ಶಿಕ್ಷಣ ಸಚಿವ ಹುದ್ದೆಯಿಂದ ಸುರೇಶ್ ಕುಮಾರ್ ಕೈಬಿಡಲು ಖಾಸಗಿ ಶಿಕ್ಷಣ ಸಂಸ್ಥೆಗಳ ಆಗ್ರಹ

ಕಳೆದ ವರ್ಷ ಸುಮಾರು 40 ಲಕ್ಷ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನೇ ನೀಡಿಲ್ಲ ಎಂಬ ಸತ್ಯ ಶಿಕ್ಷಣ ಇಲಾಖೆಯ ಸರ್ವೇಯಲ್ಲಿಯೇ ಬಯಲಾಗಿದೆ. ಶಿಕ್ಷಕರಿಗೆ ಕೊರೊನಾ ವಾರಿಯರ್ಸ್​ ಅಂತ ಘೋಷಣೆ ಮಾಡಲಾಗಿದೆ. ಆದರೆ ಇದುವರೆಗೂ ಸಹ ಯಾವುದೇ ಪ್ಯಾಕೇಜ್​ ಮಾತ್ರ ಕೈ ಸೇರಿಲ್ಲ. ಖಾಸಗಿ ಶಾಲೆಗಳಿಗೆ ನೀಡಬೇಕಾದ ಆರ್​ಟಿಇ ಶುಲ್ಕ ಮರುಪಾವತಿಯನ್ನ ವಿಳಂಬ ಮಾಡಲಾಗುತ್ತಿದೆ: ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿ

ಶಿಕ್ಷಣ ಸಚಿವ ಹುದ್ದೆಯಿಂದ ಸುರೇಶ್ ಕುಮಾರ್ ಕೈಬಿಡಲು ಖಾಸಗಿ ಶಿಕ್ಷಣ ಸಂಸ್ಥೆಗಳ ಆಗ್ರಹ
ಶಿಕ್ಷಣ ಸಚಿವ ಸುರೇಶ್ ಕುಮಾರ್
Follow us
TV9 Web
| Updated By: guruganesh bhat

Updated on:Jul 02, 2021 | 4:28 PM

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ ಪತ್ರ ಬರೆದಿದೆ. ಸಚಿವ ಸುರೇಶ್ ಕುಮಾರ್ ವಿರುದ್ಧ ಅತೃಪ್ತಿ ಸೂಚಿಸಿರುವ ಒಕ್ಕೂಟ ಈ ಪತ್ರ ಬರೆದಿದೆ.

ಸಚಿವ ಸುರೇಶ್​ ಕುಮಾರ್​​, ಅಧಿಕಾರ ಸ್ವೀಕರಿಸಿದ ಬಳಿಕ ಖಾಸಗಿ ಶಾಲೆಗಳ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ. ಸರ್ಕಾರಿ, ಖಾಸಗಿ ಶಾಲಾ ಮಕ್ಕಳೆನ್ನದೆ ಎಲ್ಲಾ ಮಕ್ಕಳಿಗೂ ಹಸಿವು, ಅಪೌಷ್ಠಿಕತೆ ಇದ್ದೇ ಇರುತ್ತದೆ. ಆದರೆ ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಆಹಾರ ವಿತರಿಸುವುದು ಹಾಗೂ ಸರ್ಕಾರಿ ಶಾಲೆಗಳಿಗೆ ಸೇರಿದರೆ ಮಾತ್ರ ಎನ್ನುವ ನಡೆ ಅಮಾನವೀಯ. ಮಕ್ಕಳ ಹಸಿವನ್ನು ದೌರ್ಬಲ್ಯವಾಗಿ ದಾಖಲಾತಿಗೆ ಬಳಸಿಕೊಳ್ಳುವುದು ಕೆಳದರ್ಜೆಯ ಮನಸ್ಥಿತಿ ಎಂದು ಒಕ್ಕೂಟ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಆರೋಪಿಸಿ ಪತ್ರ ಬರೆದಿದೆ

