ಬೆಲೆ ಏರಿಕೆ ಮಧ್ಯೆ ಕರ್ನಾಟಕದ ಜನತೆಗೆ ಮತ್ತೊಂದು ಶಾಕ್: ನಾಳೆಯಿಂದ ಆಸ್ತಿ ನೋಂದಣಿ ಶುಲ್ಕ ದುಪ್ಪಟ್ಟು ​

Property Registration Fees Hike: ಕರ್ನಾಟಕ ಸರ್ಕಾರವು ಆಸ್ತಿ ನೋಂದಣಿ ಶುಲ್ಕವನ್ನು ದುಪ್ಪಟ್ಟು ಮಾಡಿದೆ. ಆ ಮೂಲಕ ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಮತ್ತೊಂದು ಆಘಾತ ನೀಡಿದೆ. ನಾಳೆಯಿಂದ ಅಂದರೆ ಆಗಸ್ಟ್​ 31ರಿಂದ ಪರಿಷ್ಕೃತ ಆಸ್ತಿ ನೋಂದಣಿ ಶುಲ್ಕ ಜಾರಿಗೆ ಬರಲಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಲೆ ಏರಿಕೆ ಮಧ್ಯೆ ಕರ್ನಾಟಕದ ಜನತೆಗೆ ಮತ್ತೊಂದು ಶಾಕ್: ನಾಳೆಯಿಂದ ಆಸ್ತಿ ನೋಂದಣಿ ಶುಲ್ಕ ದುಪ್ಪಟ್ಟು  ​
ಪ್ರಾತಿನಿಧಿಕ ಚಿತ್ರ

Updated on: Aug 30, 2025 | 8:47 AM

ಬೆಂಗಳೂರು, ಆಗಸ್ಟ್​ 30: ಹಾಲು, ಬಸ್ಸು, ವಿದ್ಯುತ್‌, ನೀರು, ಮೆಟ್ರೋ ದರ ಸೇರಿದಂತೆ ವಿವಿಧ ದರ ಹೆಚ್ಚಳ ಬೆನ್ನಲ್ಲೇ ಇದೀಗ ಆಸ್ತಿಗಳ ನೋಂದಣಿ ಶುಲ್ಕವನ್ನು ಹೆಚ್ಚಳ (property registration fees hike) ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಆ ಮೂಲಕ ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಆಸ್ತಿ ನೋಂದಣಿ ಶುಲ್ಕ ಶೇ.1ರಿಂದ ಶೇ.2ರಷ್ಟು ಏರಿಕೆ ಮಾಡಲಾಗಿದ್ದು, ಆ.31ರಿಂದ ಅನ್ವಯವಾಗಲಿದೆ.

ರಾಜ್ಯದಲ್ಲಿ ಈವರೆಗೂ ನಿವೇಶನ, ಭೂಮಿ, ಫ್ಲ್ಯಾಟ್,​ ಮನೆ ಸೇರಿದಂತೆ ಸ್ಥಿರಾಸ್ತಿ ಖರೀದಿ ವೇಳೆ ಶೇ.1ರಷ್ಟು ನೋಂದಣಿ ಶುಲ್ಕ ಹಾಗೂ ಶೇ.5.6ರಷ್ಟು ಮುದ್ರಾಂಕ ಶುಲ್ಕ ಸೇರಿ ಶೇ.6.6ರಷ್ಟು ಶುಲ್ಕ ಇತ್ತು. ಆದರೆ ಈಗ  ಏರಿಕೆಯಿಂದ ಒಟ್ಟು ಶೇ.7.6ರಷ್ಟು ಶುಲ್ಕ ಕಟ್ಟಬೇಕು. ಈ ಕುರಿತಾಗಿ ಕಂದಾಯ ಇಲಾಖೆ ಆದೇಶ ಹೊರಡಿಸಿದ್ದು ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಎಲ್ಲಾ ಉಪ ನೋಂದಣಾಧಿಕಾರಿಗಳಿಗೆ ಸೂಚನೆ ನೀಡಿದೆ.

ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ನಿಮ್ಮ ಪಂಚಾಯ್ತಿಯಲ್ಲೂ ಸಿಗುತ್ತೆ ಇ-ಖಾತಾ: ಇದರ ಉಪಯೋಗವೇನು?

ಇದನ್ನೂ ಓದಿ
ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ನಿಮ್ಮ ಪಂಚಾಯ್ತಿಯಲ್ಲೂ ಸಿಗುತ್ತೆ ಇ-ಖಾತಾ
ಸೈಟ್ ರಿಜಿಸ್ಟ್ರೇಷನ್ ಆಗದೇ ಪರದಾಡುತ್ತಿದ್ದವರಿಗೆ ಗುಡ್ ನ್ಯೂಸ್
ಆಸ್ತಿ ನೋಂದಣಿ ಸಂದರ್ಭದಲ್ಲಿ ಯಾರನ್ನು ಸಾಕ್ಷಿದಾರರನ್ನಾಗಿ ಮಾಡಬಹುದು?
ಖಾತಾ ಮಾಡಿಸಲು ಹೊಸ ವೆಬ್ ಸೈಟ್ ಬಿಡುಗಡೆ, ಬೇಕಾಗುವ ದಾಖಲೆಗಳೇನು?

ಸ್ವಾಧೀನ ಭೋಗ್ಯ ಪತ್ರ, ಸ್ಥಿರಾಸ್ತಿ ಶುದ್ಧ ಕ್ರಯ ಪತ್ರ ಸೇರಿದಂತೆ ವಿವಿಧ ಆಸ್ತಿ ಖರೀದಿ ನೋಂದಣಿಗೆ ಈ ಶುಲ್ಕ ಅನ್ವಯವಾಗಲಿದೆ. 2024-25 ಮತ್ತು 2025-26 ರ ಮೊದಲ ತ್ರೈಮಾಸಿಕದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದಾಯದ ಗುರಿಗಳನ್ನು ತಲುಪುವಲ್ಲಿ ತೀವ್ರ ಕುಸಿತ ಕಂಡು ಬಂದ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Property Registration: ಆಸ್ತಿ ನೋಂದಣಿ ಸಂದರ್ಭದಲ್ಲಿ ಯಾರನ್ನು ಸಾಕ್ಷಿದಾರರನ್ನಾಗಿ ಮಾಡಬಹುದು, ಕಾನೂನು ಏನು ಹೇಳುತ್ತೆ?

ಈ ಕುರಿತಾಗಿ ಅಧಿಕಾರಿಯೊಬ್ಬರು ಮಾತನಾಡಿದ್ದು, ಆಸ್ತಿ ನೋಂದಣಿ ಶುಲ್ಕ ದಕ್ಷಿಣ ಭಾರತದ ಎಲ್ಲಾ ನೆರೆಯ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಅತ್ಯಂತ ಕಡಿಮೆಯಾಗಿದೆ. ಉದಾಹರಣೆಗೆ, ತಮಿಳುನಾಡಿನಲ್ಲಿ ಶೇ 11 ಆಗಿದೆ  ಎಂದು ಅವರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:19 am, Sat, 30 August 25