ಕರ್ನಾಟಕ ಹವಾಮಾನ: 8 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್, ಭಾರಿ ಮಳೆ ಮುನ್ಸೂಚನೆ

Karnataka Rain, IMD Forecast for Today: ಕರ್ನಾಟಕದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂಗಾರು ಚುರುಕಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ರಾಜ್ಯದ 8 ಜಿಲ್ಲೆಗಳಿಗೆ ಜುಲೈ 10 ರಂದು ಭಾರಿ ಮಳೆಯ ಮುನ್ಸೂಚನೆ ನೀಡಿ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಕರ್ನಾಟಕ ಹವಾಮಾನ: 8 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್, ಭಾರಿ ಮಳೆ ಮುನ್ಸೂಚನೆ
ಭಾರಿ ಮಳೆ ಹಾಗೂ ಪ್ರವಾಹದಿಂದ ಬೆಳಗಾವಿ ಜಿಲ್ಲೆಯ ಕುಡಚಿ ಸೇತುವೆ ಜಲಾವೃತಗೊಂಡಿರುವುದು
Image Credit source: tv9

Updated on: Jul 10, 2026 | 6:58 AM

ಮುಖ್ಯಾಂಶಗಳು

  • 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
  • 64.5 ರಿಂದ 115.4 ಮಿ.ಮೀ ಮಳೆ ಮುನ್ಸೂಚನೆ
  • ಸಾರ್ವಜನಿಕರು ಅಗತ್ಯ ಜಾಗ್ರತೆ ವಹಿಸಲು ಐಎಂಡಿ ಕರೆ

ಬೆಂಗಳೂರು, ಜುಲೈ 10: ಕರ್ನಾಟಕದ ಪಶ್ಚಿಮ ಘಟ್ಟದ ಸಾಲುಗಳು ಹಾಗೂ ಕರಾವಳಿ ತೀರ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಳ್ಳುತ್ತಿದೆ. ಜುಲೈ 10 ರಂದು ರಾಜ್ಯದ 8 ಜಿಲ್ಲೆಗಳ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ 64.5 ಮಿ.ಮೀ ನಿಂದ 115.4 ಮಿ.ಮೀ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಕೂಡ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಿದೆ. ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಪಾಲಿಸಲು ಕೋರಲಾಗಿದೆ.

ಎಲ್ಲೆಲ್ಲಿ ಮಳೆಯಾಗಲಿದೆ?

ಐಎಂಡಿ ದತ್ತಾಂಶಗಳ ಪ್ರಕಾರ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿರಲಿದೆ. ಈ ಭಾಗದ ನದಿ ತೀರದ ನಿವಾಸಿಗಳು ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ನೈಸರ್ಗಿಕ ವಿಕೋಪ ಕೇಂದ್ರವು ಈಗಾಗಲೇ ಎಚ್ಚರಿಕೆ ಸಂದೇಶ ರವಾನಿಸಿದೆ.

ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಕ್ಸ್ ಸಂದೇಶ

ಐಎಂಡಿ ಸಲಹೆ ಸೂಚನೆಗಳೇನು?

ಮಳೆಯ ತೀವ್ರತೆಯ ಜೊತೆಗೆ ಕರಾವಳಿ ತೀರ ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಜುಲೈ 10 ರಂದು ಸಮುದ್ರಕ್ಕೆ ಇಳಿಯದಂತೆ ಐಎಂಡಿ ಸೂಚನೆ ನೀಡಿದೆ.

ಇದನ್ನೂ ಓದಿ: ಭಾರೀ ಮಳೆ: 85.66 ಅಡಿ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ

ಅಲ್ಲದೆ, ಘಾಟ್ ರಸ್ತೆಗಳಲ್ಲಿ ಸಂಚರಿಸುವ ವಾಹನ ಸವಾರರು ಕೂಡ ಮಂಜು ಮುಸುಕಿದ ವಾತಾವರಣ ಮತ್ತು ಮಳೆಯಿಂದಾಗಿ ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us