ಖಾಸಗಿ ಶಾಲಾ ಶುಲ್ಕ ವಿವಾದವನ್ನು ಉದ್ದೇಶಪೂರ್ವಕವಾಗಿ ಹೆಚ್ಚಿಸಿ ಬಹುತೇಕ ಖಾಸಗಿ ಶಾಲೆಗಳ ಮೇಲೆ ಸಾರ್ವಜನಿಕ ಆಕ್ರೋಶ ಹೆಚ್ಚುವಂತೆ ಮಾಡಿದ್ದಾರೆ. ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಬೇಕೆಂಬ ಮಹದಾಸೆಯಿಂದ ಶಾಲೆಗಳನ್ನ ಪ್ರಾರಂಭಿಸದೆ ಕೇವಲ ಹೆಸರಿಗೆ ಮಾತ್ರ ದಾಖಲಾತಿ ಪ್ರಾರಂಭಿಸಿ ಸರ್ಕಾರಿ ಶಾಲೆಗಳಲ್ಲಿ ಸೇರುವ ಹಾಗೂ ಈಗಾಗಲೇ ಇರುವ ಸುಮಾರು 40 ಲಕ್ಷ ಮಕ್ಕಳಿಗೆ ಶಿಕ್ಷಣ ನೀಡದೆ ವಂಚನೆ ಮಾಡಲಾಗುತ್ತಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಆನ್​ಲೈನ್​ ಮೂಲಕ ಶಿಕ್ಷಣ ನೀಡುತ್ತೇವೆ ಎಂದು ಸಚಿವರು ಸುಳ್ಳು ಹೇಳುತ್ತಿದ್ದಾರೆ. ಕಳೆದ ವರ್ಷ ಸುಮಾರು 40 ಲಕ್ಷ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನೇ ನೀಡಿಲ್ಲ ಎಂಬ ಸತ್ಯ ಶಿಕ್ಷಣ ಇಲಾಖೆಯ ಸರ್ವೇಯಲ್ಲಿಯೇ ಬಯಲಾಗಿದೆ. ಶಿಕ್ಷಕರಿಗೆ ಕೊರೊನಾ ವಾರಿಯರ್ಸ್​ ಅಂತ ಘೋಷಣೆ ಮಾಡಲಾಗಿದೆ. ಆದರೆ ಇದುವರೆಗೂ ಸಹ ಯಾವುದೇ ಪ್ಯಾಕೇಜ್​ ಮಾತ್ರ ಕೈ ಸೇರಿಲ್ಲ. ಖಾಸಗಿ ಶಾಲೆಗಳಿಗೆ ನೀಡಬೇಕಾದ ಆರ್​ಟಿಇ ಶುಲ್ಕ ಮರುಪಾವತಿಯನ್ನ ವಿಳಂಬ ಮಾಡಲಾಗುತ್ತಿದೆ. ಇಂತಹ ಮನಸ್ಥಿತಿ ಉಳ್ಳ ಶಿಕ್ಷಣ ಸಚಿವರನ್ನು ಕೂಡಲೇ ವಜಾಗೊಳಿಸಿ ಎಂದು ಆರೋಪಿಸಿ ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ ಪತ್ರ ಬರೆದಿದೆ.

ಮಂಡ್ಯದ ಕಾರ್ಮೆಲಾ ಕಾನ್ವೆಂಟ್‌ನಲ್ಲಿ ಶುಲ್ಕ ವಿಚಾರಕ್ಕೆ ಪೋಷಕರು, ಶಾಲಾ ಆಡಳಿತ ಮಂಡಳಿ ನಡುವೆ ಗಲಾಟೆ ನಡೆದಿದೆ. ಸಂಪೂರ್ಣ ಶುಲ್ಕ ಕಟ್ಟಿದರಷ್ಟೇ ಮಾರ್ಕ್ಸ್​ ಕಾರ್ಡ್, ಅಡ್ಮಿಷನ್ ನೀಡಲು ಶಾಲೆ ಮುಂದಾಗಿದ್ದು, ಕಳೆದ ವರ್ಷ, ಈ ವರ್ಷ ಸಂಪೂರ್ಣ ಶುಲ್ಕ ಪಾವತಿಗೆ ಒತ್ತಡ ಹಾಕಿದೆ. ಕಳೆದ ವರ್ಷಕ್ಕಿಂತ ಈ ವರ್ಷ 4 ಸಾವಿರ ರೂ. ಶುಲ್ಕ ಹೆಚ್ಚಳ ಮಾಡಿದೆ. ಹೀಗಾಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ಕಿಡಿಕಾರಿದ್ದಾರೆ.

ಇದನ್ನೂ ಓದಿ: 

ಕೊವಿಡ್ ಪರಿಹಾರ ಪಡೆಯಲು ಮನೆ ಕೆಲಸದವರಿಂದ ಕಮಿಷನ್:​ ಹೈಕೋರ್ಟ್ ಆಕ್ಷೇಪ

ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಭರದ ಸಿದ್ಧತೆ

(Karnataka private school and college administration wrote letter to CM Yediyurappa to dismiss Education Minister Suresh Kumar)

Published On - 4:18 pm, Fri, 2 July 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