AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment 2026: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶ; 253 ಪಿಎಸ್‌ಐ ಹುದ್ದೆಗೆ ನೇರ ನೇಮಕಾತಿ!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಿವಿಲ್ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (PSI) ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಿದೆ. ಒಟ್ಟು 600 ಹುದ್ದೆಗಳಿಗೆ ಅನುಮತಿ ದೊರೆತಿದ್ದು, ಮೊದಲ ಹಂತದಲ್ಲಿ 253 ಖಾಲಿ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲಾಗುವುದು. DG ಮತ್ತು IGP ಕಚೇರಿಯಿಂದ ಅಧಿಕೃತ ಆದೇಶ ಹೊರಬಿದ್ದಿದ್ದು, ಮುಂಬರುವ ದಿನಗಳಲ್ಲಿ ಖಾಲಿಯಾಗಲಿರುವ ಹುದ್ದೆಗಳನ್ನೂ ಸೇರಿಸಿ ಹೆಚ್ಚಿನ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಇದು PSI ಆಕಾಂಕ್ಷಿಗಳಿಗೆ ದೊಡ್ಡ ಉದ್ಯೋಗಾವಕಾಶವಾಗಿದೆ.

PSI Recruitment 2026: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶ; 253 ಪಿಎಸ್‌ಐ ಹುದ್ದೆಗೆ ನೇರ ನೇಮಕಾತಿ!
ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶ
ಅಕ್ಷತಾ ವರ್ಕಾಡಿ
|

Updated on:Jul 18, 2026 | 12:44 PM

Share

ಬೆಂಗಳೂರು: ಪೊಲೀಸ್ ಇಲಾಖೆಗೆ ಸೇರಬಯಸುವ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಪ್ರಮುಖ ಸಿಹಿ ಸುದ್ದಿ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಿವಿಲ್ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (PSI) ಹುದ್ದೆಗಳ ಭರ್ತಿಗೆ ಭರ್ಜರಿ ಚಾಲನೆ ನೀಡಿದೆ. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ತುಂಬಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಒಟ್ಟು 600 ಹುದ್ದೆಗಳಿಗೆ ಅನುಮತಿ, 253 ಹುದ್ದೆಗಳ ಭರ್ತಿ:

ರಾಜ್ಯ ಪೊಲೀಸ್ ಇಲಾಖೆಯಿಂದ ಒಟ್ಟು 600 ಪಿಎಸ್‌ಐ (ಸಿವಿಲ್) ಹುದ್ದೆಗಳ ನೇಮಕಾತಿಗೆ ಅಧಿಕೃತವಾಗಿ ಅನುಮತಿ ದೊರೆತಿದೆ. ಈ ಮಂಜೂರಾದ ಹುದ್ದೆಗಳ ಪೈಕಿ ಪ್ರಸ್ತುತ 253 ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಮೊದಲ ಹಂತದಲ್ಲಿ ನೇರ ನೇಮಕಾತಿ ಪ್ರಕ್ರಿಯೆಯ ಮೂಲಕ ಭರ್ತಿ ಮಾಡಲು ಇಲಾಖೆಯು ಮುಂದಾಗಿದೆ.

ಡಿಜಿ ಮತ್ತು ಐಜಿಪಿ ಕಚೇರಿಯಿಂದ ಅಧಿಕೃತ ಆದೇಶ:

ಈ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (DG & IGP) ಕಚೇರಿಯಿಂದ ಮಹತ್ವದ ಆದೇಶ ಪತ್ರವೊಂದು ಹೊರಬಿದ್ದಿದೆ. ಕೆಸಿಎಸ್ ನಿಯಮ-32ರ ಅಡಿಯಲ್ಲಿ ಸದ್ಯ ಸ್ವತಂತ್ರ ಪ್ರಭಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳನ್ನು ಪರಿಗಣನೆಗೆ ತೆಗೆದುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಉದ್ಯೋಗ 2026: 10ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗದ ಅವಕಾಶ

ಮುಂದಿನ ವರ್ಷದ ಹುದ್ದೆಗಳೂ ಸೇರ್ಪಡೆ:

ವರದಿಯ ಪ್ರಕಾರ, ಪ್ರಸ್ತುತ ಖಾಲಿ ಇರುವ ಹುದ್ದೆಗಳಷ್ಟೇ ಅಲ್ಲದೆ, ಮುಂದಿನ ವರ್ಷದಲ್ಲಿ ನೇರ ನೇಮಕಾತಿ ಅಡಿಯಲ್ಲಿ ಖಾಲಿಯಾಗಲಿರುವ ಹುದ್ದೆಗಳನ್ನೂ ಸಹ ಈಗಲೇ ಮುಂಚಿತವಾಗಿ ಗುರುತಿಸಲಾಗುತ್ತಿದೆ. ಆ ಹುದ್ದೆಗಳನ್ನೂ ಸಹ ಒಟ್ಟಿಗೆ ಸೇರಿಸಿಕೊಂಡು ಪಿಎಸ್‌ಐ (ಸಿವಿಲ್) ಹುದ್ದೆಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಲು ಜವಾಬ್ದಾರಿಯುತ ಅಧಿಕಾರಿಗಳಿಗೆ ಕಚೇರಿಯಿಂದ ಸೂಕ್ತ ಸೂಚನೆ ನೀಡಲಾಗಿದೆ. ಇಲಾಖೆಯ ಈ ಕ್ರಮದಿಂದಾಗಿ ಮುಂಬರುವ ದಿನಗಳಲ್ಲಿ ಪಿಎಸ್‌ಐ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಸಾವಿರಾರು ಅಭ್ಯರ್ಥಿಗಳಿಗೆ ದೊಡ್ಡ ಮಟ್ಟದ ಉದ್ಯೋಗಾವಕಾಶ ಸಿಗುವಂತಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:43 pm, Sat, 18 July 26

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