AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್, ರೆಸ್ಟೋರೆಂಟ್ ಆಯ್ತು, ಈಗ ಕರ್ನಾಟಕದ ರೈಲ್ವೆ ಆಹಾರ ಮಳಿಗೆಗಳ ಮೇಲೆ ದಾಳಿ

Rail Food Quality Check: ಕರ್ನಾಟಕದ 36 ರೈಲು ನಿಲ್ದಾಣಗಳಲ್ಲಿನ 112 ಆಹಾರ ಮಳಿಗೆಗಳಲ್ಲಿ ಇಂದು ಆಹಾರ ಸುರಕ್ಷತಾ ಅಧಿಕಾರಿಗಳು ವಿಶೇಷ ತಪಾಸಣೆ ಮಾಡಿದರು. ಈ ವೇಳೆ ಗಂಭೀರ ಲೋಪಗಳು ಪತ್ತೆಯಾಗಿದ್ದು, ಅಧಿಕಾರಿಗಳೇ ಶಾಕ್​ ಆಗಿದ್ದಾರೆ. ಸದ್ಯ ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮಕ್ಕೆ ಸಿದ್ಧತೆ ನಡೆದಿದೆ.

ಹೋಟೆಲ್, ರೆಸ್ಟೋರೆಂಟ್ ಆಯ್ತು, ಈಗ ಕರ್ನಾಟಕದ ರೈಲ್ವೆ ಆಹಾರ ಮಳಿಗೆಗಳ ಮೇಲೆ ದಾಳಿ
ರೈಲು ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆImage Credit source: tv9 kannada
ವಿನಯ್​ ಕಾಶಪ್ಪನವರ್​
| Edited By: |

Updated on:Aug 20, 2026 | 3:22 PM

Share

ಮುಖ್ಯಾಂಶಗಳು

  • ರಾಜ್ಯದ ರೈಲು ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ವಿಶೇಷ ತಪಾಸಣೆ
  • ಹಳದಿ ಬಣ್ಣ ಬಳಕೆ ಸೇರಿದಂತೆ ಅವಧಿ ಮೀರಿದ ಆಹಾರ ಪತ್ತೆ
  • ರೈಲ್ವೆ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ವರದಿ ಸಲ್ಲಿಕೆ

ಬೆಂಗಳೂರು, ಆಗಸ್ಟ್​ 20: ಬೆಂಗಳೂರಿನಲ್ಲಿ (Bangaluru) ಹೋಟೆಲ್​, ರೆಸ್ಟೋರೆಂಟ್​​ಗಳ ಕಿಚನ್ ಜಾಲಾಡುತ್ತಿರುವ ಆಹಾರ ಇಲಾಖೆ ಅಧಿಕಾರಿಗಳು ಇಂದು ಮತ್ತೊಂದು ಬೇಟೆ ಆಡಿದ್ದಾರೆ. ಮೈಸೂರು, ಹುಬ್ಬಳ್ಳಿ, ಮಂಗಳೂರು ಸೇರಿದಂತೆ ರಾಜ್ಯದ 36 ರೈಲು ನಿಲ್ದಾಣಗಳು ಮತ್ತು 112 ಆಹಾರ ಮಳಿಗೆಗಳಲ್ಲಿ ವಿಶೇಷ ತಪಾಸಣೆ (Rail Food Safety) ಮಾಡಿದರು. ದಾಳಿ ವೇಳೆ ಹಲವು ಕಡೆ ಕಳಪೆ ಗುಣಮಟ್ಟ ಹಾಗೂ ಅನೈರ್ಮಲ್ಯ ಬಯಲಾಗಿದ್ದು, ನಿಯಮ ಉಲ್ಲಂಘಿಸಿದ ಆಹಾರ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದು, ರೈಲ್ವೆ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ.

36 ನಿಲ್ದಾಣಗಳು, 112 ಮಳಿಗೆಗಳ ಮೇಲೆ ದಾಳಿ

ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಮಂಗಳೂರು ಸೇರಿದಂತೆ ರಾಜ್ಯದ ಒಟ್ಟು 36 ಪ್ರಮುಖ ರೈಲು ನಿಲ್ದಾಣಗಳಲ್ಲಿರುವ 112 ಆಹಾರ ಸಂಸ್ಥೆಗಳು, ರೈಲ್ವೆ ಪ್ಯಾಂಟ್ರಿ, ಕ್ಯಾಂಟೀನ್ ಮತ್ತು ಹೋಟೆಲ್‌ಗಳನ್ನು ಅಧಿಕಾರಿಗಳ ತಂಡ ಏಕಕಾಲದಲ್ಲಿ ಜಾಲಾಡಿದೆ. ಆಹಾರದ ಗುಣಮಟ್ಟ, ಸುರಕ್ಷತೆ, ಸಂಗ್ರಹಣೆ, ಲೇಬಲಿಂಗ್ ಮತ್ತು ನೋಂದಣಿ ಪರವಾನಗಿಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ವೇಳೆ ನಿಯಮಗಳ ಸ್ಪಷ್ಟ ಉಲ್ಲಂಘನೆ ಆಗಿರುವುದು ಕಂಡುಬಂದಿದೆ.

