ಸರ್ಕಾರಕ್ಕೆ ಹೊಸ ಟೆನ್ಷನ್: ಎನ್​​ಇಪಿ ರದ್ದತಿಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

ಸರ್ಕಾರ ಮುಂದಿನ ವರ್ಷದಿಂದ ಎನ್​ಇಪಿ ರದ್ದುಪಡಿಸಲು ನಿರ್ಧರಿಸಿದೆ. ಈ ನಿರ್ಧಾರಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ನಮಗೆ ಎನ್ಇಪಿ ಬೇಕು, ಎಸ್ಇಪಿ ಬೇಡ ಅಂತ ಪಟ್ಟು ಹಿಡಿದಿವೆ. ಎಸ್​ಇಪಿ ಪಠ್ಯಕ್ರಮ ವ್ಯವಸ್ಥೆಯಿಂದ ಶೈಕ್ಷಣಿಕ ಭವಿಷ್ಯಕ್ಕೆ ಸಮಸ್ಯೆಯಾಗುತ್ತೆ ಎಂದಿವೆ.

ಸರ್ಕಾರಕ್ಕೆ ಹೊಸ ಟೆನ್ಷನ್: ಎನ್​​ಇಪಿ ರದ್ದತಿಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ
ಎನ್​ಇಪಿ ರದ್ದತಿಗೆ ವಿರೋಧ
Edited By: ವಿವೇಕ ಬಿರಾದಾರ

Updated on: Aug 25, 2023 | 9:49 AM

ಬೆಂಗಳೂರು: ಹಿಂದಿನ ಬಿಜೆಪಿ (BJP) ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿ (NEP) ಯನ್ನು ರದ್ದು ಮಾಡಿ ಎಸ್​ಇಪಿಯನ್ನು ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddramaiah) ಅವರ ನೇತೃತ್ವದ ಕಾಂಗ್ರೆಸ್​ ಸರ್ಕಾರ (Congress Government) ಮುಂದಾಗಿದೆ. ಈ ಸಂಬಂಧ ರಾಜ್ಯದ ಎಲ್ಲ ವಿಶ್ವವಿದ್ಯಾಲಯದ ಕುಲಪತಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಹೇಳಿದ್ದರು. ಆದರೆ ರಾಜ್ಯ ಸರ್ಕಾರಕ್ಕೆ ಕೌಂಟರ್​ ಕೊಡಲು ಖಾಸಗಿ ಶಿಕ್ಷಣ ಸಂಸ್ಥೆಗಳು ನಿರ್ಧರಿಸಿವೆ.

ಸರ್ಕಾರ ಮುಂದಿನ ವರ್ಷದಿಂದ ಎನ್​ಇಪಿ ರದ್ದುಪಡಿಸಲು ನಿರ್ಧರಿಸಿದೆ. ಈ ನಿರ್ಧಾರಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ನಮಗೆ ಎನ್ಇಪಿ ಬೇಕು, ಎಸ್ಇಪಿ ಬೇಡ ಅಂತ ಪಟ್ಟು ಹಿಡಿದಿವೆ. ಅಂತಾರಾಷ್ಟ್ರೀಯ ಮಕ್ಕಳ ಜೊತೆಗೆ ಸ್ಪರ್ಧಿಸಲು ಎನ್​ಇಪಿ ಅಗತ್ಯವಿದೆ. ಎಸ್​ಇಪಿ ಪಠ್ಯಕ್ರಮ ವ್ಯವಸ್ಥೆಯಿಂದ ಶೈಕ್ಷಣಿಕ ಭವಿಷ್ಯಕ್ಕೆ ಸಮಸ್ಯೆಯಾಗುತ್ತೆ. ಎನ್ಇಪಿ ಲೋಪ ದೋಷ ಸರಿಪಡಿಸಿಕೊಂಡು ಕೊಂಚ ಬದಲಾವಣೆ ಮಾಡಿಕೊಂಡು, ಎನ್ಇಪಿ ಮುಂದುವರೆಸಬೇಕು ಅಂತ ಖಾಸಗಿ ಶಾಲೆಗಳು ಒತ್ತಾಯ ಹೇರುತ್ತಿವೆ. ಇದರಿಂದ ಸರ್ಕಾರಕ್ಕೆ ಹೊಸ ಟೆನ್ಷನ್ ಶುರುವಾಗಿದೆ.

ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಎನ್‌ಇಪಿಯನ್ನು ರದ್ದುಪಡಿಸುವುದಾಗಿ ಭರವಸೆ ನೀಡಿತ್ತು. ಬದಲಿಗೆ ರಾಜ್ಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವುದಾಗಿ ಹೇಳಿತ್ತು. ಅದರಂತೆ ಇದೀಗ ಎನ್​ಇಪಿ ರದ್ದು ಮಾಡಲು ಸರ್ಕಾರ ಯೋಜನೆ ರೂಪಿಸಿದೆ.

2024-25ನೇ ಶೈಕ್ಷಣಿಕ ವರ್ಷದಿಂದ ಕರ್ನಾಟದಲ್ಲಿ ಎನ್​​ಇಪಿ ಇರಲ್ಲ

ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರವು ಪರಿಚಯಿಸಿದ ಎನ್‌ಇಪಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
Loading...
Unable to load recommendations.
Follow Us