AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಬಜೆಟ್​ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ರೂ ಮೀಸಲು: ಇದರಲ್ಲಿ ಕರ್ನಾಟಕಕ್ಕೆ ಬಂಪರ್​!

2025ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರೈಲ್ವೆ ಇಲಾಖೆಗೆ 7,564 ಕೋಟಿ ರೂ. ಅನುದಾನ ಮಂಜೂರಾಗಿದೆ. ಗದಗ-ವಾಡಿ, ತುಮಕೂರು-ಚಿತ್ರದುರ್ಗ-ದಾವಣಗೆರೆ ಸೇರಿದಂತೆ ಹಲವು ಪ್ರಮುಖ ರೈಲ್ವೆ ಯೋಜನೆಗಳಿಗೆ ಹಣ ಮೀಸಲಿಡಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲುಗಳ ಪರೀಕ್ಷಾರ್ಥ ಪ್ರಯೋಗಗಳು ನಡೆಯಲಿವೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಕೇಂದ್ರ ಬಜೆಟ್​ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ರೂ ಮೀಸಲು: ಇದರಲ್ಲಿ ಕರ್ನಾಟಕಕ್ಕೆ ಬಂಪರ್​!
ಕೇಂದ್ರ ಬಜೆಟ್​ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ಮೀಸಲು: ಇದರಲ್ಲಿ ಕರ್ನಾಟಕಕ್ಕೆ ಬಂಪರ್​..!
ಹರೀಶ್ ಜಿ.ಆರ್​.
| Edited By: |

Updated on:Feb 01, 2025 | 5:46 PM

Share

ಬೆಂಗಳೂರು, ಫೆಬ್ರವರಿ 01: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 3ನೇ ಅವಧಿಯ 2ನೇ ಬಜೆಟ್ (Budget) ಮಂಡನೆ ಮಾಡಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ ರೈಲ್ವೆ ಇಲಾಖೆಗೆ 2.60 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,564 ಕೋಟಿ ರೂ. ಮೀಸಲಿಡಲಾಗಿದೆ.

ಸಚಿವ ವಿ.ಸೋಮಣ್ಣ ಹೇಳಿದ್ದಿಷ್ಟು

ಈ ಬಗ್ಗೆ ಮಾತನಾಡಿರುವ ಸಚಿವ ವಿ.ಸೋಮಣ್ಣ ರೈಲ್ವೆ ಸುರಕ್ಷತೆಗೆ ಹೆಚ್ಚಿನ ಹಣ ಮೀಸಲಾಡಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲುಗಳ ಪರೀಕ್ಷಾರ್ಥ ಪ್ರಯೋಗ ನಡೆಯುತ್ತೆ. ಕರ್ನಾಟಕಕ್ಕೆ ಕಳೆದ ವರ್ಷ 7,559 ಕೋಟಿ ರೂ ಮೀಸಲಾಡಲಾಗಿತ್ತು. ಈ ಬಾರಿ 7,564 ಕೋಟಿ ರೂ. ಮೀಸಲಿಡಲಾಗಿದೆ. ಸಬ್ ಅರ್ಬನ್ ರೈಲಿಗೆ ಈ ಬಾರಿಯೂ 350 ಕೋಟಿ ರೂ. ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಯಾವೆಲ್ಲಾ ರೈಲ್ವೆ ಯೋಜನೆಗಳಿಗೆ ಅನುದಾನ ಹಂಚಿಕೆ

