AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರೈಲ್ವೆ ಪ್ರಯಾಣಿಕರಿಗೆ ಗುಡ್‌ ನ್ಯೂಸ್! ಯಶವಂತಪುರ-ತಾಳಗುಪ್ಪ ಸೇರಿದಂತೆ ಇನ್ನು ಮುಂದೆ 19 ವಿಶೇಷ ರೈಲುಗಳ ಖಾಯಂ ಸೇವೆ

ರಾಜ್ಯದ ರೈಲು ಪ್ರಯಾಣಿಕರಿಗೆ ರೈಲ್ವೇ ಬೋರ್ಡ್​ ಸಂತಸದ ಸುದ್ದಿ ನೀಡಿದೆ. ಕರ್ನಾಟಕದಲ್ಲಿ ಸಂಚರಿಸುತ್ತಿದ್ದ 19 ವಿಶೇಷ ರೈಲುಗಳನ್ನು ರೈಲ್ವೇ ಮಂಡಳಿಖಾಯಂ ಸೇವೆಗೆ ಪರಿವರ್ತಿಸಿದೆ. ಅಷ್ಟೇ ಅಲ್ಲದೆ ಟಿಕೆಟ್ ದರದಲ್ಲಿಯೂ ಸಹ ಗಣನೀಯ ಇಳಿಕೆ ಕಂಡುಬಂದಿದೆ. ಯಶವಂತಪುರ-ತಾಳಗುಪ್ಪ ಸೇರಿದಂತೆ 6 ವಿಶೇಷ ರೈಲು ಸೇವೆಗಳೂ ಇನ್ನು ಮುಂದೆ ಖಾಯಂ ಆಗಲಿವೆ.

ಕರ್ನಾಟಕ ರೈಲ್ವೆ ಪ್ರಯಾಣಿಕರಿಗೆ ಗುಡ್‌ ನ್ಯೂಸ್! ಯಶವಂತಪುರ-ತಾಳಗುಪ್ಪ ಸೇರಿದಂತೆ ಇನ್ನು ಮುಂದೆ 19 ವಿಶೇಷ ರೈಲುಗಳ ಖಾಯಂ ಸೇವೆ
ಯಶವಂತಪುರ-ತಾಳಗುಪ್ಪ ಸೇರಿದಂತೆ 19 ವಿಶೇಷ ರೈಲುಗಳು ಇನ್ನು ಮುಂದೆ ಖಾಯಂ
ಭಾವನಾ ಹೆಗಡೆ
|

Updated on:Mar 24, 2026 | 12:39 PM

Share

ಬೆಂಗಳೂರು, ಮಾರ್ಚ್​ 24: ರಾಜ್ಯದ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ದೊರೆತಿದೆ. ಪ್ರಯಾಣಿಕರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡ ರೈಲ್ವೇ ಮಂಡಳಿ (Railway Board) ಕರ್ನಾಟಕದಲ್ಲಿ ಸಂಚರಿಸುತ್ತಿದ್ದ 19 ವಿಶೇಷ ರೈಲುಗಳನ್ನು ಖಾಯಂ ಸೇವೆಗೆ ಪರಿವರ್ತಿಸಿದೆ. ಇದರಲ್ಲಿ 6 ಎಕ್ಸ್‌ಪ್ರೆಸ್, 9 ಮೆಮು/ಡೆಮು ಹಾಗೂ 4 ಪ್ಯಾಸೆಂಜರ್ ರೈಲುಗಳು ಸೇರಿವೆ. ಈ ನಿರ್ಧಾರದಿಂದ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ 15ಕ್ಕೂ ಹೆಚ್ಚು ಜಿಲ್ಲೆಗಳ ಜನರಿಗೆ ಪ್ರಯಾಣ ಸೌಲಭ್ಯ ಹೆಚ್ಚಾಗಲಿದೆ.

ವಿಶೇಷ ರೈಲುಗಳಾಗಿ ಓಡುತ್ತಿದ್ದ ಸೇವೆಗಳು ಸಾಮಾನ್ಯವಾಗಿ ಹೆಚ್ಚಿನ ದರ ಹಾಗೂ ಅನಿಶ್ಚಿತ ವೇಳಾಪಟ್ಟಿಯಿಂದ ಪ್ರಯಾಣಿಕರಿಗೆ ತೊಂದರೆ ಉಂಟುಮಾಡುತ್ತಿದ್ದವು. ಈಗ ಖಾಯಂ ಸೇವೆಗೆ ಪರಿವರ್ತನೆಯಾದ ಹಿನ್ನೆಲೆಯಲ್ಲಿ ಟಿಕೆಟ್ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಲೀಪರ್ ಕೋಚ್​ಗಳಲ್ಲಿ ಸುಮಾರು ಶೇ30 ರವರೆಗೆ ಮತ್ತು ಸಾಮಾನ್ಯ ಟಿಕೆಟ್‌ಗಳಲ್ಲಿ ಶೇ 10-15ರವರೆಗೆ ದರ ಕಡಿಮೆಯಾಗಲಿದೆ.

