸರ್ಕಾರಕ್ಕೆ ಮನವಿ ಮಾಡಿತ್ತು. ಸಂಘದ ಪ್ರಮುಖ ಬೇಡಿಕೆಗಳಲ್ಲಿ ಇದೂ ಒಂದಾಗಿತ್ತು.

ಇದನ್ನೂ ಓದಿ: ಇನ್ಮುಂದೆ 15 ವರ್ಷಕ್ಕಿಂತ ಸಣ್ಣ ಮಕ್ಕಳಿಗೆ ನೋ ಕೋಚಿಂಗ್ ಕ್ಲಾಸ್! ರಾಜ್ಯದಲ್ಲಿ ಖಾಸಗಿ ಕೋಚಿಂಗ್ ಸೆಂಟರ್​ಗಳಿಗೆ ಬಂತು ಕಠಿಣ ನಿಯಮಾವಳಿ

ಪ್ರಸ್ತುತ ರಾಜ್ಯದಲ್ಲಿ 6,000ಕ್ಕೂ ಹೆಚ್ಚು ಪಿಯು ಕಾಲೇಜುಗಳಿವೆ. ಈಗಾಗಲೇ ಇರುವ ಕಾಲೇಜುಗಳಲ್ಲೇ ಹೆಚ್ಚಿನ ಸಂಖ್ಯೆಯ ಸೀಟುಗಳು ಖಾಲಿ ಉಳಿಯುತ್ತಿರುವ ಹಿನ್ನೆಲೆಯಲ್ಲಿ ಹೊಸ ಕಾಲೇಜುಗಳಿಗೆ ಅನುಮತಿ ನೀಡುವುದನ್ನು ತಾತ್ಕಾಲಿಕವಾಗಿ ತಡೆಹಿಡಿಯಲು ಸರ್ಕಾರ ಮುಂದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us