TV9 Kannada Karnataka Karnataka Railway Projects Get Funding in Union Budget 2025, taja suddi
ಕೇಂದ್ರ ಬಜೆಟ್‌ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ರೂ ಮೀಸಲು: ಇದರಲ್ಲಿ ಕರ್ನಾಟಕಕ್ಕೆ ಬಂಪರ್!
2025ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರೈಲ್ವೆ ಇಲಾಖೆಗೆ 7,564 ಕೋಟಿ ರೂ. ಅನುದಾನ ಮಂಜೂರಾಗಿದೆ. ಗದಗ-ವಾಡಿ, ತುಮಕೂರು-ಚಿತ್ರದುರ್ಗ-ದಾವಣಗೆರೆ ಸೇರಿದಂತೆ ಹಲವು ಪ್ರಮುಖ ರೈಲ್ವೆ ಯೋಜನೆಗಳಿಗೆ ಹಣ ಮೀಸಲಿಡಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲುಗಳ ಪರೀಕ್ಷಾರ್ಥ ಪ್ರಯೋಗಗಳು ನಡೆಯಲಿವೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಕೇಂದ್ರ ಬಜೆಟ್‌ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ಮೀಸಲು: ಇದರಲ್ಲಿ ಕರ್ನಾಟಕಕ್ಕೆ ಬಂಪರ್..!
ಬೆಂಗಳೂರು, ಫೆಬ್ರವರಿ 01: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 3ನೇ ಅವಧಿಯ 2ನೇ ಬಜೆಟ್ (Budget) ಮಂಡನೆ ಮಾಡಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ರೈಲ್ವೆ ಇಲಾಖೆಗೆ 2.60 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,564 ಕೋಟಿ ರೂ. ಮೀಸಲಿಡಲಾಗಿದೆ.
ಸಚಿವ ವಿ.ಸೋಮಣ್ಣ ಹೇಳಿದ್ದಿಷ್ಟು
ಈ ಬಗ್ಗೆ ಮಾತನಾಡಿರುವ ಸಚಿವ ವಿ.ಸೋಮಣ್ಣ ರೈಲ್ವೆ ಸುರಕ್ಷತೆಗೆ ಹೆಚ್ಚಿನ ಹಣ ಮೀಸಲಾಡಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲುಗಳ ಪರೀಕ್ಷಾರ್ಥ ಪ್ರಯೋಗ ನಡೆಯುತ್ತೆ. ಕರ್ನಾಟಕಕ್ಕೆ ಕಳೆದ ವರ್ಷ 7,559 ಕೋಟಿ ರೂ ಮೀಸಲಾಡಲಾಗಿತ್ತು. ಈ ಬಾರಿ 7,564 ಕೋಟಿ ರೂ. ಮೀಸಲಿಡಲಾಗಿದೆ. ಸಬ್ ಅರ್ಬನ್ ರೈಲಿಗೆ ಈ ಬಾರಿಯೂ 350 ಕೋಟಿ ರೂ. ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಯಾವೆಲ್ಲಾ ರೈಲ್ವೆ ಯೋಜನೆಗಳಿಗೆ ಅನುದಾನ ಹಂಚಿಕೆ
ಗದಗ-ವಾಡಿ ಮಾರ್ಗದ ಯೋಜನೆಗೆ 549.45 ಕೋಟಿ ರೂ.
ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆಗೆ 549.45 ಕೋಟಿ ರೂ.
ಬಾಗಲಕೋಟ-ಕುಡಚಿ ಮಾರ್ಗದ ಯೋಜನೆಗೆ 428.1 ಕೋಟಿ ರೂ.
ಹೊಸಪೇಟೆ-ಹುಬ್ಬಳ್ಳಿ-ಲೋಂಡಾ-ತಿನೈಘಾಟ್-ವಾಸ್ಕೋ ಡಿ ಗಾಮಾ (352.28 ಕಿ.ಮೀ) ರೈಲ್ವೆ ಮಾರ್ಗದ ಯೋಜನೆಗೆ 413.73 ಕೋಟಿ ರೂ.
ಹೊಟಗಿ-ಕುಡಗಿ-ಗದಗ ಮಾರ್ಗದ ಯೋಜನೆಗೆ 401.15 ಕೋಟಿ ರೂ.
ಬೆಂಗಳೂರು-ವೈಟ್‌ಫೀಲ್ಡ್-ಕೃಷ್ಣರಾಜಪುರಂ ಚತುಷ್ಪಥ ಪುಣೆ, ಮೀರಜ್-ಲೋಂಡಾ ಮಾರ್ಗದ ರೈಲ್ವೆ ಯೋಜನೆಗೆ 357.6 ಕೋಟಿ ರೂ.
ಬೈಯಪನಹಳ್ಳಿಯಿಂದ ಹೊಸೂರು ಮಾರ್ಗಕ್ಕೆ 223.5 ಕೋಟಿ ರೂ.
ಮುನಿರಾಬಾದ್-ಮಹಬೂಬ್ನರ ಮಾರ್ಗದ ಯೋಜನೆಗೆ 214.05 ಕೋಟಿ ರೂ.
ಯಶವಂತಪುರದಿಂದ ಚನ್ನಸಂದ್ರ ಮಾರ್ಗ ಯೋಜನೆಗೆ 178.8 ಕೋಟಿ ರೂ.
ತೋರಣಗಲ್ಲು-ರಂಜಿತ್‌ಪುರ ಮಾರ್ಗದ ಯೋಜನೆಗೆ 104.47 ಕೋಟಿ ರೂ.
ದೌಂಡ್-ಕಲಬುರಗಿ ಡಬ್ಲಿಂಗ್ ಮತ್ತು ಪುಣೆ-ಗುಂತಕಲ್ ವಿದ್ಯುತೀಕರಣಕ್ಕೆ ಒಟ್ಟು 641.37 ಕಿ.ಮೀ. ಮಾರ್ಗದ ಯೋಜನೆಗೆ 84.39 ಕೋಟಿ ರೂ.
ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ.
ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019 ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.