AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರ್ನಾಟಕದಲ್ಲಿ 5 ದಿನ ವ್ಯಾಪಕ ಮಳೆ, ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

Karnataka Monsoon Rain: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಮುಂದಿನ 4 ರಿಂದ 5 ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲಿಯವರೆಗೆ ಎಲ್ಲೆಲ್ಲಿ ಮಳೆಯಾಗಲಿದೆ? ಯಾಬ ಜಿಲ್ಲೆಗಳಿಗೆ ಯಾವ ಅಲರ್ಟ್ ನೀಡಲಾಗಿದೆ ಎನ್ನುವ ವರದಿ ಇಲ್ಲಿದೆ.

Karnataka Weather Forecast: ಕರ್ನಾಟಕದಲ್ಲಿ 5 ದಿನ ವ್ಯಾಪಕ ಮಳೆ, ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ
Karnataka Rain
ರಮೇಶ್ ಬಿ. ಜವಳಗೇರಾ
|

Updated on: Jun 11, 2026 | 6:04 PM

Share

ಬೆಂಗಳೂರು, (ಜುನ್ 11): ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಅಂದರೆ ಇಂದಿನಿಂದ ಜೂನ್ 15ರವರೆಗೆ ವ್ಯಾಪಕ ಮಳೆಯಾಗುವ (Monsoon Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ (South) ಜಾಗೂ ಉತ್ತರ ಒಳನಾಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ  ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಪ್ರಮುಖ ಜಿಲ್ಲೆಗಳ ಹವಾಮಾನ ಮುನ್ಸೂಚನೆ

ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಕರ್ನಾಟಕ: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಡಲ ತೀರದಲ್ಲಿ ಗಂಟೆಗೆ 30-40 ಕಿ.ಮೀ ಗಾಳಿಯ ವೇಗ ಇರಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದ ತುಮಕೂರು, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ ಜಿಲ್ಲೆಗಳ ಲ್ಲಿ ಭಾರಿ ಮಳೆ ಹಾಗೂ ನಿರಂತರ ಗಾಳಿ (ಗಂಟೆಗೆ 30-40 ಕಿ.ಮೀ) ಬೀಸುವ ಸಾಧ್ಯತೆಯಿದೆ. ಇನ್ನು ಬಳ್ಳಾರಿ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆ ಹಾಗೂ ನಿರಂತರ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಅಲ್ಲೊಂದು ಇಲ್ಲೊಂದು ಕಡೆಗಳಲ್ಲಿ ಗಂಟೆಗೆ 30ರಿಂದ40 ಕಿ.ಮೀ. ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!