  • ಗದಗ-ವಾಡಿ ಮಾರ್ಗದ ಯೋಜನೆಗೆ 549.45 ಕೋಟಿ ರೂ.
  • ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆಗೆ 549.45 ಕೋಟಿ ರೂ.
  • ಬಾಗಲಕೋಟ-ಕುಡಚಿ ಮಾರ್ಗದ ಯೋಜನೆಗೆ 428.1 ಕೋಟಿ ರೂ.
  • ಹೊಸಪೇಟೆ-ಹುಬ್ಬಳ್ಳಿ-ಲೋಂಡಾ-ತಿನೈಘಾಟ್-ವಾಸ್ಕೋ ಡಿ ಗಾಮಾ (352.28 ಕಿ.ಮೀ) ರೈಲ್ವೆ ಮಾರ್ಗದ ಯೋಜನೆಗೆ 413.73 ಕೋಟಿ ರೂ.
  • ಹೊಟಗಿ-ಕುಡಗಿ-ಗದಗ ಮಾರ್ಗದ ಯೋಜನೆಗೆ 401.15 ಕೋಟಿ ರೂ.
  • ಬೆಂಗಳೂರು-ವೈಟ್‌ಫೀಲ್ಡ್-ಕೃಷ್ಣರಾಜಪುರಂ ಚತುಷ್ಪಥ ಪುಣೆ, ಮೀರಜ್-ಲೋಂಡಾ ಮಾರ್ಗದ ರೈಲ್ವೆ ಯೋಜನೆಗೆ 357.6 ಕೋಟಿ ರೂ.
  • ಬೈಯಪನಹಳ್ಳಿಯಿಂದ ಹೊಸೂರು ಮಾರ್ಗಕ್ಕೆ 223.5 ಕೋಟಿ ರೂ.
  • ಮುನಿರಾಬಾದ್-ಮಹಬೂಬ್ನರ ಮಾರ್ಗದ ಯೋಜನೆಗೆ 214.05 ಕೋಟಿ ರೂ.
  • ಯಶವಂತಪುರದಿಂದ ಚನ್ನಸಂದ್ರ ಮಾರ್ಗ ಯೋಜನೆಗೆ 178.8 ಕೋಟಿ ರೂ.
  • ತೋರಣಗಲ್ಲು-ರಂಜಿತ್‌ಪುರ ಮಾರ್ಗದ ಯೋಜನೆಗೆ 104.47 ಕೋಟಿ ರೂ.
  • ದೌಂಡ್-ಕಲಬುರಗಿ ಡಬ್ಲಿಂಗ್ ಮತ್ತು ಪುಣೆ-ಗುಂತಕಲ್ ವಿದ್ಯುತೀಕರಣಕ್ಕೆ ಒಟ್ಟು 641.37 ಕಿ.ಮೀ. ಮಾರ್ಗದ ಯೋಜನೆಗೆ 84.39 ಕೋಟಿ ರೂ.

ಇದನ್ನೂ ಓದಿ: ಕೇಂದ್ರ ಬಜೆಟ್​ನಲ್ಲಿ ಕರ್ನಾಟಕಕ್ಕೆ ಏನೇನು ಸಿಗುತ್ತೆ: ಮಾಹಿತಿ ಕೊಟ್ಟ ಬಿಜೆಪಿಗರು

  • ಕಡೂರು-ಚಿಕ್ಕಮಗಳೂರು-ಸಕಲೇಶಪುರ ಮಾರ್ಗಕ್ಕೆ 78.4 ಕೋಟಿ ರೂ.
  • ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಮಾರ್ಗಕ್ಕೆ 64.05 ಕೋಟಿ ರೂ.
  • ಕಲಬುರಗಿ-ಬೀದರ್ ಮಾರ್ಗದ ಯೋಜನೆಗೆ 38.43 ಕೋಟಿ ರೂ.
  • ಹುಬ್ಬಳ್ಳಿ-ಚಿಕ್ಕಜಾಜೂರು 27.714 ಕೋಟಿ ರೂ.
  • ಮಾರಿಕುಪ್ಪಂ-ಕುಪ್ಪಂ 25.62 ಕೋಟಿ ರೂ.
  • ಹಾಸನ-ಬೆಂಗಳೂರು ರೈಲ್ವೆ ಮಾರ್ಗದ ಯೋಜನೆಗೆ 15.54 ಕೋಟಿ ರೂ.
  • ರೇಣಿಗುಂಟಾ, ಗೂಟಿ, ವಾಡಿಯಲ್ಲಿ ಬೈಪಾಸ್- 15.198 ಕೋಟಿ‌ ರೂ.

  • ಅರಸೀಕೆರೆ-ತುಮಕೂರು ರೈಲ್ವೆ ಮಾರ್ಗದ ಯೋಜನೆಗೆ 13.41 ಕೋಟಿ‌ ರೂ.
  • ಕೆಂಗೇರಿ-ರಾಮನಗರ-ಮೈಸೂರು ಮಾರ್ಗದ ಯೋಜನೆಗೆ 10.728 ಕೋಟಿ ರೂ.
  • ಕಂಕನಾಡಿ-ಪಣಂಬೂರು ರೈಲ್ವೆ ಮಾರ್ಗದ ಯೋಜನೆಗೆ 8.94 ಕೋಟಿ‌ ರೂ.
  • ಧಾರವಾಡ-ಬೆಳಗಾವಿ ರೈಲ್ವೆ ಮಾರ್ಗದ ಯೋಜನೆಗೆ 8.54 ಕೋಟಿ ರೂ.
  • ಯಲಹಂಕ-ಪೆನುಕೊಂಡ ರೈಲ್ವೆ ಮಾರ್ಗದ ಯೋಜನೆಗೆ 4.47 ಕೋಟಿ ರೂ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:12 pm, Sat, 1 February 25

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್