ಪ್ಲಾಸ್ಟಿಕ್ ಬಳಸಿ ಇಡ್ಲಿ ತಯಾರಿಕೆ; ನಿಷೇಧಿತ ಬಣ್ಣ ಬಳಕೆ ಪತ್ತೆ

ಆಹಾರ ಇಲಾಖೆ ಅಧಿಕಾರಿಗಳು ದಾಳಿ ವೇಳೆ ಬಯಲಾದ ವಿಚಾರ ಪ್ರಯಾಣಿಕರನ್ನು ಬೆಚ್ಚಿಬೀಳಿಸುವಂತಿದೆ. ಮೈಸೂರು ರೈಲು ನಿಲ್ದಾಣದ ಅಡುಗೆಮನೆಯಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಿ ಇಡ್ಲಿ ತಯಾರಿಸುತ್ತಿರುವುದು ಹಾಗೂ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಇಟ್ಟುಕೊಂಡಿರುವುದು ಪತ್ತೆಯಾಗಿದೆ. ಆಹಾರಕ್ಕೆ ಯೋಗ್ಯವಲ್ಲದ ಪ್ಲಾಸ್ಟಿಕ್ ಬಕೆಟ್‌ಗಳಲ್ಲಿ ಚಟ್ನಿ ಸಂಗ್ರಹಿಸಿಡುವುದು, ಸಮೋಸಾಗಳನ್ನು ರದ್ದಿ ಕಾರ್ಡ್‌ಬೋರ್ಡ್ ಬಾಕ್ಸ್‌ಗಳಲ್ಲಿ ಹಾಕುವುದು ಮತ್ತು ತಯಾರಿಸಿದ ತಿನಿಸುಗಳನ್ನು ನೇರವಾಗಿ ಹಳೆಯ ದಿನಪತ್ರಿಕೆಗಳ ಮೇಲೆ ಹರಡಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಕಳಪೆ ನಂದಿನಿ ಪಶು ಆಹಾರದಿಂದ ಹಸುಗಳ ಸಾವಾಯ್ತಾ? ಕಳಪೆ ಗುಣಮಟ್ಟದ ಬಗ್ಗೆ ಗಂಭೀರ ಆರೋಪ

ಅಷ್ಟೇ ಅಲ್ಲದೆ ಜಿಲೇಬಿಯಲ್ಲಿ ಅಪಾಯಕಾರಿ ಹಳದಿ ಬಣ್ಣ, ಖೋವಾ ಪೇಡಾದಲ್ಲಿ ನಿಷೇಧಿತ ಗುಲಾಬಿ ಬಣ್ಣ ಬಳಸಿರುವುದು ಕಂಡುಬಂದಿದೆ. ಹಾವೇರಿ ನಿಲ್ದಾಣದಲ್ಲಿ ಅವಧಿ ಮೀರಿದ ನಂದಿನಿ ಮೊಸರು ಹಾಗೂ ದೋಡ್ಲಾ ಹಾಲಿನ ಪ್ಯಾಕೆಟ್‌ಗಳು ಸಿಕ್ಕಿದ್ದರೆ, ಬೆಂಗಳೂರಿನ ಕೆ.ಆರ್. ಪುರಂ ನಿಲ್ದಾಣದ ಮಳಿಗೆಗಳಲ್ಲಿ ಕೊಳೆತು ಶಿಲೀಂಧ್ರ (ಫಂಗಸ್) ಹಿಡಿದ ಈರುಳ್ಳಿ ಮತ್ತು ತರಕಾರಿಗಳನ್ನು ಅಡುಗೆಗೆ ಬಳಸುತ್ತಿರುವುದು ಪತ್ತೆಯಾಗಿದೆ.

ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಕ್ಲೀನ್ ಚಿಟ್

ಸಾಮಾನ್ಯ ನಿಲ್ದಾಣಗಳ ಕ್ಯಾಂಟೀನ್‌ಗಳಲ್ಲಿ ಇಷ್ಟೆಲ್ಲಾ ಅವಾಂತರಗಳು ಕಂಡುಬಂದಿದ್ದು, ಇನ್ನು ಮಂಗಳೂರು–ಕೇರಳ ಮತ್ತು ಹುಬ್ಬಳ್ಳಿ–ಬೆಂಗಳೂರು ಮಾರ್ಗದ ವಂದೇ ಭಾರತ್ ರೈಲುಗಳಲ್ಲಿ ಆಹಾರ ಪೂರೈಕೆ, ಸ್ವಚ್ಛತೆ ಹಾಗೂ ನಿರ್ವಹಣೆ ಅತ್ಯುತ್ತಮ ಮಟ್ಟದಲ್ಲಿದ್ದು ಅಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ: ಚಿಕನ್ ಫೆರಿ ಫೆರಿಯಲ್ಲಿ ಕೆಟ್ಟ ವಾಸನೆ: ದಾಳಿ ವೇಳೆ ಮಂಗಳೂರಿನ KFCಯಲ್ಲಿ ಹಳೇ ಮಾಂಸ ಪತ್ತೆ!

ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುವ ಇಂತಹ ಆಹಾರ ಮಳಿಗೆಗಳ ವಿರುದ್ಧ ಆಹಾರ ಸುರಕ್ಷತಾ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸಿದ್ಧತೆ ನಡೆದಿದೆ. ಸಂಗ್ರಹಿಸಲಾದ ಶಂಕಿತ ಆಹಾರದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:20 pm, Thu, 20 August 26

Follow Us
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!