ಇಂದು ಖಾಸಗಿ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ.. ಶೇ.30ರಷ್ಟು ಶಾಲಾ ಶುಲ್ಕ ಕಡಿತ ವಿರೋಧಿಸಿ ಹೋರಾಟ

|

Updated on: Feb 23, 2021 | 8:30 AM

ಖಾಸಗಿ ಶಾಲೆಗಳ ಶುಲ್ಕ ಕಡಿತದ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಸರ್ಕಾರದ ಶುಲ್ಕ ಕಡಿತದ ಈ ಆದೇಶ ಖಂಡಿಸಿ, ಇಂದು ಖಾಸಗಿ ಶಾಲೆಗಳ ಒಕ್ಕೂಟ ಬೃಹತ್ ಪ್ರತಿಭಟನೆ ನಡೆಸಲಿದೆ. ಹಾಗಿದ್ರೆ ಇವರ ಪ್ರತಿಭಟನೆಗೆ ಕಾರಣ ಏನು? ಇಂದಿನ ಧರಣಿ ಹೇಗಿರುತ್ತೆ ಅನ್ನೋದ್ರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ಓದಿ.

ಇಂದು ಖಾಸಗಿ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ.. ಶೇ.30ರಷ್ಟು ಶಾಲಾ ಶುಲ್ಕ ಕಡಿತ ವಿರೋಧಿಸಿ ಹೋರಾಟ
ಸಂಗ್ರಹ ಚಿತ್ರ
Follow us on

ಬೆಂಗಳೂರು: ಕೊರೊನಾದಿಂದ ಬಂದ್‌ ಆಗಿದ್ದ ಶಾಲೆಗಳ ಬೀಗ (ಫೆ.22) ನಿನ್ನೆಯಿಂದ ಪೂರ್ಣ ಪ್ರಮಾಣದಲ್ಲಿ ಓಪನ್ ಆಗಿದೆ. 6ನೇ ತರಗತಿ ಮೇಲ್ಪಟ್ಟ ಎಲ್ಲಾ ತರಗತಿಗಳು ನಿನ್ನೆಯಿಂದ ಆರಂಭ ಮಾಡಲು ಸರ್ಕಾರ ಅನುಮತಿ ನೀಡಿದೆ. ಆದ್ರೆ ಎಲ್ಲಾ ಸರಿ ಹೋಯ್ತು ಎನ್ನುವಷ್ಟರಲ್ಲಿ ಸರ್ಕಾರಕ್ಕೆ ಖಾಸಗಿ ಶಾಲೆಗಳು ಶಾಕ್ ಕೊಟ್ಟಿವೆ. ಈಗಾಗಲೇ ಖಾಸಗಿ ಶಾಲೆಗಳಿಗೆ ಸರ್ಕಾರ ಶುಲ್ಕವನ್ನ ನಿಗದಿ ಮಾಡಿ, ಶೇ. 70 ರಷ್ಟು ಬೋಧನಾ ಶುಲ್ಕವನ್ನ ಮಾತ್ರ ತೆಗೆದುಕೊಳ್ಳಬೇಕು ಅಂತಾ ಆದೇಶ ಮಾಡಿದೆ. ಆದ್ರೆ, ಈ ಆದೇಶವನ್ನ ಖಾಸಗಿ ಶಿಕ್ಷಣ ಸಂಸ್ಥೆಗಳು ಒಪ್ಪದೆ, ಶುಲ್ಕ ಕಡಿತದ ಆದೇಶ ಪುನರ್ ಪರಿಶೀಲಿಸುವಂತೆ ಆಗ್ರಹಿಸಿದ್ವು. ಆದ್ರೆ, ಸರ್ಕಾರದಿಂದ ಯಾವುದೇ ರೆಸ್ಪಾನ್ಸ್ ಬಂದಿಲ್ಲ. ಹೀಗಾಗಿ ಮತ್ತೊಂದು ಹಂತದ ಬೃಹತ್ ಹೋರಾಟಕ್ಕೆ ಕ್ಯಾಮ್ಸ್, ಕುಸುಮಾ ಸೇರಿದಂತೆ ಒಟ್ಟು 11 ಖಾಸಗಿ ಶಿಕ್ಷಣ ಸಂಸ್ಥೆಗಳು ಮುಂದಾಗಿವೆ. ಇಂದು ಸಂಗೊಳ್ಳಿರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಱಲಿ ನಡೆಸಿ, ಆನಂತರ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಸಮಾವೇಶ ನಡೆಸಲು ಪ್ಲ್ಯಾನ್ ಮಾಡಿದೆ.

25 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗಿ?
ಇಂದು ಖಾಸಗಿ ಶಾಲೆಗಳ ಆನ್ ಲೈನ್ ಕ್ಲಾಸ್ ಬಂದ್ ಮಾಡಲಿದ್ದು, ಖಾಸಗಿ ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಸೇರಿದಂತೆ 25 ಸಾವಿರಕ್ಕೂ ಹೆಚ್ಚು ಜನರು ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

ಖಾಸಗಿ ಶಾಲೆಗಳ ಬೇಡಿಕೆಗಳೇನು?
ರಾಜ್ಯ ಸರ್ಕಾರ ಶೇ.30 ರಷ್ಟು ಶುಲ್ಕ ಕಡಿತದ ಆದೇಶವನ್ನು ಪುನರ್ ಪರಿಶೀಲನೆ‌ ಮಾಡಬೇಕು. ರಾಜ್ಯ ಸರ್ಕಾರ ಶೇ.30 ರಷ್ಟು ಕಡಿತ ಅಂತ ಹೇಳಿದೆ, ಆದ್ರೆ ಆದೇಶದ ಪ್ರಕಾರ ಶೇ.55 ರಿಂದ 65 ರಷ್ಟು ಶುಲ್ಕ ಕಡಿತವಾಗ್ತಿದೆ. ಹಾಗೇ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗೆ ಅನುದಾನ ನೀಡಬೇಕು ಹಾಗೇಕಟ್ಟಡ ಸುರಕ್ಷತೆ ಪ್ರಮಾಣ ಪತ್ರ ಹಳೆಯ ಶಾಲೆಗಳಿಗೆ ಕೈ ಬಿಡುವಂತೆ ಒತ್ತಾಯಿಸಿವೆ. 1 ರಿಂದ 5 ನೇ ತರಗತಿಯನ್ನ ಆದಷ್ಟು ಬೇಗ ಆರಂಭ ಮಾಡಬೇಕು. ಬಿಇಓ, ಡಿಡಿಪಿಐಗಳ ಭ್ರಷ್ಟಾಚಾರ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿವೆ.

ಒಟ್ಟಾರೆ, ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತೊಮ್ಮೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಇಂದು ರೆಡಿಯಾಗಿವೆ. ಆದ್ರೆ ಖಾಸಗಿ ರಣಕಹಳೆಗೆ ಸರ್ಕಾರ ಮಣಿಯುತ್ತಾ? ಶುಲ್ಕ ಕಡಿತದ ಆದೇಶ ವಾಪಾಸ್ ಪಡೆಯುತ್ತಾ? ಅಂತ ಕಾದು ನೋಡ್ಬೇಕಿದೆ.

ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳು ಸೋಮವಾರದಿಂದ ‌ಬಂದ್: ಪ್ರತಿಭಟನೆಗೆ ಮುಂದಾದ ಖಾಸಗಿ ಶಾಲಾ ಒಕ್ಕೂಟ