ಈ 6 ವಿಶೇಷ ರೈಲುಗಳು ಖಾಯಂ

  • ಮೈಸೂರು – ಅಜ್ಮೀರ್‌ ಎಕ್ಸ್‌ಪ್ರೆಸ್‌ ( ರೈ.ಸಂ 16281/16282) ವಾರಕ್ಕೊಮ್ಮೆ ಸಂಚರಿಸಲಿದೆ
  • ಬೆಂಗಳೂರು ದಂಡು – ಕಲಬುರಗಿ ಎಕ್ಸ್‌ಪ್ರೆಸ್‌ (ರೈ.ಸಂ 16563/16564) ವಾರಕ್ಕೊಮ್ಮೆ ಸಂಚರಿಸಲಿದೆ
  • SMVT ಬೆಂಗಳೂರು – ಬೀದರ್‌ ಎಕ್ಸ್‌ಪ್ರೆಸ್‌ (ರೈ.ಸಂ 16559/16560) ವಾರಕ್ಕೊಮ್ಮೆ ಸಂಚರಿಸಲಿದೆ
  • ಯಶವಂತಪುರ – ತಾಳಗುಪ್ಪ ಎಕ್ಸ್‌ಪ್ರೆಸ್ (ರೈ.ಸಂ16555/16556) ವಾರಕ್ಕೊಮ್ಮೆ ಸಂಚರಿಸಲಿದೆ
  • ಹುಬ್ಬಳ್ಳಿ – ಯೋಗನಗರಿ ರಿಷಿಕೇಶ ಎಕ್ಸ್‌ಪ್ರೆಸ್ (ರೈ.ಸಂ17363/17364) ವಾರಕ್ಕೊಮ್ಮೆ ಸಂಚರಿಸಲಿದೆ
  • ಮಡಗಾಂವ್ – ಕಾರವಾರ ಎಕ್ಸ್‌ಪ್ರೆಸ್ (ರೈ.ಸಂ 10109/10110)

9 ಮೆಮು, ಡೆಮು ರೈಲುಗಳ ಓಡಾಟ

  • ಬೆಂಗಳೂರು – ಹೊಸೂರು ಮೆಮು (ರೈ.ಸಂ 66595/96) ಪ್ರತಿದಿನ ಸಂಚರಿಸಲಿದೆ
  • ಹುಬ್ಬಳ್ಳಿ – ವಿಜಯಪುರ ಮೆಮು ( ರೈ.ಸಂ66501/02) ಪ್ರತಿದಿನ ಸಂಚರಿಸಲಿದೆ
  • ಬೆಂಗಳೂರು – ಅಶೋಕಪುರಂ ಮೆಮು (ರೈ.ಸಂ66597/98) ಪ್ರತಿದಿನ ಸಂಚರಿಸಲಿದೆ
  • ಬೆಂಗಳೂರು – ಅಶೋಕಪುರಂ ಮೆಮು (ರೈ.ಸಂ 06213/14) ವಾರಕ್ಕೆ 3 ಬಾರಿ ಸಂಚರಿಸಲಿದೆ
  • ಬಂಗಾರಪೇಟೆ – SMVT ಬೆಂಗಳೂರು ಮೆಮು (ರೈ.ಸಂ 66537/38) ಪ್ರತಿದಿನ ಸಂಚರಿಸಲಿದೆ
  • ಹೊಸಪೇಟೆ – ಹುಬ್ಬಳ್ಳಿ ಡೆಮು (ರೈ.ಸಂ76507/08) ವಾರಕ್ಕೊಮ್ಮೆ ಸಂಚರಿಸಲಿದೆ
  • ಬಳ್ಳಾರಿ – ದಾವಣಗೆರೆ ಡೆಮು (ರೈ.ಸಂ76509/10)ವಾರಕ್ಕೆ 6 ದಿನ ಸಂಚರಿಸಲಿದೆ
  • ಬೆಂಗಳೂರು – ಹಾಸನ ಡೆಮು (ರೈ.ಸಂ66525/26)ವಾರಕ್ಕೆ 6 ದಿನ ಸಂಚರಿಸಲಿದೆ
  • ಬಳ್ಳಾರಿ – ಹೊಸಪೇಟೆ ಡೆಮು (ರೈ.ಸಂ07397/98) ವಾರಕ್ಕೆ 6 ದಿನ ಸಂಚರಿಸಲಿದೆ

ಇದರ ಜೊತೆಗೆ ಬೆಂಗಳೂರು-ಚನ್ನಪಟ್ಟಣ, ಮೈಸೂರು-ಎಸ್‌ಎಂವಿಟಿ ಬೆಂಗಳೂರು, ಯಶವಂತಪುರ-ಹಿಂದೂಪುರ ಹಾಗೂ ಹುಬ್ಬಳ್ಳಿ-ವಿಜಯಪುರ ಪ್ಯಾಸೆಂಜರ್ ರೈಲುಗಳು ಕೂಡ ಖಾಯಂಗೊಂಡಿವೆ. ಈ ಕ್ರಮದಿಂದ ಪ್ರಯಾಣ ಯೋಜನೆ ಸುಲಭವಾಗಿದ್ದು, ಮುಂಗಡ ಕಾಯ್ದಿರಿಸುವಿಕೆ ಮಾಡಲು ಅನುಕೂಲವಾಗಿದೆ. ಒಟ್ಟಾರೆ, ರೈಲ್ವೇ ಮಂಡಳಿಯ ಈ ತೀರ್ಮಾನ ರಾಜ್ಯದ ಸಾವಿರಾರು ಪ್ರಯಾಣಿಕರಿಗೆ ದೊಡ್ಡ ಮಟ್ಟದ ನೆರವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:16 pm, Tue, 24 March 26

Follow Us
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